Breaking News

2019 ರ ಪೋಕ್ಸೊ ಪ್ರಕರಣದ ಆರೋಪಿಗೆ 20 ವರ್ಷ ಜೈಲು 1 ಲಕ್ಷ ದಂಡ ಕೋಟ್೯ ತೀರ್ಪು

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ

ಪ್ರತಿಧ್ವನಿ,ಯಲ್ಲಾಪುರ : 2019 ರಲ್ಲಿ ದಾಖಲಾಗಿದ್ದ ಪೋಕ್ಸೋ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಜಿಲ್ಲಾ ಸತ್ರ ನ್ಯಾಯಾಲಯ ಹಾಗೂ ಮಕ್ಕಳ ಸ್ನೇಹಿ ಹಾಗೂ 1 ನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಧೀಶರಾದ ಡಿ.ಎಸ್ ವಿಜಯ್‌ಕುಮಾರ್ ಆರೋಪಿತನಿಗೆ 20 ವರ್ಷಗಳ ಶಿಕ್ಷೆ ಹಾಗೂ 1 ಲಕ್ಷ ರೂ ದಂಡ ವಿಧಿಸಿ ತೀರ್ಪು ನೀಡಿದ್ದಾರೆ.
ಪಟ್ಟಣದ ನಿವಾಸಿ 17 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾನೆಂಬ ದೂರು 2019 ರಲ್ಲಿ ಯಲ್ಲಾಪುರ ಠಾಣೆಯಲ್ಲಿ ದಾಖಲಾಗಿತ್ತು. ದೂರನ್ನಾಧರಿಸಿ ತನಿಖೆ ಕೈಗೊಂಡ ಅಂದಿನ ಪಿಐ ಮಂಜುನಾಥ ನಾಯ್ಕ ಆರೋಪಿಯನ್ನು ಬಂಧಿಸಿ ದೋಷಾರೋಪಣ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ವಿಚಾರಣೆ ನಡೆಯುತ್ತಿರುವಂತೆಯೇ ಹೆಚ್ಚುವರಿ ದೋಷಾರೋಪಣ ಪಟ್ಟಿಯನ್ನು ಪಿಐ ಸುರೇಶ್ ಯಳ್ಳೂರು ಸಲ್ಲಿಸಿದ್ದರು. ಸುಧೀರ್ಘ ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪಿಯ ಮೇಲಿನ ಆರೋಪ ಸಾಬೀತಾದ ಹಿನ್ನಲೆಯಲ್ಲಿ ಆರೋಪಿ ಮುಂಬೈ ಮೂಲದ ಅಸ್ಲಂ ಇಸಾಕ್ ತಂಬೊಳಿ ಎಂಬಾತನಿಗೆ 20 ವರ್ಷ ಜೈಲು ಹಾಗೂ 1 ಲಕ್ಷ ದಂಡ ವಿಧಿಸಿದೆ ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ 4 ಲಕ್ಷ ರೂ ಹಣವನ್ನು ನೊಂದ ಬಾಲಕಿಗೆ ಪರಿಹಾರ ರೂಪದಲ್ಲಿ ನೀಡಬೇಕೆಂದು ಮತ್ತು 1 ಲಕ್ಷ ರೂ ದಂಡವನ್ನು ನೊಂದ ಬಾಲಕಿಗೆ ನೀಡಬೇಕೆಂದು ತೀರ್ಪಿನಲ್ಲಿ ಆದೇಶಿಸಿದೆ.

ಶಿಕ್ಷೆಗೆ ಗುರಿಯಾದ ಆರೋಪಿ ಮುಂಬೈ ಮೂಲದ ಅಸ್ಲಂ ಇಸಾಕ್ ಬ್ಯಾರಿ


ಈ ಪ್ರಕರಣದಲ್ಲಿ ಸರ್ಕಾರದ ಪರವಾಗಿ ಆರೋಪಿತರ ವಿರುದ್ಧ ಶುಭ ಆರ್ ಗಾಂವ್ಕರ್ ವಿಶೇಷ ಸರ್ಕಾರಿ ಅಭಿಯೋಜಕರು ವಾದ ಮಂಡಿಸಿದ್ದಾರೆ.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಯಲ್ಲಾಪುರ ಪೊಲೀಸರ ಕಾರ್ಯ ಕ್ಷಮತೆ – ವರ್ಷದ ಹಿಂದಿನ ಡಕಾಯಿತಿ ಪ್ರಕರಣ ಆರೋಪಿಗಳು ಸ್ವತ್ತಿನ ಸಹಿತ ಅಂದರ್.!!

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಯಲ್ಲಾಪುರ : ತಾಲೂಕಿನ ಅರಬೈಲ್ ಘಟ್ಟದಲ್ಲಿ ಕಾರು ಅಡ್ಡಗಟ್ಟಿ …

Leave a Reply

Your email address will not be published. Required fields are marked *