
ಪ್ರತಿಧ್ವನಿ ಯಲ್ಲಾಪುರ : ಮುಂಡಗೋಡ ತಾಲ್ಲೂಕಿನ ಶಿಡ್ಲಗುಂಡಿ ಗ್ರಾಮದಲ್ಲಿ ಬುಧವಾರ ಎರಡು ಸಾರಿಗೆ ಬಸ್ಗಳು ಮುಖಾಮುಖಿ ಡಿಕ್ಕಿಯಾಗಿ, ಬಸ್ ಚಾಲಕ ಸೇರಿದಂತೆ ಹಲವು ಪ್ರಯಾಣಿಕರು ಗಾಯಗೊಂಡ ಘಟನೆ ನಡೆದಿದೆ.

ಘಟನೆಯಲ್ಲಿ ಗಾಯಗೊಂಡು ಯಲ್ಲಾಪುರ ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಕೆಲವು ಪ್ರಯಾಣಿಕರನ್ನು ಶಾಸಕರಾದ ಶಿವರಾಮ ಹೆಬ್ಬಾರ್ ಮತ್ತು ಪುತ್ರ ವಿವೇಕ್ ಹೆಬ್ಬಾರ್ ಅವರು ಗುರುವಾರ ಆಸ್ಪತ್ರೆಗೆ ಭೇಟಿ ನೀಡಿ, ಆರೋಗ್ಯ ವಿಚಾರಿಸಿದರು.

ಗಾಯಾಳುಗಳಿಗೆ ಅಗತ್ಯ ವೈದ್ಯಕೀಯ ಚಿಕಿತ್ಸೆ ಹಾಗೂ ಸೂಕ್ತ ಆರೈಕೆ ಒದಗಿಸುವಂತೆ ವೈದ್ಯರಿಗೆ ಶಾಸಕ ಹೆಬ್ಬಾರ್ ಸೂಚಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ವಿಜಯ ಮಿರಾಶಿ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.









Prathidvani Yellapura