Breaking News

ಸುಪ್ರಿಂ ಆದೇಶ ಧರ್ಮಸ್ಥಳ ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ನೂತನ ಎಸ್‌ಐಟಿ ರಚನೆ – ಹುಬ್ಬಳ್ಳಿ ಖಡಕ್ ಎಸ್.ಪಿ ಯಾಗಿದ್ದ ಶಶಿಕುಮಾರ್ (IPS) ಕ್ಯಾಪ್ಟನ್

ಪ್ರತಿಧ್ವನಿ ಯಲ್ಲಾಪುರ :  ಧರ್ಮಸ್ಥಳ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೇಶದ ಸರ್ವೋಚ್ಛ ನ್ಯಾಯಾಲಯ ಮಹತ್ವದ ಆದೇಶ ಹೊರಡಿಸಿ ಮತ್ತೊಮ್ಮೆ ನೂತನ ಎಸ್.ಐ.ಟಿ ತಂಡ ರಚಿಸಿ ಮರು ತನಿಖೆಗೆ ಸೂಚಿಸಿದೆ. ಈ ಹಿನ್ನೆಲೆಯಲ್ಲಿ ಪ್ರಕರಣದ ಮರು ತನಿಖೆಗಾಗಿ ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡವನ್ನು ರಚಿಸಿ ಅಧಿಕೃತ ಆದೇಶ ಹೊರಡಿಸಿದೆ.


ನೂತನ ಎಸ್ಐಟಿ ತಂಡದ ನೇತೃತ್ವವನ್ನು ಖಡಕ್ ಎಸ್.ಪಿ ಯಾಗಿ ಹುಬ್ಬಳ್ಳಿಯಲ್ಲಿ ಹೆಸರಾಗಿದ್ದ ಐಪಿಎಸ್ ಅಧಿಕಾರಿ ಎನ್. ಶಶಿಕುಮಾರ್ ಅವರಿಗೆ ವಹಿಸಿದ್ದು ತಂಡದಲ್ಲಿ 5 ಮಂದಿ ಹಿರಿಯ ಪೊಲೀಸ್ ಅಧಿಕಾರಿಗಳ ವಿಶೇಷ ತಂಡವನ್ನು ರಚಿಸಲಾಗಿದೆ.  ಇದೇ ವೇಳೆ ಪ್ರಕರಣದಲ್ಲಿ ಸಂತೋಷ್ ರಾವ್ ಈಗಾಗಲೇ ವಿಚಾರಣೆ ಎದುರಿಸಿ ಸೆಷನ್ಸ್ ಕೋರ್ಟ್‌ನಿಂದ ಖುಲಾಸೆಯಾಗಿರುವ ಹಿನ್ನೆಲೆಯಲ್ಲಿ, ಅವರ ವಿರುದ್ಧ ಇದೇ ಪ್ರಕರಣದಲ್ಲಿ ಮತ್ತೊಮ್ಮೆ ತನಿಖೆ ಅಥವಾ ವಿಚಾರಣೆ ನಡೆಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ.


ಹೊಸ ಎಸ್.ಐ.ಟಿ ತನಿಖೆಗೆ ಗಡುವು ನೀಡಿದ್ದು ಮೂರು ತಿಂಗಳೊಳಗೆ ಪೂರ್ಣಗೊಳಿಸಿ, ಸಂಬಂಧಪಟ್ಟ ನ್ಯಾಯಾಲಯಕ್ಕೆ ಕಾನೂನು ಪ್ರಕಾರ ಪೊಲೀಸ್ ವರದಿ ಸಲ್ಲಿಸಬೇಕು ಎಂದು ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ. ವಿಶೇಷ ಎಂದರೆ ತನಿಖೆಯನ್ನು ಯಾವುದೇ ವ್ಯಕ್ತಿ ಅಥವಾ ಹಿಂದಿನ ತನಿಖೆ ಆದೇಶದಲ್ಲಿನ ಅಭಿಪ್ರಾಯಗಳಿಂದ ಪ್ರಭಾವಿತರಾಗದೆ ಸ್ವತಂತ್ರವಾಗಿ ನಡೆಸಬೇಕು ಎಂದೂ ನ್ಯಾಯಾಲಯ ಸೂಚಿಸಿದೆ.

ನೂತನ ಎಸ್ಐಟಿ ಶಶಿಕುಮಾರ್ ನೇತೃತ್ವದ ತಂಡ

ಎನ್. ಶಶಿಕುಮಾರ್, ಐ.ಪಿ.ಎಸ್. (ಪೊಲೀಸ್ ಮಹಾನಿರೀಕ್ಷಕರು) – ಮುಖ್ಯಸ್ಥರು,  ಸಿ.ಎಚ್. ಸುಧೀರ್ ಕುಮಾರ್ ರೆಡ್ಡಿ, ಐ.ಪಿ.ಎಸ್. (ಪೊಲೀಸ್ ಕಮಿಷನರ್, ಮಂಗಳೂರು ನಗರ) – ಸದಸ್ಯರು,  ನಿಶಾ ಜೇಮ್ಸ್, ಐ.ಪಿ.ಎಸ್. (ಪೊಲೀಸ್ ಅಧೀಕ್ಷಕರು, ರಾಜ್ಯ ಗುಪ್ತವಾರ್ತೆ, ಬೆಂಗಳೂರು) – ಸದಸ್ಯರು,  ಲೋಕೇಶ್ ಜಗಲಸಾರ್, ಐ.ಪಿ.ಎಸ್. (ಪೊಲೀಸ್ ಅಧೀಕ್ಷಕರು, ಸಿ.ಐ.ಡಿ, ಬೆಂಗಳೂರು) – ಸದಸ್ಯರು,  ವೆಂಕಟೇಶ್ ಪ್ರಸನ್ನ (ಹೆಚ್ಚುವರಿ ಪೊಲೀಸ್ ಅಧೀಕ್ಷಕರು, ಬೆಂಗಳೂರು ಗ್ರಾಮಾಂತರ ಜಿಲ್ಲೆ) – ಸದಸ್ಯರು. ಈ ವಿಶೇಷ ತನಿಖಾ ತಂಡವನ್ನು ಕರ್ನಾಟಕ ರಾಜ್ಯ ವ್ಯಾಪ್ತಿಗೆ ಸಂಬಂಧಿಸಿದಂತೆ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ-2023ರ ಕಲಂ 2(1)(ಯು) ಅಡಿಯಲ್ಲಿ ರಚಿಸಿ ಆದೇಶಿಸಲಾಗಿದೆ.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಜನಸ್ನೇಹಿ,ಜನಾನುರಾಗಿ ಎಸಿಎಫ್ ಹಿಮವತಿ ಭಟ್ ಪದೋನ್ನತಿಯೊಂದಿಗೆ ಗೌರವದ ವರ್ಗಾವಣೆ ಬೆಂಗಳೂರಿಗೆ.

ವಿಧಾನಪರಿಷತ್ ಮಾಜಿ ಸದಸ್ಯ “ಶಾಂತಾರಾಮ್ ಸಿದ್ದಿ” ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ : ಅರಣ್ಯ ಇಲಾಖೆಯ ಕೆನರಾ ವೃತ್ತದಲ್ಲಿ ಉತ್ತಮ ಕರ್ತವ್ಯ …

Leave a Reply

Your email address will not be published. Required fields are marked *