Breaking News

ನಂದಿಬಾವಿಯಲ್ಲಿ ಮನೆ ಕುಸಿದು ಹಾನಿ ಸ್ಥಳಕ್ಕೆ ಅಧಿಕಾರಿಗಳು ಜನಪ್ರತಿನಿಧಿಗಳು ಭೇಟಿ ಪರಿಶೀಲನೆ.


ಪ್ರತಿಧ್ವನಿ,ಯಲ್ಲಾಪುರ : ತಾಲೂಕಿನ ಉಮ್ಮಚ್ಗಿ ಪಂಚಾಯತ ವ್ಯಾಪ್ತಿಯ ತಾರೆಹಳ್ಳಿ ಗ್ರಾಮದಲ್ಲಿ ಮನೆ ಕುಸಿದು ಅಪಾರ ಪ್ರಮಾಣದ ಹಾನಿಯಾದ ಘಟನೆ ವರದಿಯಾಗಿರುತ್ತದೆ. ನಂದಿಬಾವಿಯ ಗೀತಾ ಪುಟ್ಟ ಸಿದ್ದಿ ಎಂಬುವರ ವಾಸದ ಮನೆ ಕಳೆದ ರಾತ್ರಿ ಸುರಿದ ಮಳೆಗೆ ಗೋಡೆ ಕುಸಿದು ಮನೆಯ ಬಹುತೇಕ ಭಾಗ ನೆಲಸಮವಾಗುವ ಹಂತದಲ್ಲಿದೆ.
ಮನೆ ಬೀಳಬಹುದೆಂಬ ಸಂಗತಿ ಕುಟುಂಬದವರ ಗಮನಕ್ಕೆ ಮೊದಲೇ ಬಂದಿರುವುದರಿಂದ ಪಕ್ಕದಲ್ಲಿದ್ದ ತಮ್ಮದೇ ಶೆಡ್‌ನಲ್ಲಿ ಉಳಿದು ರಾತ್ರಿ ಬಚಾವಾಗಿರುತ್ತಾರೆ.


ಸುದ್ದಿ ತಿಳಿದ ತಕ್ಷಣ ಘಟನೆ ನಡೆದ ಸ್ಥಳಕ್ಕೆ ಉಮ್ಮಚ್ಗಿ ಗ್ರಾಮ ಪಂಚಾಯತ ಸದಸ್ಯರಾದ ಖೈತಾನ್ ಡಿಸೋಜ, ಕುಪ್ಪಯ್ಯ ಪೂಜಾರಿ, ಅಶೋಕ ಪೂಜಾರಿ, ಸರಸ್ವತಿ ಪಟಗಾರ, ಸಾಮಾಜಿಕ ಕಾರ್ಯಕರ್ತ ನಾರಾಯಣ ಸಿದ್ದಿ, ವಿಲೇಜ್ ಅಕೌಂಟೆಂಟ್ ಸವಿತಾ ಭಜಂತ್ರಿ ಮೊದಲಾದವರು ಹೋಗಿ ಪರಿಶೀಲನೆ ನಡೆಸಿರುತ್ತಾರೆ.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ವೈ.ಟಿ.ಎಸ್‌.ಎಸ್ ನಿಂದ ರಾಧಾ ಕೃಷ್ಣ ವೇಷ ಸ್ಪರ್ಧೆ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ ವರದಿ, ಯಲ್ಲಾಪುರ : ಸ್ಥಳೀಯ ವೈ.ಟಿ.ಎಸ್.ಎಸ್ …

Leave a Reply

Your email address will not be published. Required fields are marked *