Breaking News

ಕೊರನ ದಿಂದ ಸಾವನಪ್ಪಿದ ಬಹುತೇಕರಿಗೆ ಮುಕ್ತಿ ನೀಡಿದ ಆಂಬುಲೆನ್ಸ್ ಚಾಲಕ ಪ್ರಮೋದ ನಿಧನ..


ಪ್ರತಿಧ್ವನಿ,ಯಲ್ಲಾಪುರ : ಪಟ್ಟಣ ಬಾಳಗಿಮನೆ ಮಾಗೋಡು ಕ್ರಾಸ್ ನಿವಾಸಿ ಪ್ರಮೋದ ಮಹಾಬಲೇಶ್ವರ ನಾಯ್ಕ ( 49) ಹೃದಯಾಘಾತದಿಂದ ನಿಧನರಾಗಿರುತ್ತಾರೆ.
ಪ್ರಮೋದ ಸುಮಾರು 10 ಕ್ಕು ಹೆಚ್ಚು ವರ್ಷಗಳಿಂದ ಯಲ್ಲಾಪುರ ತಾಲೂಕು ಸರ್ಕಾರಿ ಆಸ್ಪತ್ರೆ ಬುಲೆನ್ಸ್ ಚಾಲಕನಾಗಿ ಉತ್ತಮ ಸೇವೆ ಸಲ್ಲಿಸಿದ್ದರು. ಕಳೆದ ಕೆಲವು ವರ್ಷಗಳಿಂದ ಮನೆಯ ಹತ್ತಿರದಲ್ಲೆ ವಾಟರ್ ಸರ್ವಿಸ್ ಸೆಂಟರ್ ನಡೆಸುತ್ತ ಜೀವನ ಸಾಗಿಸುತ್ತಿದ್ದರು.
ಕೊರೊನ ಸಂಕಷ್ಟದ ಸಮಯದಲ್ಲಿ ಕೆಲವು ಸೋಂಕಿತರನ್ನು ಮುಟ್ಟಲು ಭಯಪಡುವ ಸಮಯದಲ್ಲಿ ಮಾನವೀಯತೆಯಿಙದ ಉಪಚರಿಸಿ. ಆಂಬುಲೆನ್ಸ್ ನಲ್ಲಿ ಕರೆತರುವುದು ಆಕಸ್ಮಿಕ ಸಾವನಪ್ಪಿದವರ ಮುಕ್ತಿ ಕಾರ್ಯದಲ್ಲು ಯಾವುದಕ್ಕು ಅಂಜದೆ ಸಹಾಯಕ್ಕೆ ಮುಂದೆ ಬರುವ ಉತ್ತಮ ಮಾನವೀಯ ಮೌಲ್ಯದ ವ್ಯಕ್ತಿಯಾಗಿದ್ದರು.
ಗುರುವಾರ ನಿಧನರಾಗಿದ್ದು ಹೆಂಡತಿ, ಒರ್ವ ಮಗಳು ಹಾಗು ಅಪಾರ ಬಂಧು ಬಳಗವನ್ನು ಅಗಲಿರುತ್ತಾರೆ.
ಆಂಬುಲೆನ್ಸ್ ಚಾಲಕ ಪ್ರಮೋದನ ಸಾವಿಗೆ ಯಲ್ಲಾಪುರ ಸರ್ಕಾರಿ ಆಸ್ಪತ್ರೆ ಎಲ್ಲಾ ಸಿಬ್ಬಂದಿಗಳು ಹಾಗು ಆಂಬುಲೆನ್ಸ್ ಚಾಲಕರ ಬಳಗ ಕಂಬನಿ ಮಿಡಿದಿದೆ.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ವೈ.ಟಿ.ಎಸ್‌.ಎಸ್ ನಿಂದ ರಾಧಾ ಕೃಷ್ಣ ವೇಷ ಸ್ಪರ್ಧೆ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ ವರದಿ, ಯಲ್ಲಾಪುರ : ಸ್ಥಳೀಯ ವೈ.ಟಿ.ಎಸ್.ಎಸ್ …

Leave a Reply

Your email address will not be published. Required fields are marked *