

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ
ಪ್ರತಿಧ್ವನಿ,ಯಲ್ಲಾಪುರ : ರಾಜ್ಯ ಮತ್ತು ಕೇಂದ್ರದಲ್ಲಿ ಭಾರತೀಯ ಜನತಾ ಪಕ್ಷದ ಸರ್ಕಾರವಿರುವುದರಿಂದ ಡಬಲ್ ಇಂಜಿನ್ ಸರ್ಕಾರದಿಂದ ಅಭಿವೃದ್ಧಿ ಕಾರ್ಯಗಳ ವೇಗ ಹೆಚ್ಚಾಗುತ್ತದೆ. ಈ ಹಿನ್ನಲೆಯಲ್ಲಿ ಸಾಕಷ್ಟು ಜನಪರ ಯೋಜನೆಗಳು ಕ್ಷೇತ್ರದಲ್ಲಿ ಅನುಷ್ಠಾನಗೊಂಡಿರುವುದರಿದ ಜನರಲ್ಲಿ ಇನ್ನೂ ಹೆಚ್ಚಿನ ವಿಶ್ವಾಸ ಮೂಡಿದೆ. ಈ ಎಲ್ಲಾ ವಿಚಾರಧಾರೆಗಳನ್ನು ನಮ್ಮೊಳಗೇ ಮೆಲುಕು ಹಾಕುವುದಕ್ಕಿಂತ ಜನರ ಬಳಿಗೆ ಕೊಂಡೊಯ್ದು ಚುನಾವಣಾ ಅಭೂತಪೂರ್ವ ವಿಜಯ ಸಾಧಿಸುವಲ್ಲಿ ಕಾರ್ಯಕರ್ತರು ಶ್ರಮಿಸಬೇಕಿದೆ ಎಂದು ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶಿವರಾಮ ಹೆಬ್ಬಾರ್ ಹೇಳಿದರು.

ಅವರು ಚುನಾವಣಾ ಹಿನ್ನಲೆಯಲ್ಲಿ ತಾಲೂಕಿನ ಮಾವಿನಮನೆ ಗ್ರಾ.ಪಂ ವ್ಯಾಪ್ತಿ ವಿವಿಧ ಬೂತ್ಗಳಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ತಾಲೂಕಾ ಬಿಜೆಪಿ ಮಂಡಲಾಧ್ಯಕ್ಷ ಗೋಪಾಲಕೃಷ್ಣ ಎನ್ ಗಾಂವ್ಕರ್, ಮಹಾಶಕ್ತಿ ಕೇಂದ್ರ, ಶಕ್ತಿ ಕೇಂದ್ರ, ಬೂತ ಅಧ್ಯಕ್ಷರು, ವಿವಿಧ ಸತರದ ಪದಾಧಿಕಾರಿಗಳು, ಸಥಳೀಯ ಪ್ರಮುಖರು , ಗ್ರಾ.ಪಂ ಸದಸ್ಯರು ವಿವಿಧ ಮೋರ್ಚಾ ಪದಾಧಿಕಾರಿಗಳು, ಕಾರ್ಯಕರ್ತರು, ಸಾರ್ವಜನಿಕರು ಉಪಸ್ಥಿತರಿದ್ದರು.
Prathidvani Yellapura