Breaking News

ಯಲ್ಲಾಪುರ ತಾಲೂಕಿನ ಪಾಂಡಿತ್ಯದ ಗಣಿ‌ಎಂದೇ ಖ್ಯಾತರಾದ ದಿ, ಅನಂತ ವೈದ್ಯರಿಗೆ ಕಾ. ನಿ. ಪ. ಸಂಘದಿಂದ ನುಡಿನಮನ ಸಲ್ಲಿಕೆ‌..

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ.

ಪ್ರತಿಧ್ವನಿ,ಯಲ್ಲಾಪುರ : ಹಿರಿಯ ಪತ್ರಕರ್ತ, ಅರ್ಥಧಾರಿ, ಅಂಕಣಕಾರ ಅನಂತ ವೈದ್ಯ ಅವರಿಗೆ ಪಟ್ಟಣದ ಸರ್ಕಾರಿ ನೌಕರರ ಭವನದಲ್ಲಿ ತಾಲೂಕಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಮಂಗಳವಾರ ನುಡಿನಮನ ಸಲ್ಲಿಸಲಾಯಿತು.
ಸಂಘದ ಅಧ್ಯಕ್ಷ ಕೆ.ಎಸ್.ಭಟ್ಟ ಆನಗೋಡ ಮಾತನಾಡಿ, ಅನಂತ ವೈದ್ಯರ ಮೇರು ವ್ಯಕ್ತಿತ್ವ ಆದರ್ಶಪ್ರಾಯವಾಗಿದೆ ಎಂದರು.
ಜಿಲ್ಲಾ ಕಾರ್ಯದರ್ಶಿ ನರಸಿಂಹ ಸಾತೊಡ್ಡಿ ಮಾತನಾಡಿ, ವೈದ್ಯ, ಪತ್ರಕರ್ತರಾಗಿ, ಸಾಹಿತಿಗಳಾಗಿ, ಉಪನ್ಯಾಸಕರಾಗಿ ವಿವಿಧ ನೆಲೆಯಲ್ಲಿ ತೊಡಗಿಸಿಕೊಳ್ಳುವ ಮೂಲಕ ಮಾದರಿಯ ವ್ಯಕ್ತಿತ್ವ ಹೊಂದಿದ್ದರು ಎಂದರು.
ಸಾಹಿತಿ ಸುಬ್ರಾಯ ಬಿದ್ರೆಮನೆ ಮಾತನಾಡಿ, ಪೌರಾಣಿಕ ಬರಹ, ಆಧ್ಯಾತ್ಮಿಕ ಚಿಂತನೆ, ಯಕ್ಷಗಾನದ ಬಗೆಗಿನ ಆಳವಾದ ಅಧ್ಯಯನ, ಬರವಣಿಗೆ, ಮಾತುಗಾರಿಕೆಯ ಮೂಲಕ ಪರಿಚಿತರಾಗಿದ್ದರು. ಸಾಹಿತ್ಯ, ಅಕ್ಷರ ಸೇವೆಯಲ್ಲಿ ವೈದ್ಯರದು ಬಹುಮುಖಿ ಸಾಧನೆ ಎಂದರು.
ಸಂಘದ ಕಾರ್ಯದರ್ಶಿ ಶ್ರೀಧರ ಅಣಲಗಾರ ಮಾತನಾಡಿ, ಹಿರಿಯರಾಗಿಯೂ ಕಿರಿಯರೊಂದಿಗೆ ಒಡನಾಡಿಗಳಾಗಿ ಸದಾ ಕಲಿಕೆಯ ತುಡಿತ, ಹೊಸ ಬಗೆಯ ಆಲೋಚನೆಯ ಕ್ರಮದಿಂದ ವೈದ್ಯರು ಸ್ಮರಣೀಯರಾಗಿದ್ದಾರೆ ಎಂದರು.
ಜಿಲ್ಲಾ ಸಮಿತಿ ಸದಸ್ಯೆ ಪ್ರಭಾವತಿ ಗೋವಿ ಮಾತನಾಡಿ, ವೈದ್ಯರಂತಹ ಹಿರಿಯರ ಸಾಧನೆಯ ದಾಖಲೀಕರಣ ಆಗಬೇಕೆಂದರು.
ಸದಸ್ಯ ಜಯರಾಜ ಗೋವಿ ಮಾತನಾಡಿ, ವೈದ್ಯರ ವ್ಯಕ್ತಿತ್ವ ಅನುಕರಣೀಯ ಎಂದರು.ಪತ್ರಕರ್ತ ಕೇಬಲ್ ನಾಗೇಶ ಮಾತನಾಡಿ, ವೈದ್ಯರ ನಿಧನದಿಂದ ಸಾಹಿತ್ಯ ಲೋಕಕ್ಕೆ ನಷ್ಟವಾಗಿದೆ ಎಂದರು.ಸದಸ್ಯ ವಿಜಯಕುಮಾರ ನಾಯ್ಕ ಇದ್ದರು.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ವೈ.ಟಿ.ಎಸ್‌.ಎಸ್ ನಿಂದ ರಾಧಾ ಕೃಷ್ಣ ವೇಷ ಸ್ಪರ್ಧೆ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ ವರದಿ, ಯಲ್ಲಾಪುರ : ಸ್ಥಳೀಯ ವೈ.ಟಿ.ಎಸ್.ಎಸ್ …

Leave a Reply

Your email address will not be published. Required fields are marked *