Breaking News

ಗ್ರಾಮ ಮಟ್ಟದಿಂದಲೆ  “ಭಾರತ್ ಜೋಡೋ” ಬಲಿಷ್ಠವಾಗಿಸಲು ಯುವಕರನ್ನು ಹೆಚ್ಚಾಗಿ ತೊಡಗಿಸಿ – ಹೆಬ್ಬಾರ್.

ಪ್ರತಿಧ್ವನಿ ಯಲ್ಲಾಪುರ : ಭಾರತ್ ಜೋಡೋ ಹಾಗೂ ಎಸ್‌ಐಆರ್‌ನ 2ನೇ ಹಂತದ ಕಾರ್ಯಚಟುವಟಿಕೆಗಳ ಕುರಿತು ಮಾನ್ಯ ಶಾಸಕರಾದ ಶಿವರಾಮ ಹೆಬ್ಬಾರ್ ಅವರು ಇಂದು ಯಲ್ಲಾಪುರ ಪಟ್ಟಣದ ಕಾರ್ಯಾಲಯದಲ್ಲಿ ಯಲ್ಲಾಪುರ, ಮುಂಡಗೋಡ ಹಾಗೂ ಬನವಾಸಿ ಭಾಗದ ಪ್ರಮುಖರ ಸಭೆ ನಡೆಸಿದರು.

ಈ ವೇಳೆ ಮಾತನಾಡಿದ ಶಾಸಕರು,ಭಾರತ್ ಜೋಡೋ ಯುವ ಸಂಘದ ಮೂಲಕ ಹೆಚ್ಚಿನ ಸಂಖ್ಯೆಯಲ್ಲಿ ಯುವಕರನ್ನು ಸಂಘಟನೆಯೊಂದಿಗೆ ಸಂಪರ್ಕಿಸಿ, ಗ್ರಾಮ ಮಟ್ಟದಿಂದಲೇ ಸಂಘಟನೆಯನ್ನು ಪರಿಣಾಮಕಾರಿಯಾಗಿ ಕಟ್ಟುವ ಅಗತ್ಯವನ್ನು ತಿಳಿಸಿದರು ಹಾಗೂ ಸದಸ್ಯರ ನೋಂದಣಿಯನ್ನು ಪರಿಣಾಮಕಾರಿಯಾಗಿ ನಡೆಸಿ, ಯುವ ಸಮುದಾಯದ ಭಾಗವಹಿಸುವಿಕೆಯನ್ನು ಹೆಚ್ಚಿಸುವಂತೆ ಕಾರ್ಯಕರ್ತರಿಗೆ ಮಾರ್ಗದರ್ಶನ ನೀಡಿದರು.

ಸಭೆಯಲ್ಲಿ ಕೆಪಿಸಿಸಿ ಸದಸ್ಯರಾದ ವಿವೇಕ್ ಹೆಬ್ಬಾರ್ ಅವರು ಭಾರತ್ ಜೋಡೋ ಯುವ ಸಂಘದ ರಚನೆ, ಸಂಘಟನೆಯ ಉದ್ದೇಶ ಹಾಗೂ ಸದಸ್ಯರ ನೋಂದಣಿ ಪ್ರಕ್ರಿಯೆ ಕುರಿತು ಸಮಗ್ರ ಮಾಹಿತಿ ನೀಡಿದರು. ಯುವಜನರನ್ನು ಸಂಘಟನೆಯೊಂದಿಗೆ ಸಕ್ರಿಯವಾಗಿ ಸಂಪರ್ಕಿಸುವುದು, ಪಕ್ಷದ ಸಂಘಟನೆಯನ್ನು ತಳಮಟ್ಟದಲ್ಲಿ ಮತ್ತಷ್ಟು ಬಲಪಡಿಸುವುದು ಹಾಗೂ ಯುವಕರಿಗೆ ಹೆಚ್ಚಿನ ಜವಾಬ್ದಾರಿ ನೀಡುವ ಕುರಿತು ಅವರು ಸಭೆಯಲ್ಲಿ ವಿವರಿಸಿದರು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ವಿ.ಎಸ್. ಭಟ್, ಕೃಷ್ಣ ಹಿರೇಹಳ್ಳಿ, ಗಣಪತಿ ನಾಯ್ಕ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎನ್.ಕೆ. ಭಟ್, ಡಾ. ರವಿ ಭಟ್ ಬರಗದ್ದೆ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ವಿಜಯ ಮಿರಾಶಿ, ಕೆಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಎಚ್.ಎಂ. ನಾಯ್ಕ, ಪ್ರಚಾರ ಸಮಿತಿ ಅಧ್ಯಕ್ಷರಾದ ದ್ಯಾಮಣ್ಣ ದೊಡ್ಮನಿ, ನರಸಿಂಹ ನಾಯ್ಕ, ಕೆ.ಸಿ. ಗಲಭಿ, ಗ್ಯಾರಂಟಿ ಸಮಿತಿ ಅಧ್ಯಕ್ಷರಾದ ಉಲ್ಲಾಸ ಶಾನಭಾಗ, ಹಿಂದುಳಿದ ವರ್ಗಗಳ ಸಮಿತಿಯ ಜಿಲ್ಲಾ ಉಪಾಧ್ಯಕ್ಷರಾದ ಪ್ರೇಮಾನಂದ ನಾಯ್ಕ, ನಗರ ಘಟಕ ಸಮಿತಿ ಅಧ್ಯಕ್ಷರಾದ ಸತೀಶ್ ನಾಯ್ಕ ಸೇರಿದಂತೆ ಪಕ್ಷದ ವಿವಿಧ ಹಂತದ ಪದಾಧಿಕಾರಿಗಳು, ಘಟಕಾಧ್ಯಕ್ಷರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಯಲ್ಲಾಪುರದಲ್ಲಿ ಅತ್ಯಂತ ಸಂಭ್ರಮದಿ ಆಚರಿಸಿದ ಈದ್-ಮಿಲಾದ್ ಪೊಲೀಸರ ಬಿಗಿ ಬಂದೋಬಸ್ತ್.

ಪ್ರತಿಧ್ವನಿ ಯಲ್ಲಾಪುರ : ಪಟ್ಟಣದಲ್ಲಿ ಮುಸ್ಲಿಂ ಸಮುದಾಯದ ಪವಿತ್ರ ಈದ್ ಮಿಲಾದ್ ಆಚರಣೆ ಅತ್ಯಂತ ಯಶಸ್ವಿಯಾಗಿ ನಡೆಯಿತು. ಪಟ್ಟಣದ ಮೂಲೆ …

Leave a Reply

Your email address will not be published. Required fields are marked *