
ಪ್ರತಿಧ್ವನಿ ಯಲ್ಲಾಪುರ : ತಾಲೂಕಾ ಮಟ್ಟದ ಪದವಿಪೂರ್ವ ಕಾಲೇಜುಗಳ ಕ್ರೀಡಾಕೂಟದಲ್ಲಿ ಸ್ಥಳೀಯ ವೈ.ಟಿ.ಎಸ್.ಎಸ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು 36 ಪ್ರಥಮ, 18 ದ್ವಿತೀಯ ಹಾಗೂ 11 ಕ್ರೀಡೆಗಳಲ್ಲಿ ತೃತೀಯ ಸ್ಥಾನ ಪಡೆಯುವ ಮೂಲಕ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆ ಶಿಕ್ಷಣಕ್ಕು ಸೈ ಕ್ರೀಡೆಗಳಲ್ಲು ಜೈ ಎನಿಸಿಕೊಂಡಿದೆ.


ವಿಶೇಷವಾಗಿ ವೈ.ಟಿ.ಎಸ್.ಎಸ್ ಪದವಿಪೂರ್ವ ಕಾಲೇಜು ಸಮಗ್ರ ವೀರಾಗ್ರಣಿ ಪ್ರಶಸ್ತಿಯನ್ನೂ ತಮ್ಮದಾಗಿಸಿಕೊಂಡದ್ದಲ್ಲದೆ ಕಾಲೇಜಿನ ಶ್ರೀದೇವಿ ಗಂಗಾನಾಯ್ಕ ಹಾಗೂ ನಾದಶ್ರೀ ರಾಮಚಂದ್ರ ಭಟ್ಟ ವೈಯಕ್ತಿಕ ವೀರಾಗ್ರಣಿ ಪ್ರಶಸ್ತಿಯನ್ನು ಪಡೆದು ಸಂಸ್ಥೆಗೆ ಕೀರ್ತಿ ತಂದಿರುತ್ತಾರೆ.

ಈ ಸಾಧನೆ ಮಾಡಿದ ಎಲ್ಲಾ ವಿದ್ಯಾರ್ಥಿಗಳನ್ನು ಸಂಸ್ಥೆಯ ಅಧ್ಯಕ್ಷ ರವಿಕುಮಾರ ಲಕ್ಷ್ಮಣ ಶಾನಭಾಗ, ಕಾರ್ಯದರ್ಶಿ ರಾಜೇಂದ್ರಪ್ರಸಾದ ಬಿ ಭಟ್ಟ ಹಾಗೂ ಸಂಸ್ಥೆಯ ಎಲ್ಲಾ ಪದಾಧಿಕಾರಿಗಳು ಹಾಗೂ ಸದಸ್ಯರು, ಕಾಲೇಜಿನ ಪ್ರಾಂಶುಪಾಲ ಆನಂದ ಹೆಗಡೆ & ಕಾಲೇಜಿನ ಎಲ್ಲಾ ಬೋಧಕ-ಬೋಧಕೇತರ ಸಿಬ್ಬಂದಿಗಳೂ ಅಭಿನಂದಿಸಿದ್ದಾರೆ.








Prathidvani Yellapura