Breaking News

ಮಂಚಿಕೇರಿ ಪದವಿ ಪೂರ್ವ ಕಾಲೇಜ್ ನಲ್ಲಿ ನಾಡ ಪ್ರಭು ಕೆಂಪೇಗೌಡ ಜಯಂತಿ ಆಚರಣೆ..

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ

ಪ್ರತಿಧ್ವನಿ ಯಲ್ಲಾಪುರ : ತಾಲೂಕಿನ ಮಂಚೀಕೇರಿಯ ಸರ್ಕಾರಿ ಪದವಿಪೂರ್ವ ಕಾಲೇಜಿನ ಸಭಾಭವನದಲ್ಲಿ ನಾಡಪ್ರಭು ಕೆಂಪೇಗೌಡರ ೫೧೪ನೇ ಜಯಂತಿ ಉತ್ಸವವನ್ನು ಕೆಂಪೇಗೌಡರ ಭಾವಚಿತ್ರಕ್ಕೆ ಪುಷ್ಪನಮನ ಮಾಡುವುದರ ಮೂಲಕ ಆಚರಿಸಲಾಯಿತು.


ಕೆಂಪೇಗೌಡರ ಜೀವನ ಸಾಧನೆ ಕುರಿತು ಅತಿಥಿ ಉಪನ್ಯಾಸಕ ಶ್ರೀಕಾಂತ ನಾಯ್ಕ ಉಪನ್ಯಾಸ ನೀಡಿದರು. ವಿದ್ಯಾರ್ಥಿಗಳಿಗೆ ನಾಡಪ್ರಭುವಿನ ಕುರಿತು ಪ್ರಬಂಧ ಸ್ಪರ್ಧೆ ಏರ್ಪಡಿಸಲಾಗಿತ್ತು.
ಕಾಲೇಜಿನ ಪ್ರಾಂಶುಪಾಲ ಡಿ.ಜಿ ಹೆಗಡೆ ಪ್ರಾಸ್ತಾವಿಕ ಹಾಗೂ ಸ್ವಾಗತ ನುಡಿಗಳನ್ನಾಡಿದರು. ಉಪನ್ಯಾಸಕ ಗೋಪಾಲ ಗೌಡ ನಿರೂಪಿಸಿದರು. ಶ್ರೀರಾಮ ಗಾಂವ್ಕರ ವಂದಿಸಿದರು.

ಎಲ್ಲಾ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದರು.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಯಲ್ಲಾಪುರ ಪೊಲೀಸರ ಕಾರ್ಯ ಕ್ಷಮತೆ – ವರ್ಷದ ಹಿಂದಿನ ಡಕಾಯಿತಿ ಪ್ರಕರಣ ಆರೋಪಿಗಳು ಸ್ವತ್ತಿನ ಸಹಿತ ಅಂದರ್.!!

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಯಲ್ಲಾಪುರ : ತಾಲೂಕಿನ ಅರಬೈಲ್ ಘಟ್ಟದಲ್ಲಿ ಕಾರು ಅಡ್ಡಗಟ್ಟಿ …

Leave a Reply

Your email address will not be published. Required fields are marked *