Breaking News

ಯಲ್ಲಾಪುರ ಬಿಜೆಪಿ ಮಂಡಲ ಮತ್ತು ಮಾದ್ಯಮಗಳ ಒತ್ತಡ ಪ್ರವಾಸಿ ತಾಣಗಳ ನಿರ್ಬಂಧ ತೆರವು – ಗರಿಗೆದರಲಿದೆ ಪ್ರವಾಸೋದ್ಯಮ ಚಟುವಟಿಕೆ.


ಪ್ರತಿಧ್ವನಿ ಯಲ್ಲಾಪುರ : ತಾಲೂಕಿನಲ್ಲಿ ಮಳೆಗಾಲ ಪ್ರಾರಂಭವಾದಾಗಿನಿಂದ ಪ್ರವಾಸಿಗರ ಹಿತದೃಷ್ಟಿಯಿಂದ ಅಪಾಯಗಳು ಸಂಭವಿಸದಂತೆ ತಾಲೂಕಿನ ವಿವಿಧ ಪ್ರವಾಸಿ ತಾಣಗಳಿಗೆ ಅರಣ್ಯ ಇಲಾಖೆ ನಿರ್ಬಂಧ ಹೇರಲಾಗಿತ್ತು ಇದರ ವಿರುದ್ದ ವಿವಿಧ ಸಂಘ ಸಂಸ್ಥೆಗಳು, ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ಸೇರಿದಂತೆ ಪತ್ರಿಕೆ ಮತ್ತು ದೃಶ್ಯ ಮಾದ್ಯಮಗಳು ಹಾಗು ಯಲ್ಲಾಪುರ ಮಂಡಲ ಬಿಜೆಪಿ ನಿರ್ಬಂಧ ತೆರವುಗೊಳಿಸುತೆ ಆಗ್ರಹಿಸುತ್ತಾ ಬಂದಿತ್ತು ಸದ್ಯ ಅರಣ್ಯ ಇಲಾಖೆ ಇದಕ್ಕೆಲ್ಲಾ ಮಣಿದು ಮಳೆಯು‌ಕಡಿಮೆಯಾದ ಹಿನ್ನೆಲೆಯಲ್ಲಿ ಪ್ರವಾಸಿ ತಾಣಗಳ ನಿರ್ಬಂಧ ತೆರವುಗೊಳಿಸಿ ಆದೇಶ ಹೊರಡಿಸಿದೆ.


ಸಾತೊಡಿ, ಶಿರಲೆ,ಮಾಗೋಡು, ಕಾನೂರು,ಲಾಲಾಗುಳಿ, ಜೇನುಕಲ್ಲು ಗುಡ್ಡ, ಸೂರ್ಯ ಕಲ್ಯಾಣಿ ಗುಡ್ಡ, ಹೆಗ್ಗಾರ ಮನೆ ಗುಡ್ಡ, ಅತ್ತಿವೇರಿ ಪಕ್ಷಿಧಾಮ ಕಾಳಿನದಿ ಶಿವಪುರ ತೂಗು ಸೇತುವೆ ಸೇರಿದಂತೆ ಇತರೆ ಪ್ರೇಕ್ಷಣೀಯ ಸ್ಥಳಗಳಿಗಿದ್ದ ನಿರ್ಬಂಧ ತೆರವುಗೊಳಿಸಿದ್ದು ಪ್ರವಾಸಿಗರು ನಿಯಮಗಳು ಹಾಗು ಸೂಚನೆಗಳನ್ನು ಪಾಲಿಸಿ ಪ್ರಕೃತಿ ಸೌಂದರ್ಯ ಸವಿಯಬಹುದಾಗಿದೆ ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿಯಿಂದ ಆದೇಶ ಹೊರಬಿದ್ದಿದೆ.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಜನಸ್ನೇಹಿ,ಜನಾನುರಾಗಿ ಎಸಿಎಫ್ ಹಿಮವತಿ ಭಟ್ ಪದೋನ್ನತಿಯೊಂದಿಗೆ ಗೌರವದ ವರ್ಗಾವಣೆ ಬೆಂಗಳೂರಿಗೆ.

ವಿಧಾನಪರಿಷತ್ ಮಾಜಿ ಸದಸ್ಯ “ಶಾಂತಾರಾಮ್ ಸಿದ್ದಿ” ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ : ಅರಣ್ಯ ಇಲಾಖೆಯ ಕೆನರಾ ವೃತ್ತದಲ್ಲಿ ಉತ್ತಮ ಕರ್ತವ್ಯ …

Leave a Reply

Your email address will not be published. Required fields are marked *