Breaking News

ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಲು ಪ್ರಬಂಧ ಸ್ಪರ್ಧೆ ನಡೆಸಿದ ಯಲ್ಲಾಪುರ ಪೊಲೀಸರು.


ಪ್ರತಿಧ್ವನಿ ಯಲ್ಲಾಪುರ : ಅಂತಾರಾಷ್ಟ್ರೀಯ ಮಾದಕ ಪದಾರ್ಥಗಳ ಬಳಕೆ ಮತ್ತು ಕಳ್ಳಸಾಗಾಣಿಕೆ ವಿರೋಧಿ ದಿನಾಚರಣೆಯ ಪ್ರಯುಕ್ತ ಯಲ್ಲಾಪುರ ಪಟ್ಟಣದ ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಯಲ್ಲಾಪುರ ಪೊಲೀಸ್ ವತಿಯಿಂದ ” ಅಂತರಾಷ್ಟ್ರೀಯ ಮಾದಕ ದ್ರವ್ಯ ಗಳ ಸೇವನೆ ಹಾಗೂ ಸಾಗಾಣಿಕೆ ನಿಷೇದ ಮತ್ತು ಬಳಿಕೆಯಿಂದ ಆಗುವ ದುಷ್ಪರಿಣಾಮ ” ದ ಬಗ್ಗೆ ಪ್ರಬಂಧ ಸ್ಪರ್ಧೆ ಏರ್ಪಡಿಸಲಾಗಿತ್ತು.


ಸ್ಪರ್ಧೆಯಲ್ಲಿ ಪಾಲ್ಗೊಂಡ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ಅಶ್ವಿನಿ ಗಾಂವ್ಕರ್ ಪ್ರಥಮ, ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿಯರಾದ ಐಶ್ವರ್ಯ ನಾಯ್ಕ್,ಕಾವ್ಯ ಪಟಗಾರ  ದ್ವಿತೀಯ ಸ್ಥಾನ ಪಡೆದರೆ,ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಮಾನ್ಸಿ ಬಾಂದೇಕರ್ ತೃತೀಯ ಸ್ಥಾನ ಪಡೆದರು ಸ್ಪರ್ಧೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಪಿಎಸ್ಐ ರಾಜೇಶೇಕರ ವಂದಲಿ ಬಹುಮಾನ ವಿತರಿಸಿದರು.

ಇದೇ ಸಂದರ್ಭದಲ್ಲಿ ಮಾದಕ ದ್ರವ್ಯಗಳ ಸೇವನೆ ಹಾಗೂ ಸಾಗಾಣಿಕೆಯಿದಾಗುವ ದುಷ್ಪರಿಣಾಮಗಳ ಬಗ್ಗೆ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಲಾಯಿತು. ಕಾಲೇಜು ಉಪನ್ಯಾಸಕರು,ವಿದ್ಯಾರ್ಥಿಗಳು, ಪೊಲೀಸ್ ಸಿಬ್ಬಂದಿಗಳು ಉಪಸ್ಥಿತರಿದ್ದು ಕಾರ್ಯಕ್ರಮ ಯಶಸ್ವಿಗೊಳಿಸಿದರು.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಕರ್ನಾಟಕ ಬ್ಯಾಂಕ್ ಯಲ್ಲಾಪುರ ಶಾಖೆಗೆ 15 ವರ್ಷ ಶುಭಕೋರಿದ ಶಾಸಕ ಹೆಬ್ಬಾರ್.

ಪ್ರತಿಧ್ವನಿ ಯಲ್ಲಾಪುರ : ಕೇಂದ್ರ ಸರ್ಕಾರ ಮತ್ತು ಆರ್.ಬಿ.ಐ ಬ್ಯಾಂಕುಗಳ ನಿಯಂತ್ರಣಕ್ಕಾಗಿ ಹಲವಾರು ಬದಲಾವಣೆಗಳನ್ನು ತಂದಿದೆ. ಆದರೆ ಸೌಹಾರ್ದ ಸಹಕಾರಕ್ಕೆ …

Leave a Reply

Your email address will not be published. Required fields are marked *