Breaking News

ಯಲ್ಲಾಪುರ ತಾಲೂಕಿನಲ್ಲಿ “ಡೆಂಗಿ ನಿಯಂತ್ರಣಕ್ಕಾಗಿ ಸಮುದಾಯದ ಸಹಭಾಗಿತ್ವ – ” ಪರಿಶೀಲಿಸಿ, ಸ್ವಚ್ಛಗೊಳಿಸಿ, ಮುಚ್ಚಿಡಿ”

ಪ್ರತಿಧ್ವನಿ ಯಲ್ಲಾಪುರ :  ಡೆಂಗಿ ನಿಯಂತ್ರಣದಲ್ಲಿ ಎಲ್ಲ ಇಲಾಖೆಗಳು ಹಾಗೂ ಸಮುದಾಯದ ಸಹಭಾಗಿತ್ವ ಅವಶ್ಯಕತೆ ಇದ್ದು ಯಲ್ಲಾಪುರ ತಾಲೂಕಿನಲ್ಲಿ ಮುಂದಿನ ದಿನಗಳಲ್ಲಿ ಡೆಂಗಿ ಹರಡದಂತೆ ಎಚ್ಚರಿಕೆ ವಹಿಸುವುದಕ್ಕಾಗಿ ಎಲ್ಲರ ಸಹಕಾರ ಅತ್ಯಗತ್ಯವಾಗಿದೆ. ಭವಿಷ್ಯದ ಡೆಂಗಿ ಮುಕ್ತ ತಾಲೂಕು ನಮ್ಮದಾಗಬೇಕಿದೆ ಎಂದು ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ರಾಜೇಶ್ ಧನವಾಡಕರ್ ಹೇಳಿದರು.

ಅವರು ಸೆ, 23 ರಂದು ಯಲ್ಲಾಪುರ ತಾಲೂಕ ಪಂಚಾಯತ್ ಸಭಾಭವನ ತಾಲೂಕಿನ ಎಲ್ಲಾ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ, ಗ್ರಾಮೀಣ ಅಭಿವೃದ್ಧಿ, ಪಂಚಾಯತ್ ರಾಜ್, ನಗರಾಭಿವೃದ್ಧಿ, ಪೌರಾಡಳಿತ ಇಲಾಖೆಯ ಅಧಿಕಾರಿಗಳಿಗೆ ರಾಷ್ಟ್ರೀಯ ಡೆಂಗಿ ದಿನ 2026 ರ ಅಂಗವಾಗಿ ಈ ಬಾರಿಯ ಧ್ಯೇಯವಾಕ್ಯವಾದ “ಡೆಂಗಿ ನಿಯಂತ್ರಣಕ್ಕಾಗಿ ಸಮುದಾಯದ ಸಹಭಾಗಿತ್ವ : ಪರಿಶೀಲಿಸಿ, ಸ್ವಚ್ಛಗೊಳಿಸಿ ಹಾಗೂ ಮುಚ್ಚಿಡಿ” ಎಂಬ ಧ್ಯೇಯವಾಕ್ಯದೊಂದಿಗೆ ಅಡ್ವೊಕೇಸಿ ಕಾರ್ಯಗಾರದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ತಾಲೂಕಾ ಆರೋಗ್ಯಾಧಿಕಾರಿ ಡಾ. ನರೇಂದ್ರ ಪವಾರ್ ಹಾಗೂ ಪ್ರಾ.ಆ.ಕೇಂದ್ರ ದೇಹಳ್ಳಿಯ ವೈದ್ಯಾಧಿಕಾರಿಗಳಾದ ಡಾ. ಗಿರೀಶ್ ಗೌಡರ ಕಾರ್ಯಕ್ರಮದ ಕುರಿತು ಉಪನ್ಯಾಸ ನೀಡಿದರು.

  ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಮಹೇಶ್ ತಾಳಿಕೋಟಿ ಇವರು ಸ್ವಾಗತಿಸಿ ವಂದಿಸಿದರು. ತಾಲೂಕಿನ ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳಾದ ಎ.ಡಿ ಮಂಜುನಾಥ ಆಗೇರ, ಪ್ರಭಾರ ಎ .ಡಿ ಪ್ರಭಾಕರ ಭಟ್ಟ ಹಾಗೂ ಪಿ.ಡಿ. ಒ ರವರು ಇತರ ಎಲ್ಲಾ ಅಧಿಕಾರಿ, ಸಿಬ್ಬಂದಿಗಳು ಹಾಗೂ ಆರೋಗ್ಯ ಇಲಾಖೆಯ ಹಿರಿಯ ನಿರೀಕ್ಷಣಾಧಿಕಾರಿ ವಿ ಎಲ್ ಶಿರೂರ, ಪ್ರವೀಣ ಇನಾಂದಾರ್ ಹಾಗೂ ಅಕ್ಷತಾ ನಾಯ್ಕ ಹಾಜರಿದ್ದು ಕಾರ್ಯಕ್ರಮ ಯಶಸ್ವಿಗೊಳಿಸಿದರು.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಜನಸ್ನೇಹಿ,ಜನಾನುರಾಗಿ ಎಸಿಎಫ್ ಹಿಮವತಿ ಭಟ್ ಪದೋನ್ನತಿಯೊಂದಿಗೆ ಗೌರವದ ವರ್ಗಾವಣೆ ಬೆಂಗಳೂರಿಗೆ.

ವಿಧಾನಪರಿಷತ್ ಮಾಜಿ ಸದಸ್ಯ “ಶಾಂತಾರಾಮ್ ಸಿದ್ದಿ” ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ : ಅರಣ್ಯ ಇಲಾಖೆಯ ಕೆನರಾ ವೃತ್ತದಲ್ಲಿ ಉತ್ತಮ ಕರ್ತವ್ಯ …

Leave a Reply

Your email address will not be published. Required fields are marked *