Breaking News

ಬಸ್ ಪಲ್ಟಿ – ಚಾಲಕ ಸ್ಥಳದಲ್ಲೆ ಸಾವು 20 ಕ್ಕು ಹೆಚ್ಚು ಪ್ರಯಾಣಿಕರಿಗೆ ಗಾಯ ಯಲ್ಲಾಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ


ಯಲ್ಲಾಪುರ,ಯಲ್ಲಾಪುರ : ಪಟ್ಟಣದ ಹೊರವಲಯದ ಹುಬ್ಬಳ್ಳಿ ಮಾರ್ಗದಲ್ಲಿ ನ್ಯೂ ಮಲಬಾರ್ ಹೋಟೆಲ್ ಸಮೀಪ ಬಳ್ಳಾರಿ-ಕಾರವಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ಖಾಸಗಿ ಬಸ್ ಒಂದು ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ಮೃತಪಟ್ಟು 20 ಕ್ಕೂ ಅಧಿಕ ಜನರಿಗೆ ಗಾಯಗಳಾದ ಘಟನೆ ಶನಿವಾರ ಮುಂಜಾನೆ ನಡೆದಿದೆ.


ಇಂಟರ್‌ಸಿಟಿ ಟ್ರಾವೆಲ್ಸ್ ಹೆಸರಿನ ಖಾಸಗಿ ಲಕ್ಸುರಿ ಬಸ್ ಒಂದು ಬಳ್ಳಾರಿ-ಕಾರವಾರ ರಾಷ್ಟ್ರೀಯ ಹೆದ್ದಾರಿಯ ನ್ಯೂ ಮಲಬಾರ್ ಹೋಟೆಲ್ ಸಮೀಪದ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಪಕ್ಕದ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ರಸ್ತೆಯ ಪಕ್ಕ ಅಡ್ಡಲಾಗಿ ಬಿದ್ದಿದೆ. ಬಸ್ ಬೆಂಗಳೂರಿನಿಂದ ಗೋವಾಕ್ಕೆ ಪ್ರನಿತ್ಯ ಸಂಚರಿಸುವ ಬಸ್ ಇದಾಗಿದ್ದು ಅಪಘಾತವಾದಾಗ ಬಸ್ಸಿನಲ್ಲಿ25-30 ಜನ ಪ್ರಯಾಣಿಕರಿದ್ದು 2೦ಕ್ಕೂ ಅಧಿಕ ಮಂದಿಗೆ ಗಾಯಗಳಾಗಿವೆ.

ಅಪಘಾತದ ರಭಸಕ್ಕೆ ಚಾಲಕ ಕೆ.ಆರ್ ಪೇಟೆ ಮೂಲದ ಮಾದಾಪುರ ಕೊಪ್ಪಲಿನ ಕಿರಣಕುಮಾರ ಎಂ.ಡಿ(26) ಸ್ಥಳದಲ್ಲೇ ಮೃತಪಟ್ಟಿರುತ್ತಾನೆ.


ವಿಷಯ ತಿಳಿಯುತ್ತಲೇ ಯಲ್ಲಾಪುರ ಪೊಲೀಸರು ಸ್ಥಳಕ್ಕೆ ಧಾವಿಸಿ 108 ಅಂಬುಲೆನ್ಸ್ ಸಹಾಯದಿಂದ ಬಸ್ಸಿನಲ್ಲಿದ್ದ ಗಾಯಗೊಂಡ ಪ್ರಯಾಣಿಕರನ್ನು ಯಲ್ಲಾಪುರ ತಾಲೂಕು ಆಸ್ಪತ್ರೆಗೆ ಸಾಗಿಸಿದ್ದು ಗಂಭೀರ ಗಾಯಗೊಂಡವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಗೆ ಕರೆದೊಯ್ಯಲಾಗಿದೆ.
ಪ್ರಕರಣ ದಾಖಲಾಗಿದ್ದು ಮುಂದಿನ ತನಿಖೆ ಕೈಗೊಳ್ಳಲಾಗಿದೆ.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಯಲ್ಲಾಪುರದ ಪಂಚಾಯತ ರಾಜ್ ಇಂಜಿನೀಯರಿಂಗ್ ಕಛೇರಿಯಲ್ಲಿ ಗಣೇಶೋತ್ಸವ – ಶ್ರೀಧರ ಸಂಜೀವ ಕರಕೆರ ಕೈಯಲ್ಲಿ ಅರಳಿದ ಕೂರ್ಮಾರೂಡ ಗಣಪ.

ಪ್ರತಿಧ್ವನಿ ಯಲ್ಲಾಪುರ : ಪಟ್ಟಣದಲ್ಲಿನ ಸಹಾಯಕ ಕಾರ್ಯನಿರ್ವಾಹಕ ಇಂಜಿನೀಯರ, ಪಂಚಾಯತ ರಾಜ್ ಇಂಜಿನೀಯರಿಂಗ್, ಉಪ ವಿಭಾಗ, ಯಲ್ಲಾಪುರ ಕಾರ್ಯಾಲಯದಲ್ಲಿ ಅಧಿಕಾರಿ …

Leave a Reply

Your email address will not be published. Required fields are marked *