

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ
ಪ್ರತಿಧ್ವನಿ ಯಲ್ಲಾಪುರ : ಮುಂಗಾರು ಪ್ರಾರಂಭವಾಗುತ್ತಿದ್ದು ಕಲುಷಿತ ನೀರಿನ ಸೇವನೆಯಿಂದ ಸಾಂಕ್ರಾಮಿಕ ರೋಗಗಳಾದ ವಾಂತಿ, ಭೇದಿ, ಅತಿಸಾರ ಭೇದಿ, ಕಾಲರಾ, ಕರುಳು ಬೇನೆ, ಕಾಮಾಲೆ ರೋಗಗಳು ಕಾಣಿಸಿಕೊಳ್ಳುವ ಸಂಭವ ಇರುತ್ತದೆ.

ಕಾರಣ ಸಾರ್ವಜನಿಕರು ಕಾಯಿಸಿ ಆರಿಸಿದ ನೀರನ್ನೇ ಕುಡಿಯುವಂತೆ ತಾಲೂಕು ಆರೋಗ್ಯಾಧಿಕಾರಿಗಳಾದ ಡಾ| ನರೇಂದ್ರ ಪವಾರ ಮನವಿ ಮಾಡಿಕೊಂಡಿದ್ದಾರೆ.




ಶುದ್ಧ ಕುಡಿಯುವ ನೀರು ಮತ್ತು ನೈರ್ಮಲ್ಯ ನಿರ್ವಹಣೆ ತುರ್ತು ಅವಶ್ಯಕತೆಯಾಗಿದೆ ಎಂದಿದ್ದಾರೆ.

ಗ್ರಾಮ ಪಂಚಾಯತ ಮತ್ತು ಪಟ್ಟಣ ಪಂಚಾಯತಗಳು ತಮ್ಮ ವ್ಯಾಪ್ತಿಯಲ್ಲಿನ ಕುಡಿಯುವ ನೀರಿನ ಟ್ಯಾಂಕ್‌ಗಳನ್ನು ಬ್ಲಿಚಿಂಗ್ ಪೌಡರ್ ಬಳಸಿ ಸ್ವಚ್ಛಗೊಳಿಸುವುದು, ಕುಡಿಯುವ ನೀರು ಕಲುಷಿತವಾಗದಂತೆ ಪೂರೈಕೆ ವ್ಯವಸ್ಥೆಯಲ್ಲಿ ಸೋರುವಿಕೆಗಳನ್ನು ಗುರ್ತಿಸಿ ತಕ್ಷಣ ದುರಸ್ಥಿಗೊಳಿಸುವುದು, ದುರಸ್ಥಿ ಸಾಧ್ಯವಾಗದಿದ್ದರೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಬೇಕಿದೆ.

ಇಲಾಖಾ ಸಿಬ್ಬಂದಿಗಳು ಮನೆ ಭೇಟಿ ನೀಡಿದಾಗ ಜ್ವರ ಮತ್ತು ಇತರೆ ಕಾಯಿಲೆಗಳಿದ್ದರೆ ಸರಿಯಾಗಿ ಮಾಹಿತಿ ನೀಡುಬೇಕು. ಸಿಬ್ಬಂದಿಗಳು ಓ.ಆರ್. ಎಸ್. ತಯಾರಿಸಿ ಬಳಸುವ ವಿಧಾನ, ವೈಯಕ್ತಿಕ ಸ್ವಚ್ಛತೆ, ಮನೆಯ ಸುತ್ತಮುತ್ತ ಶುಚಿತ್ವ ಕಾಪಾಡಿಕೊಳ್ಳುವ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡುತ್ತಿದ್ದಾರೆ. ಸಾಂಕ್ರಾಮಿಕ ರೋಗಗಳ ನಿಯಂತ್ರಣದಲ್ಲಿ ಎಲ್ಲ ಇಲಾಖೆಗಳ ಸಹಕಾರ ಮತ್ತು ಸಮನ್ವಯತೆ ಬಹಳ ಮುಖ್ಯವಾಗಿದೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.


ಪ್ರಾಥಮಿಕ ಆರೋಗ್ಯ ಕೇಂದ್ರಗಳ ವ್ಯಾಪ್ತಿಯಲ್ಲಿ ಕ್ಷಿಪ್ರ ಪ್ರತಿಕ್ರಿಯಾ ತಂಡ ರಚಿಸಲಾಗಿದ್ದು ಯಾವುದೇ ಗ್ರಾಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಾಯಿಲೆಗಳು ಕಂಡು ಬಂದರೆ ಅಲ್ಲಿಯೇ ಚಿಕಿತ್ಸೆ ನೀಡಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.







Prathidvani Yellapura