
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ…..
ಪ್ರತಿಧ್ವನಿ,ಯಲ್ಲಾಪುರ-ಕೇವಲ ನಗರ ಪಟ್ಟಣ ಪ್ರದೇಶಗಳ ಅಭಿವೃದ್ಧಿ ಒಂದನ್ನೆ ಗಮನದಲಿಟ್ಟುಕೊಳ್ಳದೆ ಗ್ರಾಮೀಣ ಭಾಗದ ರಸ್ತೆಗಳ ಅಭಿವೃದ್ಧಿ ಕುರಿತು ಸರ್ಕಾರದ ವಿವಿಧ ಮಂತ್ರಿಗಳೊಡನೆ ಮತ್ತು ಮುಖ್ಯ ಮಂತ್ರಿಗಳೊಡನೆ ಕ್ಷೇತ್ರದ ಅವಶ್ಯಕತೆಗಳ ಬಗ್ಗೆ ಮನವರಿಕೆ ಮಾಡಿಕೊಟ್ಟು ಅನುದಾನ ಬಿಡುಗಡೆ ಮಾಡಿಸುವಲ್ಲಿ ಸಚಿವ ಹೆಬ್ಬಾರ್ ಪ್ರಯತ್ನ ಅವಿರತವಾಗಿದೆ.
ತಾಲೂಕಿನ ಆನಗೋಡು ಪಂಚಾಯತ ವ್ಯಾಪ್ತಿಯ ಬರಗದ್ದೆ – ಸಾವಗದ್ದೆ ರಸ್ತೆ ನಿರ್ಮಾಣಕ್ಕೆ 5 ಕೋಟಿ ಹಣ ಮಂಜೂರಾಗಿದ್ದು ಸೋಮವಾರ ಸಚಿವ ಶಿವರಾಮ್ ಹೆಬ್ಬಾರ್ ರಸ್ತೆ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದರು.

ನಂತರ ಮಾತನಾಡಿದ ಅವರು ಇಂದು ಅಥವಾ ಯಾವುದೆ ಕ್ಷಣದಲ್ಲಿ ಚುನಾವಣೆ ಘೋಷಣೆಯಾಗಲಿದ್ದು ನನ್ನ ಕನಸಿನಂತೆ ಗ್ರಾಮೀಣ ಭಾಗದ ಅಭಿವೃದ್ಧಿ ಕಾರ್ಯ ಗಳಿಗೆ ತೊಡಕಾಗಬಾರದಾಗಿದೆ. ಈ ದಿಸೆಯಲ್ಲಿ ಹಲವು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದೆ. ಉತ್ತಮ ಕೆಲಸಗಳು ಸಾದ್ಯವಾಗಬೇಕಾದರೆ ಉತ್ತಮವಾದ ಗುತ್ತಿಗೆದಾರರ ಅವಶ್ಯಕತೆ ಇದೆ ಈ ದಿಸೆಯಲ್ಲಿ ಕಾಮಗಾರಿ ಗುತ್ತಿಗೆ ಉತ್ತಮರ ಕೈಗೆ ಸಿಕ್ಕಿರುವುದು ಸಂತಸವಾಗಿದೆ ಎಂದು ಹೇಳಿದರು.

ನಂತರ ಪಟ್ಟಣದ ಬಸ್ ನಿಲ್ಲಾಣದಿಂದ ಎಪಿಎಂಸಿ ವರೆಗಿನ ರಸ್ತೆ ನಿರ್ಮಾಣದ ಭೂಮಿಪೂಜೆ ನೆರವೇರಿಸಿದರು.

ಈ ಎರಡು ಕಾರ್ಯಕ್ರಮಗಳ ಸಂದರ್ಭದಲ್ಲಿ ಲೋಕೋಪಯೋಗಿ ಎಇಇ ವಿ.ಎಂ.ಭಟ್, ಮಂಡಲಾಧ್ಯಕ್ಷ ಗೋಪಾಲಕೃಷ್ಣ ಎನ್ ಗಾಂವ್ಕರ್, ಪಟ್ಟಣ ಪಂಚಾಯತ್ ಅಧ್ಯಕ್ಷೆ ಸುನಂದದಾಸ್ ಉಪಾಧ್ಯಕ್ಷೆ ಶಾಮಿಲಿ ಪಾಟಣ್ಕರ್, ಸದಸ್ಯರಾದ ಸೋಮೇಶ್ವರ ನಾಯ್ಕ, ನಾಗರಾಜ್ ಅಂಕೋಲೆಕರ್ ಪುಷ್ಪಾ ನಾಯ್ಕ್, ಗಣಪತಿ ಮುದ್ದೇಪಾಲ್, ರವಿಭಟ್ ಬರಗದ್ದೆ, ರಾಮಣ್ಣ ಚಿಕ್ಯಾನಮನೆ, ಪಿಜಿ.ಭಟ್, ನಾಗೇಂದ್ರ ಭಟ್ , ನರಸಿಂಹ ಬೊಳಪಾಲ್, ಶಿರೀಷ್ ಪ್ರಭು ಇನ್ನಿತರ ಜನಪ್ರತಿನಿಧಿಗಳು ಹಿರಿಯ ನಾಗರಿಕರು , ಸಾರ್ವಜನಿಕರು ಕಾರ್ಯಕರ್ತರು ಇನ್ನೂ ಅನೇಕ ಮಂದಿ ಪಾಲ್ಗೊಂಡಿದ್ದರು.
ಆತ್ಮೀಯ ಓದುಗರ ಗಮನಕ್ಕೆ
ಪ್ರತಿಧ್ವನಿ ಯಲ್ಲಾಪುರ ನಿಮ್ಮಿಂದ ವಿಶೇಷ ಲೇಖನವನ್ನು ಆಹ್ವಾನಿಸುತ್ತಿದೆ. ಪ್ರಸಕ್ತ ವಿದ್ಯಮಾನಗಳು, ಪ್ರೇಕ್ಷಣೀಯ ಸ್ಥಳಗಳ ಮಾಹಿತಿ, ಇನ್ನಿತರ ಪ್ರಮುಖ ವಿಷಯಗಳ ಕುರಿತು ನೀವು ಬರೆಯಲು ಪ್ರಾರಂಭಿಸಿ ನಿಮ್ಮ ಲೇಖನವನ್ನು ನಮ್ಮ ಪ್ರತಿಧ್ವನಿ ಯಲ್ಲಾಪುರ ವೆಬ್ ನಲ್ಲಿ ಪ್ರಕಟಿಸಲಾಗುವುದು.
>> ನಿಮ್ಮ ಲೇಖನ ಸಮಾಜಕ್ಕೆ ಉತ್ತಮ ಸಂದೇಶ ನೀಡುವಂತೆ ಮತ್ತು ಜಾಗೃತಗೊಳಿಸುವಂತಿರಬೇಕು.
>>>ಯಾವುದೆ ವ್ಯಕ್ತಿ, ಧರ್ಮ, ಜಾತಿ, ಸಂಘ ಸಂಸ್ಥೆಗಳ ಹಾಗು ರಾಜಕೀಯ ಪಕ್ಷ ಅಥವ ವ್ಯಕ್ತಿಗಳ ಭಾವನೆಗೆ ದಕ್ಕೆಯಾಗುವಂತಿರಬಾರದು.
>>>ಮೊಬೈಲ್ ನಲ್ಲೆ ಟೈಪ್ ಮಾಡಿ ಕಳಿಸಬೇಕು.
>>>ನಿಮ್ಮ ಹೆಸರು, ವಿಳಾಸ, ಮತ್ತು ನಿಮ್ಮ ಭಾವಚಿತ್ರ ಕಡ್ಡಾಯವಾಗಿ ಕಳಿಸಬೇಕು.
>>>ನಿಮ್ಮ ಲೇಖನವನ್ನು ” ಪ್ರತಿಧ್ವನಿ ಯಲ್ಲಾಪುರ ಅತಿಥಿ ಬರಹ” ದ ಅಡಿಯಲ್ಲಿ ಪ್ರಕಟಿಸಲಾಗುವುದು.
>>>ವಿ.ಸೂ<<< ನಿಮ್ಮ ಲೇಖನ ಯಾವಾಗ ಪ್ರಕಟಿಸಬೇಕು ಅಥವ ಬೇಡವೊ ಎಂಬ ನಿರ್ಧಾರ ಪ್ರತಿಧ್ವನಿ ಸಂಪಾದಕರ ಇಚ್ಚೆಯಾಗಿರುತ್ತದೆ.
ಮತ್ತೇಕೆ ತಡ ನೀವು ಬರೆಯಿರಿ
ಈ ವಾಟ್ಸಪ್ ಸಂಖ್ಯೆಗೆ ಕಳುಹಿಸಿ
9113096085, 8088255121

Prathidvani Yellapura