Breaking News

ಬಸವಣ್ಣನವರು ವಿಶ್ವಕ್ಕೆ ಸಮಾನತೆ ಹಾಗೂ ಏಕತೆಯ ಸಂದೇಶವನ್ನು ಸಾರಿದ್ದಾರೆ – ಜಗದೀಶ್ ಕಮ್ಮಾರ್

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ

ಪ್ರತಿಧ್ವನಿ,ಯಲ್ಲಾಪುರ : ಬಸವಣ್ಣನವರು ಸಮಾಜದಲ್ಲಿನ ಜಾತಿ ವ್ಯವಸ್ಥೆಯನ್ನು ತೊಡೆದು ಹಾಕಬೇಕೆನ್ನುವ ನಿಟ್ಟಿನಲ್ಲಿ ವಿರಶೈವ ಲಿಂಗಾಯತ ಧರ್ಮವನ್ನು ಸಂಸ್ಥಾಪಿಸಿ, ತಮ್ಮ ವಚನ ಸಾಹಿತ್ಯದ ಮೂಲಕ ವಿಶ್ವಕ್ಕೆ ಸಮಾನತೆ ಹಾಗೂ ಏಕತೆಯ ಸಂದೇಶವನ್ನು ಸಾರಿದ್ದಾರೆ’ ಎಂದು ತಾಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿ ಜಗದೀಶ ಕಮ್ಮಾರ ಹೇಳಿದರು.
ಪಟ್ಟಣದ ಆಡಳಿತ ಸೌಧದಲ್ಲಿ ಸರಳವಾಗಿ ಹಮ್ಮಿಕೊಂಡ ಜಗಜ್ಯೋತಿ ಬಸವಣ್ಣನವರ ಜಯಂತಿ ಅಂಗವಾಗಿ ಬಸವಣ್ಣನವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಅವರು ಮಾತನಾಡಿದರು.


ಬಸವಣ್ಣನವರು ತಮ್ಮ ‘ಅನುಭವ ಮಂಟಪ’ದ ಮೂಲಕ ಎಲ್ಲ ವರ್ಗದವರಿಗೂ ಸಾಮಾಜಿಕ ಸಾಮರಸ್ಯ ತೋರಿದ ಮಹಾನ್ ಮಾನವತಾವಾದಿಯಾಗಿದ್ದಾರೆ. ಅವರ ಹಿರಿಮೆ ಗರಿಮೆ ಸಮಾಜಕ್ಕೆ ನೀಡಿದ ಆದರ್ಶಗಳು ಮುಂದಿನ ಪೀಳಿಗೆಗೆ ಮಾರ್ಗದರ್ಶಕವಾಗಿವೆ. ತಮ್ಮ ಅನುಭವ ಮಂಟಪದ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಮೊದಲಿಗೆ ಹುಟ್ಟುಹಾಕಿದವರಾಗಿದ್ದರು ಎಂದು ಅವರು ಹೇಳಿದರು.
ಉಪ ತಹಶೀಲ್ದಾರ ರಾಘವೇಂದ್ರ, ಲಿಂಗಾಯತ ಸಮೂದಾಯದ ಪ್ರಮುಖರಾದ ಮಹೇಶ ಗೌಳಿ, ಉದಯ ಜಾಲಿಹಾಳ, ಬಸವರಾಜ ಗೌಳಿ, ವಿವಿದ ಇಲಾಖೆಯ ಸಿಬ್ಬಂದಿ ಇದ್ದರು.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ವೈ.ಟಿ.ಎಸ್‌.ಎಸ್ ನಿಂದ ರಾಧಾ ಕೃಷ್ಣ ವೇಷ ಸ್ಪರ್ಧೆ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ ವರದಿ, ಯಲ್ಲಾಪುರ : ಸ್ಥಳೀಯ ವೈ.ಟಿ.ಎಸ್.ಎಸ್ …

Leave a Reply

Your email address will not be published. Required fields are marked *