
ಪ್ರತಿಧ್ವನಿ ಯಲ್ಲಾಪುರ : ಹನುಮಾಪುರದ ಸರ್ಕಾರಿ ಪ್ರಾಥಮಿಕ ಶಾಲೆಯ ಎಸ್ಡಿಎಂಸಿ ಅಧ್ಯಕ್ಷರಾದ ಅರ್ಜುನ ಬಂಡಿವಡ್ಡರ್ ಹಾಗೂ ಹುನಗುಂದದ ಬಿಜೆಪಿ ಮುಖಂಡರಾದ ಧರಣೇಂದ್ರ ಹೊಂಡದಗಟ್ಟಿ ಅವರು ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.

ಕೆಪಿಸಿಸಿ ಸದಸ್ಯರಾದ ವಿವೇಕ್ ಹೆಬ್ಬಾರ್ ಅವರು ಅರ್ಜುನ ಬಂಡಿವಡ್ಡರ್ ಹಾಗೂ ಧರಣೇಂದ್ರ ಹೊಂಡದಗಟ್ಟಿ ಅವರಿಗೆ ಕಾಂಗ್ರೆಸ್ ಪಕ್ಷದ ಶಾಲು ಹೊದಿಸಿ, ಪಕ್ಷಕ್ಕೆ ಆತ್ಮೀಯವಾಗಿ ಬರಮಾಡಿಕೊಂಡರು.

ಈ ಸಂದರ್ಭದಲ್ಲಿ ಮಾತನಾಡಿದ ವಿವೇಕ್ ಹೆಬ್ಬಾರ್ ಅವರು, ಕಾಂಗ್ರೆಸ್ ಪಕ್ಷದ ತತ್ವ, ಸಿದ್ಧಾಂತ ಹಾಗೂ ಅಭಿವೃದ್ಧಿಪರ ಕಾರ್ಯಗಳನ್ನು ಮೆಚ್ಚಿ ಪಕ್ಷಕ್ಕೆ ಸೇರ್ಪಡೆಗೊಂಡಿರುವ ಇಬ್ಬರನ್ನೂ ಅಭಿನಂದಿಸಿ, ಪಕ್ಷದ ಸಂಘಟನೆ ಬಲಪಡಿಸುವ ನಿಟ್ಟಿನಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸುವಂತೆ ಕರೆ ನೀಡಿದರು.
ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರಾದ ಯಲ್ಲಪ್ಪಾ ಭದ್ರಾಪುರ, ಕುಬೇರ ಹಿರೇಹಳ್ಳಿ, ಗೋವಿಂದ ದೊಡ್ಡಅಂಡಗಿ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.









Prathidvani Yellapura