Breaking News

ಗ್ರಾಮ ಸಭೆಗೆ ಬಾರದ ಅಧಿಕಾರಿಗಳು ಬಹಿಷ್ಕರಿಸಿದ ಗ್ರಾಮಸ್ಥರು.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ

ಪ್ರತಿಧ್ವನಿ, ಯಲ್ಲಾಪುರ : ತಾಲೂಕಿನ ಕಂಪ್ಲಿ ಗ್ರಾಮ ಪಂಚಾಯತ ಗ್ರಾಮಸಭೆ ಜು,27 ರ ಗುರುವಾರ ಮದ್ಯಾಹ್ನ ನಿಗಧಿಯಾಗಿತ್ತು. ಆದರೆ ಸಭೆಗೆ ಬರಬೇಕಾದ ಪ್ರಮುಖ ಇಲಾಖೆಗಳ ಅಧಿಕಾರಿಗಳು ಬಾರದಿರುವುದು ಅಲ್ಲದೆ ಸಮಯಕ್ಕೆ ಸರಿಯಾಗಿ ಬರಬೇಕಾದ ನೋಡಲ್ ಅಧಿಕಾರಿಯೆ ತಡವಾಗಿ ಬಂದದ್ದರಿಂದ ಜನರು ತೀವ್ರ ಅಸಮಾಧಾನಗೊಂಡು ಸಭೆಯನ್ನು ಬಹಿಷ್ಕರಿಸಿದ್ದಾರೆ.
ಜನರ ಅತ್ಯಾವಶ್ಯಕ ಮಾಹಿತಿ ತಿಳಿಯಬೇಕಿದ್ಷ ಮತ್ತು ತಿಳಿಸಬೇಕಿದ್ದ ಕೃಷಿ,ತೋಟಗಾರಿಕೆ,ಪಂಚಾಯತ್ ರಾಜ್ ಇಂಜನಿಯರಿಂಗ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ, ಸಾರಿಗೆ, ಸಮಾಜ ಕಲ್ಯಾಣ ಇಲಾಖೆಗಳ ಅಧಿಕಾರಿಗಳು ಸಭೆಗದ ಹಾಜರಾಗದೆ ಇರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ ಈ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ಮತ್ತು ಸದಸ್ಯರು ಜನರ ಸಮ್ಮುಖದಲ್ಲಿ ನಿರ್ಧರಿಸಿ ದಿನಾಂಕ 7- 8-23 ರ ಸೋಮವಾರ ಮಧ್ಯಾಹ್ನ 3 ಗಂಟೆಗೆ ಸಭೆ ನಿಗದಿಪಡಿಸಲಾಯಿತು.
ಆ ದಿನವು ಇದೇರೀತಿ ಪುನರಾವರ್ತನೆಯಾದರೆ ಯಾವಯಾವ ಇಲಾಖೆಗಳು ಗ್ರಾಮ ಸಭೆಗೆ ಹಾಜರಾಗುವುದಿಲ್ಲವೋ ಆಯಾ ಇಲಾಖೆಯ ಎದುರು ಕುಳಿತು ಧರಣಿ ನಡೆಸಬೇಕಾಗುತ್ತದೆ ಎಂದು‌ ಗ್ರಾಮಸ್ಥರು ಎಚ್ಚರಿಸಿದ್ದಾರೆ.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಯಲ್ಲಾಪುರ ಹೆಸ್ಕಾಂ ಎದುರು ಸಾಮಾಜಿಕ ಕಾರ್ಯಕರ್ತ ತಾರನಾಥ್ ನಾಯ್ಕ್ ಮತ್ತು ತಂಡದಿಂದ ದಿಡೀರ್ ಪ್ರತಿಭಟನೆ.

ಪ್ರತಿಧ್ವನಿ ಯಲ್ಲಾಪುರ :  ಪಟ್ಟಣದ ಹೆಸ್ಕಾಂ ಕಚೇರಿ ಎದುರು ಸಾಮಾಜಿಕ ಕಾರ್ಯಕರ್ತ ತಾರಾನಾಥ ನಾಯ್ಕ್ ನೇತೃತ್ವದಲ್ಲಿ ಅಂಬೇಡ್ಕರ್ ಪರ್ವ ದಲಿತ …

Leave a Reply

Your email address will not be published. Required fields are marked *