Breaking News

ಹಿಂದೂಗಳ ನೂತನ ವರ್ಷ ಯುಗಾದಿ ಧಾರ್ಮಿಕ ಶ್ರದ್ದೆಯಿಂದ ಆಚರಿಸಲಾಗುವುದು – ಜಿ‌.ಎನ್‌.ಜಿ

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿ ದ್ವನಿ ಯಲ್ಲಾಪು


ಯಲ್ಲಾಪುರ : ಈ ವರ್ಷ ಯುಗಾದಿ ಉತ್ಸವವನ್ನು ವಿವಿಧ ಬಗೆಯ ಕಾರ್ಯಕ್ರಮಗಳೊಂದಿಗೆ ವಿಜ್ರಂಭಣೆಯಿಂದ ಆಚರಿಸಲಾಗುವುದು ಎಂದು ಯುಗಾದಿ ಉತ್ಸವ ಸಮಿತಿ ಅಧ್ಯಕ್ಷ ಗೋಪಾಲಕೃಷ್ಣ ಎನ್ ಗಾಂವ್ಕರ ಹೇಳಿದರು.


ಅವರು ಪಟ್ಟಣದ ಅಡಿಕೆ ಭವನದಲ್ಲಿ ಯುಗಾದಿ ಉತ್ಸವಾಚರಣೆ ಕುರಿತು ಕರೆಯಲಾದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು.

ಮಾ.27 ರಂದು ಸಂಜೆ 4.30 ಕ್ಕೆ ಉತ್ಸವದ ಜಾಗೃತಿಗಾಗಿ ಬೈಕ್ ರ಼್ಯಾಲಿ ನಡೆಯಲಿದೆ. ಮಾ.30 ರಂದು ಯುಗಾದಿಯ ದಿನ ಸಂಜೆ ಭವ್ಯ ಶೋಭಾಯಾತ್ರೆ ನಡೆಯಲಿದ್ದು. ಪವಿತ್ರ ಪಂಚಾಂಗ ಪಠಣ ನಡೆಯಲಿದೆ.
ಏ.4 ರಂದು ಸಂಜೆ 4 ಕ್ಕೆ ವೈಟಿಎಸ್ಎಸ್ ಮೈದಾನದಲ್ಲಿ ಹಿಂದು ಸಮಾವೇಶ ನಡೆಯಲಿದ್ದು, ಶಿರಳಗಿಯ ಶ್ರೀ ಆಶೀರ್ವಚನ ನೀಡುವರು. ಹಿಂದುತ್ವದ ಪ್ರಖರ ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಭಾಗವಹಿಸುತ್ತಾರೆ ಎಂದರು.
ಪ್ರಮುಖರಾದ ಸೋಮೇಶ್ವರ ನಾಯ್ಕ, ಪ್ರದೀಪ ಯಲ್ಲಾಪುರಕರ್, ಶ್ರೀನಿವಾಸ ಗಾಂವ್ಕರ, ಸುರೇಶ ಹೆಗಡೆ, ನಮಿತಾ ಬೀಡಿಕರ್, ಶ್ಯಾಮಿಲಿ ಪಾಟಣಕರ್, ಸಿದ್ಧಾರ್ಥ ನಂದೊಳ್ಳಿಮಠ, ಕೇಶವ ಗಾಂವ್ಕರ ಇದ್ದರು.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ವೈ.ಟಿ.ಎಸ್‌.ಎಸ್ ನಿಂದ ರಾಧಾ ಕೃಷ್ಣ ವೇಷ ಸ್ಪರ್ಧೆ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ ವರದಿ, ಯಲ್ಲಾಪುರ : ಸ್ಥಳೀಯ ವೈ.ಟಿ.ಎಸ್.ಎಸ್ …

Leave a Reply

Your email address will not be published. Required fields are marked *