Breaking News

ಯಲ್ಲಾಪುರ ಆಸ್ಪತ್ರೆಗೆ ಪ್ರಸೂತಿ ತಜ್ಞರನ್ನು ಶೀಘ್ರವಾಗಿ ನಿಯೋಜಿಸಿ – ಜಗನ್ನಾಥ ರೇವಣ್ಕರ್ ಆಗ್ರಹ.


ಯಲ್ಲಾಪುರ : ತಾಲೂಕು ಸರ್ಕಾರಿ ಆಸ್ಪತ್ರೆ ಜಿಲ್ಲೆಯಲ್ಲೆ ಉತ್ತಮ ಗುಣಮಟ್ಟದ ಚಿಕಿತ್ಸೆ, ಸ್ವಚ್ಚತೆ, ಹಾರೈಕೆ ನೀಡುವ ಆಸ್ಪತ್ರೆ ಎಂಬ ಹೆಗ್ಗಳಿಕೆಯೊಂದಿಗೆ ಪ್ರಸೂತಿಯಲ್ಲಿಯು ಒಳ್ಳೆಯ ಹೆಸರು ತಂದುಕೊಂಡಿದೆ,ಅಂತಹ ಸೇವೆ ನೀಡುತ್ತಿದ್ದ ಡಾ,ದೀಪಕ್ ಭಟ್ ವರ್ಗಾವಣೆ ಆಗಿದ್ದು ಅವರಿಂದ ತೆರವಾದ ಸ್ಥಾನಕ್ಕೆ ಬೇರೆ ವೈದ್ಯರನ್ನು ಇನ್ನೂ ನಿಯೋಜಿಸದಿರುವುದು ಆತಂಕಕಾರಿಯಾಗಿದೆ ಎಂದು ಅಂಬೇಡ್ಕರ್ ಸೇವಾ ಸಮಿತಿ ಮಾಜಿ ಅಧ್ಯಕ್ಷ ಜಗನ್ನಾಥ ರೇವಣ್ಕರ್ ಆತಂಕ ವ್ಯಕ್ತಪಡಿಸಿ ಪತ್ರಿಕಾ ಹೇಳಿಕೆ ನೀಡಿದ್ದಾರೆ.


ಒಂದೆಡೆ ಶಾಸಕ ಹೆಬ್ಬಾರ್ ಅವರ ಇಚ್ಛಾಶಕ್ತಿ ಆಸ್ಪತ್ರೆಗೆ ಬೇಕಾದ ಸಕಲ ವ್ಯವಸ್ಥೆ ಕಲ್ಪಿಸಿ ಆಸ್ಪತ್ರೆ ಬಗ್ಗೆ ವಿಶೇಷ ಆಸಕ್ತಿ ತೋರುತ್ತ ತಾವು ಅಲ್ಲಿಯೆ ಚಿಕಿತ್ಸೆ ಪಡೆದು ಅಧಿಕಾರಿ ಜನಪ್ರತಿನಿಧಿಗಳಿಗೆ ಅಲ್ಲಿಯೆ ಚಿಕಿತ್ಸೆ ಪಡೆಯುವಂತೆ ಪ್ರೋತ್ಸಹಿಸುತ್ತಿದ್ದರು, ಮತ್ತು ತಮ್ಮ ಆಸ್ಪತ್ರೆ ಎಂಬ ಹೆಗ್ಗಳಿಕೆ ಅವರಲ್ಲಿತ್ತು ಅಂತಹ ಆಸ್ಪತ್ರೆಯಲ್ಲಿ ಪ್ರಮುಖವಾಗಿ ಬೇಕಾದ ಸ್ರೀರೋಗ ತಜ್ಞರ ನಿಯೋಜನೆ ತಡವಾಗುತ್ತಿದ್ದು ಸರ್ಕಾರ ಮಟ್ಟದಲ್ಲಿ ಮತ್ತಷ್ಟು ಹೆಚ್ಚಿನ ಒತ್ತಡಹಾಕಿ ಬೇರೆ ವೈದ್ಯರನ್ನು ನಿಯೋಜಿಸಬೇಕಿದೆ,

ಸದ್ಯ ಆಸ್ಪತ್ರೆಯಲ್ಲಿ ಇರುವ ವೈದ್ಯರು ಹಾಗು ನುರಿತ ಶುಶ್ರೂಷಕಿಯರು ಪ್ರಸೂತಿ ಕಾರ್ಯ ನಿರ್ವಹಿಸುತ್ತಿದ್ದು ಗಂಭೀರ ಹಾಗು ಕಠಿಣ ಪರಿಸ್ಥಿತಿ ಎದುರಿಸುತ್ತಿರುವ ಪ್ರಕರಣಗಳನ್ನು ಬೇರೆಡೆಗೆ ಸೂಚಿಸುತ್ತಿದ್ದಾರೆ ಇದು ಕೂಡ ಪ್ರಶಂಸನೀಯ ಕಾರ್ಯವಾಗಿದ್ದು ಸರ್ವರಿಗು ನಾಗರಿಕರ ಪರವಾಗಿ ಅಭಿನಂದನೆಗಳು ಎಂದು ತಿಳಿಸಿದ್ದಾರೆ.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ವೈ.ಟಿ.ಎಸ್‌.ಎಸ್ ನಿಂದ ರಾಧಾ ಕೃಷ್ಣ ವೇಷ ಸ್ಪರ್ಧೆ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ ವರದಿ, ಯಲ್ಲಾಪುರ : ಸ್ಥಳೀಯ ವೈ.ಟಿ.ಎಸ್.ಎಸ್ …

Leave a Reply

Your email address will not be published. Required fields are marked *