Breaking News

ಕ್ಷೇತ್ರದ ವಿದ್ಯುತ್ ಸಂಕಷ್ಟಕ್ಕೆ ಸದನದಲ್ಲಿ ಧ್ವನಿ ಎತ್ತಿದ ಶಾಸಕ ಹೆಬ್ಬಾರ್- ಸಕರಾತ್ಮಕವಾಗಿ ಸ್ಪಂದಿಸಿದ ಇಂಧನ ಸಚಿವರು.

ಪ್ರತಿಧ್ವನಿ ಯಲ್ಲಾಪುರ (ಬೆಂಗಳೂರು, ಮಾರ್ಚ್ 23) :  ಯಲ್ಲಾಪುರ-ಮುಂಡಗೋಡು ವಿಧಾನಸಭಾ ಕ್ಷೇತ್ರದ ಶಾಸಕ  ಶಿವರಾಮ ಹೆಬ್ಬಾರ್ ಅವರು ಸೋಮವಾರ ವಿಧಾನಸಭೆಯ ಕಲಾಪದಲ್ಲಿ ಚುಕ್ಕೆ ಗುರುತಿನ ಪ್ರಶ್ನೆಯಾಗಿ ಮುಂಡಗೋಡ ತಾಲೂಕಿನ ಮಳಗಿ, ಪಾಳಾ ಹಾಗೂ ಬನವಾಸಿ ಹೋಬಳಿ ವ್ಯಾಪ್ತಿಯ ಬದನಗೋಡ ಭಾಗದಲ್ಲಿ ಉಂಟಾಗುತ್ತಿರುವ ವಿದ್ಯುತ್ ಅಸಮರ್ಪಕ ಪೂರೈಕೆಯಿಂದ ರೈತರು ಎದುರಿಸುತ್ತಿರುವ ಸಂಕಷ್ಟಗಳ ಕುರಿತು ಸದನದ ಗಮನ ಸೆಳೆದರು.

ಸದನದಲ್ಲಿ ಮಾತನಾಡಿದ ಅವರು, ಹಾವೇರಿ ಜಿಲ್ಲೆಯ ಬ್ಯಾಡಗಿ ಹಾಗೂ ಸವಣೂರಿನಲ್ಲಿ ರೈಲ್ವೆ ಟ್ರ್ಯಾಕ್ಷನ್ ಉಪಕೇಂದ್ರಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಿರುವ ಪರಿಣಾಮವಾಗಿ, ಹಾವೇರಿ ಜಿಲ್ಲೆಯಿಂದ ನಮ್ಮ ಕ್ಷೇತ್ರದ ಮಳಗಿ, ಪಾಳಾ, ಕಾತೂರ ಹಾಗೂ ಬದನಗೋಡ ಪ್ರದೇಶಗಳಿಗೆ ನೀಡುವ ವಿದ್ಯುತ್ ನಲ್ಲಿ ಸುಮಾರು 7 ಗಂಟೆಗಳ ಕಾಲ ವಿದ್ಯುತ್ ವ್ಯತ್ಯಯ ಉಂಟಾಗುತ್ತಿದೆ ಎಂದು ವಿವರಿಸಿದರು. ಇದರ ಪರಿಣಾಮವಾಗಿ ಕೃಷಿಯನ್ನೇ ಅವಲಂಬಿಸಿಕೊಂಡು ಜೀವನ ಸಾಗಿಸುತ್ತಿರುವ ರೈತರು ತೀವ್ರ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಎಂದು ಹೇಳಿದರು.

ವಿಡಿಯೋ ಕೃಪೆ ವಾರ್ತಾ ಮತ್ತು ಪ್ರಸಾರ ಇಲಾಖೆ

ಇದನ್ನು ಮನಗಂಡು, ಮುಂಡಗೋಡ ತಾಲೂಕಿನ ಕಾತೂರ ಗ್ರಾಮದಲ್ಲಿ ಈಗಾಗಲೇ ಸುಮಾರು 1 ಎಕರೆ ಜಾಗವನ್ನು ವಿದ್ಯುತ್ ಗ್ರೀಡ್ ನಿರ್ಮಾಣಕ್ಕಾಗಿ ಮೀಸಲಿರಿಸಲಾಗಿದ್ದು, ಈ ಸ್ಥಳದಲ್ಲಿ 110 ಕೆ.ವಿ ಸಾಮರ್ಥ್ಯದ ನೂತನ ಗ್ರೀಡ್ ಮಂಜೂರು ಮಾಡುವಂತೆ ಸಂಬಂಧಿತ ಸಚಿವರಿಗೆ ಮನವಿ ಸಲ್ಲಿಸಿದರು.

ಶಾಸಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಇಂಧನ ಸಚಿವರಾದ ಕೆ. ಜೆ. ಜಾರ್ಜ್ ಅವರು, ಈ ವಿಷಯವನ್ನು ತುರ್ತುವಾಗಿ ಪರಿಗಣಿಸಿ ಕರ್ನಾಟಕ ರಾಜ್ಯ ವಿದ್ಯುತ್ ಸರಬರಾಜು ಮಂಡಳಿಯ ಸಭೆಯಲ್ಲಿ ನೂತನ 110 ಕೆ.ವಿ ಸಾಮರ್ಥ್ಯದ ಗ್ರೀಡ್ ಮಂಜೂರು ಮಾಡುವುದಾಗಿ ಭರವಸೆ ನೀಡಿದರು.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಬಿಜೆಪಿ ವತಿಯಿಂದ ಸಂವಿಧಾನ ಶಿಲ್ಪಿ ಡಾ,ಬಾಬಾ ಸಾಹೇಬ್ ಅಂಬೇಡ್ಕರ್ ಜಯಂತಿ ಆಚರಣೆ..

ಪ್ರತಿಧ್ವನಿ ಯಲ್ಲಾಪುರ: ಭಾರತದ ಸಂವಿಧಾನ ಶಿಲ್ಪಿ,ಸಾಮಾಜಿಕ ನ್ಯಾಯದ ಹರಿಕಾರರು,ಶೋಷಿತರ ದ್ವನಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿ ನಿಮಿತ್ತ ಭಾರತೀಯ ಜನತಾ ಪಾರ್ಟಿ …

Leave a Reply

Your email address will not be published. Required fields are marked *