Breaking News

ಯಲ್ಲಾಪುರದಲ್ಲಿ ಯಶಸ್ವಿಯಾಗಿ ನಡೆದ “ಅಪರೇಷನ್ ರೈಸ್” – ‘ಸೇ ನೋ ಟು ಡ್ರಗ್ಸ್’

ಪ್ರತಿಧ್ವನಿ ಯಲ್ಲಾಪುರ : ಯುವಜನತೆ ದೇಶದ ನಿಜವಾದ ಆಸ್ತಿ. ಮಾದಕ ವಸ್ತುಗಳ ದುರ್ವ್ಯಸನದಿಂದ ದೂರವಿದ್ದು, ಆರೋಗ್ಯವಂತ ಹಾಗೂ ಸಶಕ್ತ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಕೈಜೋಡಿಸಬೇಕು” ಎಂದು ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಶಿವರಾಮ ಹೆಬ್ಬಾರ್ ಹೇಳಿದರು.

ಅವರು ಪಟ್ಟಣದ ಕಾರ್ಮಿಕ ಭವನದಲ್ಲಿ ಯಲ್ಲಾಪುರ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರ ಆಶ್ರಯದಲ್ಲಿ ನಡೆದ  ಮಾದಕ ವಸ್ತುಗಳ ವಿರುದ್ಧ ಸಾರ್ವಜನಿಕ ಹಾಗೂ ವಿದ್ಯಾರ್ಥಿ ಸಮುದಾಯದಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಹಮ್ಮಿಕೊಂಡ “ಅಪರೇಷನ್ ರೈಸ್” (Operation RISE – Refuse, Inform, Support, Empower) ಹಾಗೂ ‘ಸೇ ನೋ ಟು ಡ್ರಗ್ಸ್’ (Say No to Drugs) ವೇದಿಕೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಪಟ್ಟಣದ  ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಿಂದ ಜಾಗೃತಿ ಜಾಥಾ ನೂರಾರು ವಿದ್ಯಾರ್ಥಿಗಳು ಹಾಗೂ ಅಧಿಕಾರಿಗಳೊಂದಿಗೆ  ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ, ಮಾದಕ ದ್ರವ್ಯಗಳ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸುತ್ತಾ ಮತ್ತು ಬಿತ್ತಿ ಪತ್ರಗಳನ್ನೂ ಪ್ರದರ್ಶಿಸುತ್ತಾ ಸಾಗಿತು.

ಸಮಾಜದಲ್ಲಿ ಯುವ ಜನಾಂಗ ಮಾದಕ ವ್ಯಸನಗಳಿಗೆ ಬಲಿಯಾಗಿಲುತ್ತಿರುವ ಕುರಿತು ಆತಂಕ ವ್ಯಕ್ತಪಡಿಸಿ,ಸರಿಯಾದ ದಿಕ್ಕಿನಲ್ಲಿ ಜೀವನ ಸಾಗಿಸಿ ಸ್ವಾಸ್ಥ್ಯ ಸಮಾಜ ನಿರ್ಮಿಸಬೇಕಿದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ,ನರೇಂದ್ರ ಪವರ್ ಹಾಗು ಪ್ರಥಮ ಧರ್ಜೆ ಕಾಲೇಜು ಪ್ರಾಂಶುಪಾಲ ಡಾ,ಆರ್.ಡಿ.ಜನಾರ್ಧನ್ ಹೇಳಿದರು.

ವೇದಿಕೆಯಲ್ಲಿ  ತಹಸೀಲ್ದಾರ ಎಂ‌ಆರ್.ಕುಲಕರ್ಣಿ,   ಪದವಿ ಪೂರ್ವ ಕಾಲೇಜ್ ಪ್ರಾಂಶುಪಾಲ ಎಸ್.ಟಿ.ವೈಧ್ಯ, ಪಿಎಸ್ಐ ಸಿದ್ದಪ್ಪ ಗುಡಿ ಹಾಗೂ ಉಪನ್ಯಾಸಕರು,ವಿವಿಧ ಇಲಾಖೆ ಅಧಿಕಾರಿಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಪೊಲೀಸ್ ಸಿಬ್ಬಂದಿ ಮಾಲತೇಶ ಕಡಪಟ್ಟಿ ಪ್ರಾರ್ಥಿಸಿದರು, ಪಿಎಸ್ಐ ರಾಜಶೇಖರ್ ವಂದಿಲಿ ಸ್ವಾಗತಿಸಿದರು, ಪಿಎಸ್ಐ ಮಹಾವೀರ ಕಾಂಬ್ಳೆ ವಂದಿಸಿದರು,  ಮಹಿಳಾ ಪೊಲೀಸ್ ಸಿಬ್ಬಂದಿ ರೇಖಾ ಎಂ‌.ಎಸ್ ನಿರೂಪಿಸಿದರು.

ಕಾರ್ಯಕ್ರಮದ ಪ್ರಮುಖ ಆಕರ್ಷಣೆಗಳು ಹಾಗೂ ಮುಖ್ಯಾಂಶಗಳು:

ವಿದ್ಯಾರ್ಥಿಗಳ ಬೃಹತ್ ಭಾಗಿತ್ವ
   ತಾಲೂಕಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಪದವಿ ಪೂರ್ವ (ಪಿಯು) ಕಾಲೇಜುಗಳ ಸುಮಾರು  500 ರಿಂದ 600 ಕ್ಕೂ ಹೆಚ್ಚು ವಿದ್ಯಾರ್ಥಿಗಳು , ಪ್ರಾಂಶುಪಾಲರು ಹಾಗೂ ಉಪನ್ಯಾಸಕ ವೃಂದದವರು ಜಾಗೃತಿ ಜಾಥಾ ಹಾಗೂ ಸಮಾವೇಶದಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದರು.

ವಿಶೇಷ ಸೆಲ್ಫಿ ಸ್ಟ್ಯಾಂಡ್ (Selfie Stand)
   ಮಾದಕ ದ್ರವ್ಯ ವಿರೋಧಿ ಜಾಗೃತಿ ಸಂದೇಶವುಳ್ಳ ಆಕರ್ಷಕ ‘ಸೆಲ್ಫಿ ಸ್ಟ್ಯಾಂಡ್’ ನಿರ್ಮಿಸಲಾಗಿದ್ದು, ವಿದ್ಯಾರ್ಥಿಗಳು ಹಾಗೂ ನಾಗರಿಕರು ಅತ್ಯಂತ ಉತ್ಸಾಹದಿಂದ ಸೆಲ್ಫಿ ತೆಗೆದುಕೊಂಡು ಅಭಿಯಾನಕ್ಕೆ ಬೆಂಬಲ ಸೂಚಿಸಿದರು.

ಸಹಿ ಸಂಗ್ರಹಣಾ ಫಲಕ (Signature Board)
   ಮಾದಕ ಮುಕ್ತ ಸಮಾಜ ನಿರ್ಮಾಣ’ದ ಸಂಕಲ್ಪದೊಂದಿಗೆ ಸ್ಥಾಪಿಸಲಾಗಿದ್ದ ವಿಶಾಲ ಸಹಿ ಬೋರ್ಡ್‌ನಲ್ಲಿ ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ವಿದ್ಯಾರ್ಥಿಗಳು ಸಹಿ ಮಾಡಿ ತಮ್ಮ ಬೆಂಬಲವನ್ನು ದಾಖಲಿಸಿದರು.

ಅದ್ಭುತ ಜಾಗೃತಿ ನಾಟಕ (Skit)
   ಮಾದಕ ವ್ಯಸನದ ದುಷ್ಪರಿಣಾಮಗಳು ಹಾಗೂ ಯುವಜನತೆಯ ಮೇಲಾಗುವ ಅಪಾಯಗಳ ಕುರಿತು ವಿದ್ಯಾರ್ಥಿಗಳು ಪ್ರದರ್ಶಿಸಿದ ಅರ್ಥಪೂರ್ಣ ಕಿರು ನಾಟಕವು (Skit) ಸಭಿಕರ ಮೆಚ್ಚುಗೆಗೆ ಪಾತ್ರವಾಯಿತು.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಯಲ್ಲಾಪುರ ತಾಲೂಕು “ಫೋಟೋಗ್ರಾಫರ್ ಯೂನಿಯನ್” ಅಸ್ತಿತ್ವಕ್ಕೆ – ಅಧ್ಯಕ್ಷರಾಗಿ ಗುರುಮೂರ್ತಿ ಗಾಂವ್ಕರ್,ಕಾರ್ಯದರ್ಶಿಯಾಗಿ ಗಣೇಶ್ ಪತ್ತಾರ್ ಆಯ್ಕೆ

ಪ್ರತಿಧ್ವನಿ ಯಲ್ಲಾಪುರ : ಯಲ್ಲಾಪುರ ತಾಲೂಕಿನಲ್ಲಿ ನೂತನವಾಗಿ “ಫೋಟೋಗ್ರಾಫರ್ ಯೂನಿಯನ್” ಅಸ್ತಿತ್ವಕ್ಕೆ ಬಂದಿರುವುದು ಸ್ಥಳೀಯ ಛಾಯಾಗ್ರಾಹಕರಿಗೆ ಒಗ್ಗಟ್ಟಿನ ವೇದಿಕೆ ನಿರ್ಮಾಣದ …

Leave a Reply

Your email address will not be published. Required fields are marked *