Breaking News

ಸಾಧಕ ರೈತರಿಗೆ ಸಾರ್ಥಕ ಸನ್ಮಾನ

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ

ಯಲ್ಲಾಪುರ : ರಾಜ್ಯದ ಹೆಸರಾಂತ ಪತ್ರಿಕೆ ವಿಜಯ ಕರ್ನಾಟಕ ವತಿಯಿಂದ ಸಾಧಕ ರೈತರಿಗೆ ಗೌರವಿಸಿ ಸನ್ಮಾನಿಸಲಾಯಿತು.

ಶನಿವಾರ ಪಟ್ಟಣದ ಅಡಿಕೆ ಭವನದಲ್ಲಿ ವಿಜಯ ಕರ್ನಾಟಕ ವತಿಯಿಂದ ಹಮ್ಮಿಕೊಂಡಿದ್ದ ವಿಕ ಸೂಪರ್ ಸ್ಟಾರ್ ರೈತ 2024 – 25 ರ  ಪ್ರಶಸ್ತಿ ಪುರಸ್ಕಾರ ಕಾರ್ಯಕ್ರಮದಲ್ಲಿ ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಶಿವರಾಮ ಹೆಬ್ಬಾರ್ ಪಾಲ್ಗೊಂಡು ದೀಪ ಬೆಳಗಿ ಉದ್ಘಾಟಿಸಿ ಉತ್ತರ ಕನ್ನಡ ಜಿಲ್ಲೆಯ ಪ್ರಗತಿ ಪರ ರೈತರನ್ನು ಸನ್ಮಾನಿಸಿ ಪ್ರಶಸ್ತಿ ಪತ್ರವನ್ನು ನೀಡಿ ಗೌರವಿಸಿದರು.

ಯಲ್ಲಾಪುರ ತಾಲೂಕು ವಿಜಯ ಕರ್ನಾಟಕ ವರದಿಗಾರ  ನಾಗರಾಜ್ ಮದ್ಗುಣಿ ನಿರೂಪಿಸಿದರು. ಪ್ರೇಮಾ ಜೋಶಿ ಪ್ರಾರ್ಥಿಸಿದರು. ಡಾ,ಸುಚೇತಾ ಮದ್ಗುಣಿ ಮತ್ತು ಸಂಗಡಿಗರು ರೈತ ಗೀತೆ ಹಾಡಿದರು.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ವೈ.ಟಿ.ಎಸ್‌.ಎಸ್ ನಿಂದ ರಾಧಾ ಕೃಷ್ಣ ವೇಷ ಸ್ಪರ್ಧೆ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ ವರದಿ, ಯಲ್ಲಾಪುರ : ಸ್ಥಳೀಯ ವೈ.ಟಿ.ಎಸ್.ಎಸ್ …

Leave a Reply

Your email address will not be published. Required fields are marked *