Breaking News

ಗುಣಮಟ್ಟದ ಮೌಲ್ಯಮಾಪನದಲ್ಲಿ ಯಲ್ಲಾಪುರ ಸರ್ಕಾರಿ ಆಸ್ಪತ್ರೆ NQAS ನಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಆಯ್ಕೆ – ಸಿಬ್ಬಂದಿಗಳಿಗೆ ಕೃತಜ್ಞತೆ – ಡಾ.ಪವಾರ್

ಪ್ರತಿಧ್ವನಿ ಯಲ್ಲಾಪುರ : ಪಟ್ಟಣದ ತಾಲೂಕ ಸರ್ಕಾರಿ ಆಸ್ಪತ್ರೆ  (ರಾಷ್ಟ್ರೀಯ ಗುಣಮಟ್ಟದ ಭರವಸೆ ಮಾನದಂಡಗಳು ) ಮೌಲ್ಯಮಾಪನ ನಡೆದಿದೆ. ಈ ಮೌಲ್ಯಮಾಪನ ಇನ್ನು ಒಳ್ಳೆ ಮಾಪನ ರಾಜ್ಯಮಟ್ಟದಲ್ಲಿದ್ದು 12 ವಿಭಾಗದ ಮೌಲ್ಯಮಾಪನಾಗಿದ್ದು ದಿನಾಂಕ 21 9 2026 ರಂದು ಫಲಿತಾಂಶ ಬಂದಿದ್ದು ಆಸ್ಪತ್ರೆಯು 80% ಅಂಕವನ್ನು ತನ್ನದಾಗಿಸಿಕೊಂಡು ಎನ್ ಕ್ಯೂ ಎ ಎಸ್ ರಾಷ್ಟ್ರೀಯ ಮಟ್ಟದಲ್ಲಿ ಆಯ್ಕೆಯಾಗಿರುತ್ತದೆ.

ತಾಲೂಕು ಸರ್ಕಾರಿ ಆಸ್ಪತ್ರೆಗೆ ಉಪ ನಿರ್ದೇಶಕರು ಡಾ.ರಾಜಕುಮಾರ್ ಇವರು ದಿನಾಂಕ  ಭೇಟಿ ನೀಡಿ ಎಲ್ಲಾ ವಿಭಾಗಗಳನ್ನು ಪರಿಶೀಲಿಸಿ ಆಸ್ಪತ್ರೆಯ ಸ್ವಚ್ಛತೆ, ಸಿಬ್ಬಂದಿಗಳಿಗಿರುವ ಜ್ಞಾನ, ಮಾಹಿತಿಗಳು ಮತ್ತು ಅರಿವುಗಳನ್ನು ತಿಳಿದು ಪ್ರಶಂಸೆಯನ್ನು ವ್ಯಕ್ತಪಡಿಸಿರುತ್ತಾರೆ

ಆಸ್ಪತ್ರೆಯ ಎಲ್ಲಾ ಸಿಬ್ಬಂದಿಗಳ ಸಹಕಾರ ಕಠಿಣ ಪರಿಶ್ರಮದಿಂದ ಉತ್ತಮ ಫಲಿತಾಂಶ ಬಂದಿದ್ದು ತಾಲೂಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಹಾಗು ತಾಲೂಕು ಆರೋಗ್ಯಾಧಿಕಾರಿ ಡಾ.ನರೇಂದ್ರ ಪವಾರ್ ಸಿಬ್ಬಂದಿಗಳಿಗೆ ಅಭಿನಂದನೆ ತಿಳಿಸಿದ್ದಾರೆ.

.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಜನಸ್ನೇಹಿ,ಜನಾನುರಾಗಿ ಎಸಿಎಫ್ ಹಿಮವತಿ ಭಟ್ ಪದೋನ್ನತಿಯೊಂದಿಗೆ ಗೌರವದ ವರ್ಗಾವಣೆ ಬೆಂಗಳೂರಿಗೆ.

ವಿಧಾನಪರಿಷತ್ ಮಾಜಿ ಸದಸ್ಯ “ಶಾಂತಾರಾಮ್ ಸಿದ್ದಿ” ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ : ಅರಣ್ಯ ಇಲಾಖೆಯ ಕೆನರಾ ವೃತ್ತದಲ್ಲಿ ಉತ್ತಮ ಕರ್ತವ್ಯ …

Leave a Reply

Your email address will not be published. Required fields are marked *