Breaking News

ಯಲ್ಲಾಪುರದಲ್ಲಿ “ರಾಷ್ಟ್ರೀಯ ಫಲ್ಸ್ ಪೊಲಿಯೋ” ಕಾರ್ಯಕ್ರಮ ಉದ್ಘಾಟಿಸಿದ ಶಾಸಕ ಹೆಬ್ಬಾರ್.


ಪ್ರತಿಧ್ವನಿ ಯಲ್ಲಾಪುರ : ಯಾವುದೆ ಪೋಷಕರು ತಮ್ಮ ಮಕ್ಕಳ ಉಜ್ವಲ ಆರೋಗ್ಯ ಭವಿಷ್ಯಕ್ಕಾಗಿ ಆರೋಗ್ಯ ಇಲಾಖೆ ಕೈಗೊಳ್ಳುವ ಇಂತಹ ಸಾರ್ಥಕ ಕಾರ್ಯಕ್ರಮಗಳಿಂದ ವಂಚಿತರಾಗದಂತೆ ಜಾಗೃತಿ ವಹಿಸಬೇಕಿದೆ. ಪೋಲಿಯೊ ಮುಕ್ತ ಭಾರತದ ಸಂಕಲ್ಪಕ್ಕೆ ಸಹಕಾರಿಯಾಗಲಿದೆ. ಇಂತಹ ಸಾರ್ಥಕ ಕಾರ್ಯದಲ್ಲಿ ತೊಡಗಿರುವ ಆರೋಗ್ಯ ಇಲಾಖೆಯ ಸರ್ವರಿದು ಅಭಿನಂದಿಸುತ್ತೇನೆ ಎಂದು ಶಾಸಕ ಶಿವರಾಮ ಹೆಬ್ಬಾರ್ ಹೇಳಿದರು.

ಅವರು ಪಟ್ಟಣದ ಕೆ.ಎಸ್‌.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ತಾಲೂಕು ಆರೋಗ್ಯ ಇಲಾಖೆಯಿಂದ ಹಮ್ಮಿಕೊಂಡ “ರಾಷ್ಟ್ರೀಯ ಪಲ್ಸ್ ಪೋಲಿಯೊ” ಕಾರ್ಯಕ್ರಮವನ್ನು ಪುಟ್ಟ ಕಂದಮ್ಮಗಳಿಗೆ ಎರಡು ಪೊಲಿಯೊ ಹನಿ ಹಾಕುವ ಮೂಲಕ ಉದ್ಘಾಟಿಸಿ ಸಂದೇಶ ನೀಡಿದರು.


ಈ ಸಂದರ್ಭದಲ್ಲಿ ತಹಶಿಲ್ದಾರ್ ಎಂ.ಆರ್.ಕುಲಕರ್ಣಿ, ತಾಲ್ಲೂಕು ಆರೋಗ್ಯಾಧಿಕಾರಿ ತಾಲೂಕು ಆಸ್ಪತ್ರೆ ವೈಧ್ಯಾಧಿಕಾರಿ ಡಾ,ನರೇಂದ್ರ ಪವಾರ್,ತಾಲೂಕಿನ ಪ್ರಮುಖ ಅಧಿಕಾರಿಗಳು,ಆರೋಗ್ಯ ಸಿಬ್ಬಂದಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ದೇಶದ ಪ್ರಧಾನಿ,ಅರಣ್ಯ ಸಚಿವರು ಮತ್ತು ಸಚಿವಾಲಯದ ಕಾರ್ಯದರ್ಶಿಯವರಿಗೆ ಪಶ್ಚಿಮ ಘಟ್ಟಗಳ ವಿಚಾರದಲ್ಲಿ ಮದ್ಯ ಪ್ರವೇಶಿಸುವಂತೆ ಚಂದ್ರಕಾಂತ ಕೊಚರೇಕರ್ ಮನವಿ

ಪ್ರತಿಧ್ವನಿ ಯಲ್ಲಾಪುರ :  ಕರ್ನಾಟಕದ ಪಶ್ಚಿಮ ಘಟ್ಟ ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶ (ESA) ಎಂದು ಘೋಷಿಸುವ ಸಂಬಂಧ 27-07-2026ರಂದು …

Leave a Reply

Your email address will not be published. Required fields are marked *