Breaking News

ತಾಲೂಕಿನ ಜನತೆ ” ಜನಸ್ಪಂದನಾ” ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಿ – ತಹಶಿಲ್ದಾರ ಅಶೋಕ್ ಭಟ್.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ


ಪ್ರತಿಧ್ವನಿ ಯಲ್ಲಾಪುರ – ಜುಲೈ 2 ರಂದು ಪಟ್ಟಣದ ಗಾಂಧಿ ಕುಟಿರದಲ್ಲಿ ತಾಲೂಕು ವ್ಯಾಪ್ತಿಯ ಸಾರ್ವಜನಿಕರ ಸರ್ವ ಇಲಾಖೆಗೆ ಸಂಬಂಧಿಸಿದ ಕುಂದು ಕೊರತೆಗಳ ಕುರಿತು ಅಹವಾಲು ಸಲ್ಲಿಸಬಹುದಾಗಿದೆ ಎಂದು ತಹಶಿಲ್ದಾರ ಅಶೋಕ್ ಭಟ್ ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ.


ಜನಸ್ಪಂದನಾ ಸಭೆ ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಶಿವರಾಮ್ ಹೆಬ್ಬಾರ್ ಉಪಸ್ಥಿತಿಯಲ್ಲಿ ಜರುಗುತ್ತಿದ್ದು ರೈತರು,ಕಾರ್ಮಿಕರು ಸೇರಿದಂತೆ ತಾಲೂಕಿನ ಜನತೆಯ ಅಹವಾಲುಗಳ ಸ್ವೀಕಾರವಾಗಲಿದೆ ಆಯಾ ಇಲಾಖೆಯ ಪ್ರಮುಖಾಧಿಕಾರಿಗಳಿರುವುದರಿಂದ ಬಗೆಹರಿಯಬಹುದಾದ ಸಮಸ್ಯೆಗೆ ಸ್ಥಳದಲ್ಲೆ ಪರಿಹಾರ ದೊರೆಯಲಿದೆ ಎಂದು ಮಾಹಿತಿ ನೀಡಿದ್ದಾರೆ.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಯಲ್ಲಾಪುರದ ಪಂಚಾಯತ ರಾಜ್ ಇಂಜಿನೀಯರಿಂಗ್ ಕಛೇರಿಯಲ್ಲಿ ಗಣೇಶೋತ್ಸವ – ಶ್ರೀಧರ ಸಂಜೀವ ಕರಕೆರ ಕೈಯಲ್ಲಿ ಅರಳಿದ ಕೂರ್ಮಾರೂಡ ಗಣಪ.

ಪ್ರತಿಧ್ವನಿ ಯಲ್ಲಾಪುರ : ಪಟ್ಟಣದಲ್ಲಿನ ಸಹಾಯಕ ಕಾರ್ಯನಿರ್ವಾಹಕ ಇಂಜಿನೀಯರ, ಪಂಚಾಯತ ರಾಜ್ ಇಂಜಿನೀಯರಿಂಗ್, ಉಪ ವಿಭಾಗ, ಯಲ್ಲಾಪುರ ಕಾರ್ಯಾಲಯದಲ್ಲಿ ಅಧಿಕಾರಿ …

Leave a Reply

Your email address will not be published. Required fields are marked *