Breaking News

ಮಂಚಿಕೇರಿ ಮತ್ತು ಹಾಸಣಗಿ ವ್ಯಾಪ್ತಿಯಲ್ಲಿ ” ಮನೆಮನೆಗೆ ಪೊಲೀಸ್ ” ಡಿ.ವೈ.ಎಸ್.ಪಿ ಗೀತಾ ಪಾಟೀಲ್ ಭಾಗಿ.

ಯಲ್ಲಾಪುರ -:  ಡಿ ಜಿ ಪಿ ಮತ್ತು ಐ ಜಿ ಪಿ ಯವರ ಸುತ್ತೋಲೆ ಮತ್ತು  ಮೇಲಾಧಿಕಾರಿಯವರ ಆದೇಶದಂತೆ ಸಮುದಾಯ ಪೊಲೀಸ್ ವ್ಯವಸ್ಥೆಯನ್ನು ಬಲಪಡಿಸುವ ದೃಷ್ಟಿಯಿಂದ ಮನೆ ಮನೆಗೆ ಪೊಲೀಸ್ ಪರಿಕಲ್ಪನೆಯನ್ನು ಯಲ್ಲಾಪುರ ಪೊಲೀಸ್ ಠಾಣೆಯಿಂದ ಅನುಷ್ಠಾನ ಗೊಳಿಸಲಾಯಿತು.

 

   ಪೊಲೀಸ್ ಉಪಾಧೀಕ್ಷಕರಾದ ಗೀತಾ ಪಟೀಲ್ (ksps)  ರವರ ನೇತೃತ್ವದಲ್ಲಿ ಯಲ್ಲಾಪುರ ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಸೇರಿ ಮಂಚಿಕೇರಿ ಮತ್ತು ಹಾಸಣಗಿ ಪಂಚಾಯತ್ ವ್ಯಾಪ್ತಿಯಲ್ಲಿ ಮನೆ ಮನೆಗೆ ಭೇಟಿ ನೀಡಿ ಅಹವಾಲುಗಳನ್ನು ಆಲಿಸಿ ಮತ್ತು ಪೊಲೀಸ್ ಇಲಾಖೆಯ ತುರ್ತು ಸೇವೆಯ ಬಗ್ಗೆ, ದೂರವಾಣಿಯ ನಂಬರ್ ಗಳ ಮಾಹಿತಿಯನ್ನು ನೀಡಿದ್ದು ಅಲ್ಲದೆ ಪೊಲೀಸ್ ಮಹಿಳಾ ಸಿಬ್ಬಂದಿಯವರಿಂದ ಮಹಿಳೆಯರ ಅಹವಾಲುಗಳಿಗೆ ಮುಕ್ತವಾಗಿ ಸಲಹೆ ಸೂಚನೆಗಳನ್ನು ನೀಡುವಲ್ಲಿ ಮುಕ್ತ ವೇದಿಕೆಯನ್ನು ಕಲ್ಪಿಸಲಾಗುವುದು ಎಂದು ತಿಳಿಸಲಾಯಿತು.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ವೈ.ಟಿ.ಎಸ್‌.ಎಸ್ ನಿಂದ ರಾಧಾ ಕೃಷ್ಣ ವೇಷ ಸ್ಪರ್ಧೆ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ ವರದಿ, ಯಲ್ಲಾಪುರ : ಸ್ಥಳೀಯ ವೈ.ಟಿ.ಎಸ್.ಎಸ್ …

Leave a Reply

Your email address will not be published. Required fields are marked *