Breaking News

ಅಂತೂ ಇಂತೂ ಕಾಲ ಕೂಡಿ ಬಂತು ಜಿಲ್ಲಾ ಉಸ್ತುವಾರಿ ಮಂತ್ರಿ ಮಂಕಾಳ ವೈಧ್ಯ ಯಲ್ಲಾಪುರ ಭೇಟಿ

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ

ಪ್ರತಿಧ್ವನಿ ಯಲ್ಲಾಪುರ : ತಾಲೂಕಿನ ಪ್ರಗತಿ ಪರಿಶೀಲನಾ ಸಭೆಯು ಅ.3೦ರಂದು ಪಟ್ಟಣದ ಎಪಿಎಂಸಿ ರೈತ ಭವನದಲ್ಲಿ ಆಯೋಜನೆಗೊಂಡಿದ್ದು ಚುನಾವಣೆ ಮುಗಿದು ಸಚಿವರಾಗಿ, ಉಸ್ತುವಾರಿ ಸಚಿವರೂ ಆಗಿ ಅಧಿಕಾರ ವಹಿಸಿಕೊಂಡ ಭಟ್ಕಳ ಶಾಸಕ ಮಂಕಾಳು ವೈದ್ಯ ಯಲ್ಲಾಪುರ ತಾಲೂಕಿನ ವಿವಿಧ ಇಲಾಖೆಯ ಪ್ರಗತಿ ಪರಿಶೀಲನ ಸಭೆಯಲ್ಲಿ ಭಾಗವಹಿಸಲಿದ್ದು ಉಸ್ತುವಾರಿ ಸಚಿವರು ಯಲ್ಲಾಪುರಕ್ಕೆ ಭೇಟಿ ನೀಡಲಿಲ್ಲ ಎಂಬ ಮಾತಿಗೆ ತೆರೆ ಎಳೆಯಲಿದ್ದಾರೆ.


ಕಳೆದ ವಿಧಾನಸಭಾ ಚುನಾವಣೆ ಮುಗಿದು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಮಂತ್ರಿ ಭಾಗ್ಯ ಪಡೆದ ಭಟ್ಕಳ ಶಾಸಕ ಮಂಕಾಳ ವೈದ್ಯ.

ಜಿಲ್ಲಾ ಉಸ್ತುವಾರಿ ಜವಾಬ್ದಾರಿಯನ್ನು ಹೆಗಲಿಗೇರಿಸಿಕೊಂಡ ನಂತರ ಬಹು ಸಮಯದವರೆಗೆ ಘಟ್ಟದ ಮೇಲಿನ ತಾಲೂಕುಗಳಿಗೆ ಭೇಟಿ ನೀಡದೇ ನಿರ್ಲಕ್ಷ್ಯ ತೋರಿದ್ದಾರೆ ಎಂಬ ಮಾತುಗಳು ಕಾಂಗ್ರೆಸ್ ಕಾರ್ಯಕರ್ತರ ಆದಿಯಾಗಿ ಸಾರ್ವಜನಿಕರ ಅಭಿಪ್ರಾಯವಾಗಿತ್ತು.ನಂತರದ ದಿನಗಳಲ್ಲಿ ಕೆಲವೆಡೆ ಭೇಟಿ ನೀಡಿದ ಸಚಿವರು ಯಲ್ಲಾಪುರ ಕ್ಷೇತ್ರಕ್ಕೆ ಮಾತ್ರ ಬಾರದೇ ಅಚ್ಛರಿ ಮೂಡಿಸಿದ್ದರು.


ಒಂದು ಮೂಲಗಳ ಪ್ರಕಾರ ಯಲ್ಲಾಪುರ ಕ್ಷೇತ್ರದ ಶಾಸಕ ಶಿವರಾಮ ಹೆಬ್ಬಾರ್ , ಮಂಕಾಳ ವೈದ್ಯರಿಗೆ ಅತ್ಯಂತ ಆಪ್ತರಾಗಿದ್ದು ಹೆಬ್ಬಾರ್ ಕೋಟೆಯೊಳಗೆ ಕಾಲಿಡಲು ಹಿಂದೇಟು ಹಾಕುತ್ತಿದ್ದಾರೆ ಎಂಬ ಮಾತುಗಳೂ ಕೇಳಿ ಬಂದಿತ್ತು. ಆದರೀಗ ತಾಲೂಕಾಡಳಿತ ಆಯೋಜಿಸಿರುವ ತಾಲೂಕು ಮಟ್ಟದ ಎಲ್ಲ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಗೆ ಉಸ್ತುವಾರಿ ಸಚಿವರು ಆಗಮಿಸುತ್ತಿದ್ದು ಶಾಸಕ ಶಿವರಾಮ ಹೆಬ್ಬಾರ್ ಅವರೂ ಸಹ ಉಪಸ್ಥಿತರಿರಲಿದ್ದಾರೆಂಬ ಮಾಹಿತಿಯನ್ನು ಮಾಧ್ಯಮಗಳಿಗೆ ತಾಲೂಕು ಆಡಳಿತ ಮಾಹಿತಿ ರವನಿಸಿದೆ.
ವಿಶೇಷವಾಗಿ ಸಭೆಯ ನಂತರ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿ ಸಂಬಂಧಿಸಿದ ಇಲಾಖೆ ಮತ್ತು ಅಧಿಕಾರಿಗಳಿಗೆ ನಿರ್ದೇಶನ ನೀಡಲಿದ್ದಾರೆ ಎಂದು ಮಾಹಿತಿ ಬಿಡುಗಡೆ ಮಾಡಿದ್ದಾರೆ.

ಒಂದು ವೇಳೆ ಕಾರಣಾಂತರದಿಂದ ಅಥವ ಪ್ರೋಟೋಕಾಲ್ ಗಾಗಿ ಈ ಆಹ್ವಾನವಾಗಿ ನಿಗದಿಪಡಿಸಿದಂತೆ ಕೆಡಿಪಿ ಸಭೆಗೆ ವೈದ್ಯರು ಬರದೆ ಹೋದರೆ ಕ್ಷೇತ್ರದಾದ್ಯಂತ ಬೇರೆ ರೀತಿಯ ಸಂದೇಶ ರವಾನೆಯಾಗುವ ಸಾದ್ಯತೆ ಇದ್ದು ಸಭೆಗೆ ಉಸ್ತುವಾರಿ ಸಚಿವರು ಆಗಮಿಸಲೆಬೇಕಾದ ಅನಿವಾರ್ಯತೆ ಇದೆ ಎನ್ನುತ್ತಿದ್ದಾರೆ ರಾಜಕೀಯ ವಿಮರ್ಶಕರು

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ವೈ.ಟಿ.ಎಸ್‌.ಎಸ್ ನಿಂದ ರಾಧಾ ಕೃಷ್ಣ ವೇಷ ಸ್ಪರ್ಧೆ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ ವರದಿ, ಯಲ್ಲಾಪುರ : ಸ್ಥಳೀಯ ವೈ.ಟಿ.ಎಸ್.ಎಸ್ …

Leave a Reply

Your email address will not be published. Required fields are marked *