Breaking News

ಯಲ್ಲಾಪುರ ತಾಲೂಕಿನಲ್ಲಿ ಮಳೆ,ಮಳೆ,ಮಳೆ ಅಲ್ಲಲ್ಲಿ ಒಂದಷ್ಟು ಸಮಸ್ಯೆ…

ಪ್ರತಿಧ್ವನಿ,ಯಲ್ಲಾಪುರ : ತಾಲೂಕಿನಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ರೈತರ ಮೊಗದಲ್ಲಿ ಸಂತಸ ಮೂಡಿದೆ ಹಾಗೆ ವಿವಿಧ ಪ್ರದೇಶಗಳಲ್ಲಿ ಸಮಸ್ಯೆಗಳು ಉದ್ಭವವಾಗಿವೆ.


ಜಾನುವಾರುಗಳ ಮರಣ ಮೃದಂಗ ಮುಂದುವರೆದಿದ್ದು ಮತ್ತೆರಡು ಎಮ್ಮೆಗಳು ನೀರು ಪಾಲಾಗಿವೆ. ಮದನೂರು ಗ್ರಾಮದ ಗೋಯಾ ಬಾಬು ಕೊಕರೆ ಹಾಗೂ ಮಾಳು ಬಾಬು ಕೊಕರೆ ಎಂಬುವರಿಗೆ ಸೇರಿದ ಎರಡು ಸಾಕು ಎಮ್ಮೆಗಳು ಡೋಮಗೇರಿ ಹಳ್ಳದ ನೀರಿನಲ್ಲಿ ಕೊಚ್ಚಿಹೋಗಿ ಸಾವನ್ನಪ್ಪಿವಿರುವುದರೊಂದಿಗೆ ತಾಲೂಕಿನಲ್ಲಿ ಜಾನುವಾರುಗಳ ಸಾವಿನ ಸಂಖ್ಯೆ10 ಕ್ಕೇರಿದೆ.


ಗೇರಾಳದ ನಾಗವೇಣಿ ನಾಗಪ್ಪ ಗೌಡ ಎಂಬುವರ ವಾಸ್ತವ್ಯದ ಮನೆಯ ಗೋಡೆ ಕುಸಿದಿದೆ.


ಮಂಚೀಕೇರಿ ನಿವಾಸಿ ಉಡಚವ್ವ ಭೋವಿವಡ್ಡರ ಎಂಬುವರ ಮನೆಗೋಡೆ ಕುಸಿದಿದೆ.


ಮದನೂರು ಗ್ರಾಮದ ಯಲ್ಲವ್ವ ಗೋಪಾಲ ತಳವಾರ ಮನೆ ಗಣೊಡೆ ಕುಸಿದಿದೆ.

ಮದನೂರಿನ ಥೆರೆಜಾ ರುಜಾಯ್ ಸಿದ್ದಿ ಎಂಬುವರ ವಾಸದ ಮನೆಯ ಗೋಡೆ ಕುಸಿದಿದೆ.


ಕಿರವತ್ತಿಯ ಇಂದಿರಾ ನಗರ ನಿವಾಸಿ ಲಕ್ಷ್ಮೀ ಮಂಜುನಾಥ ವಾಲ್ಮೀಕಿ ಎಂಬುವರ ಮನೆಗೋಡೆ ಕುಸಿದಿದೆ.


ಅರಬೈಲು ಘಟ್ಟ ಪ್ರದೇಶದಲ್ಲಿ ಅಲ್ಲಲ್ಲಿ ಮರದ ರೆಂಬೆಕೊಂಬೆಗಳು ಮುರಿದು ಬೀಳುತ್ತಿದ್ದು ಹೆದ್ದಾರಿ ನಿರ್ವಹಣೆಯ ತಂಡ ಮತ್ತು ಅರಣ್ಯ ಇಲಾಖೆ ತಕ್ಷಣದಲ್ಲಿ ಸಂಚಾರಕ್ಕೆ ಅಡಚಣೆಯಾಗದಂತೆ ಮಳೆಯನ್ನೂ ಲೆಕ್ಕಿಸದೇ ಕರ್ತವ್ಯ ನಿರ್ವಹಿಸುತ್ತಿರುವುದು ಪ್ರಶಂಸನೀಯ.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ವೈ.ಟಿ.ಎಸ್‌.ಎಸ್ ನಿಂದ ರಾಧಾ ಕೃಷ್ಣ ವೇಷ ಸ್ಪರ್ಧೆ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ ವರದಿ, ಯಲ್ಲಾಪುರ : ಸ್ಥಳೀಯ ವೈ.ಟಿ.ಎಸ್.ಎಸ್ …

Leave a Reply

Your email address will not be published. Required fields are marked *