Breaking News

ಸ್ಥಳೀಯ ರಾಜಕೀಯ ಅಖಾಡದಲ್ಲಿ ಗರಿಗೆದರಲಿದೆ ಸ್ಥಳೀಯ ರಾಜಕಾರಣ – ಸ್ಥಳೀಯ ಸಂಸ್ಥೆ ಚುನಾವಣೆಗಳಿಗೆ ಆಯೋಗದ ಬಿರುಸಿನ ಸಿದ್ದತೆ.

ಪ್ರತಿಧ್ವನಿ ಯಲ್ಲಾಪುರ :  ಗ್ರಾಮ ಪಂಚಾಯತ್ ಹಾಗು ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ಕರ್ನಾಟಕ ಚುನಾವಣಾ ಆಯೋಗವು ಸಕಲ ಸಿದ್ಧತೆ ನಡೆಸುತ್ತಿದ್ದು. ಈ ಸಂಬಂಧ ಆಯೋಗವು ಜಿಲ್ಲಾಧಿಕಾರಿಗಳು ಮತ್ತು ತಹಶೀಲ್ದಾರರೊಂದಿಗೆ ನಿರಂತರ ಸಭೆ ನಡೆಸಲಾಗುತ್ತಿದೆ ಎನ್ನಲಾಗಿದೆ.
ರಾಜ್ಯದಲ್ಲಿ 5950 ಗ್ರಾಮ ಪಂಚಾಯಿತಿಗಳಿದ್ದು, 2020 ಡಿಸೆಂಬರ್ ತಿಂಗಳಿನಲ್ಲಿ, ಎರಡು ಹಂತಗಳಲ್ಲಿ ಗ್ರಾಮ ಪಂಚಾಯಿತಿಯ ಸಾರ್ವತ್ರಿಕ ಚುನಾವಣೆಗಳು ನಡೆದಿದ್ದವು. ನಂತರ ಕೋವಿಡ್, ವಿಧಾನಸಭೆ ಮತ್ತು ಲೋಕಸಭಾ ಚುನಾವಣೆಗಳ ಭರಾಟೆ, ಸಾವು, ಅತಿವೃಷ್ಟಿ ಅನಾವೃಷ್ಟಿ ಸೇರಿದಂತೆ ಹಲವಾರು ಕಾರಣಗಳಿಂದ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ನಡೆಸಲು ಸಾಧ್ಯವಾಗಲಿಲ್ಲ. ಪರಿಣಾಮವಾಗಿ ಇದೀಗ ಬಹುತೇಕ ಪಂಚಾಯಿತಿಗಳ ಅಧಿಕಾರಾವಧಿ ಮುಕ್ತಾಯಗೊಂಡು ಬಹಳ ದಿನಗಳೇ ಆಗಿವೆ.‌
ಕೇವಲ ಗ್ರಾಮ ಪಂಚಾಯಿತಿ ಮಾತ್ರವಲ್ಲದೆ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿಗಳ ಚುನಾವಣೆಗಳು ಕೂಡ ಹಲವಾರು ವರ್ಷಗಳಿಂದ ಬಾಕಿ ಇದ್ದು, ಇದಕ್ಕೆ ಸಂಬಂಧಿಸಿದಂತಹ ಮೀಸಲಾತಿ ಹಂಚಿಕೆ ಮತ್ತು ವಾರ್ಡ್ ಮರುವಿಂಗಡಣೆಯನ್ನು ಸರ್ಕಾರವು ಪೂರ್ಣಗೊಳಿಸಿದೆ ಎನ್ನುವ ಮಾಹಿತಿ ಮೂಲಗಳಿಂದ ಲಭ್ಯವಾಗಿದೆ.
ಎಸ್ಐಆರ್ ಚಟುವಟಿಕೆಗಳು ಕೂಡ ಈಗಾಗಲೇ ಪೂರ್ಣಗೊಂಡಿದ್ದು, ಅಕ್ಟೋಬರ್ ತಿಂಗಳ ಅಂತ್ಯದೊಳಗೆ ಅಂತಿಮ ಮತದಾರರ ಪಟ್ಟಿ ಬಿಡುಗಡೆಗೊಳ್ಳಲಿದ್ದು, ಇದಾದ ಬಳಿಕ ಪಂಚಾಯಿತಿ ಚುನಾವ

ಸೆ.29ಕ್ಕೆ ರಾಜ್ಯದ ಚುನಾವಣಾ ಆಯೋಗದ ಮಹತ್ವದ ಸಭೆ

ರಾಜ್ಯದ ಚುನಾವಣಾ ಆಯೋಗವು ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಂಬಂಧಿಸಿದಂತೆ ಬಿರುಸಿನ ಚಟುವಟಿಕೆ ನಡೆಸಿದ್ದು, ಸಂಬಂಧಿತ ಅಧಿಕಾರಿಗಳಿಗೆ ಸುತ್ತೋಲೆ ಮತ್ತು ಸೂಚನಾ ಪತ್ರವನ್ನು ಹೊರಡಿಸಿದೆ. ಇದರೊಂದಿಗೆ ಆಯೋಗದ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ಸೆಪ್ಟೆಂಬರ್ 29ರ ಮಂಗಳವಾರದಂದು ಮಹತ್ವಪೂರ್ಣವಾದ ವಿಡಿಯೋ ಸಂವಾದ ಸಭೆಯನ್ನು ಕೂಡ ಏರ್ಪಡಿಸಿದೆ. ಇದಕ್ಕೆ ಬೆಳಗಾವಿ ವಿಭಾಗ, ಕಲಬುರಗಿ ವಿಭಾಗ ಸೇರಿದಂತೆ ರಾಜ್ಯದ ಆಯಾ ಜಿಲ್ಲಾಧಿಕಾರಿಗಳ ಕಛೇರಿಯಿಂದಲೇ ಸಭೆಗೆ ಹಾಜರಾಗುವಂತೆ ಆದೇಶಿಸಲಾಗಿದೆ.

ಮತಗಟ್ಟೆ ಸಿದ್ಧತೆಗೆ  ಸಿದ್ದತೆ – ಮತಪೆಟ್ಟಿಗೆ ಸಿದ್ದತೆಗೆ ಮೊದಲ ಆದ್ಯತೆ

ಚುನಾವಣೆಗೆ ಆಯೋಗವು ಮತಗಟ್ಟೆ ಮತ್ತು ಮತಪೆಟ್ಟಿಗೆಗಳ ಸಿದ್ಧತೆಗೆ ಹೆಚ್ಚಿನ ಆದ್ಯತೆ ನೀಡಿದ್ದು, ನಮೂನೆ 1ರಿಂದ 4ರ ಪ್ರಕಾರ ಮತ ಪೆಟ್ಟಿಗೆಗಳ ವಿವರಗಳನ್ನು ಒದಗಿಸುವುದು, ಗ್ರಾಮೀಣ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಬರುವಂತಹ ಮತಗಟ್ಟೆಗಳ ನಿಖರ ಮಾಹಿತಿಯನ್ನು ಪರಿಶೀಲಿಸುವುದು, ಸಾರ್ವತ್ರಿಕ ಚುನಾವಣೆಯನ್ನು ಸುಗಮವಾಗಿ ನಡೆಸಲು ಜಿಲ್ಲಾವಾರು ಬೇಕಾಗುವಂತಹ ಒಟ್ಟು ಮತಪೆಟ್ಟಿಗೆಗಳ ಲೆಕ್ಕಚಾರ ಕೈಗೊಳ್ಳುವುದು, ದಾಸ್ತಾನಿನಲ್ಲಿರುವ ಮತಪೆಟ್ಟಿಗೆಗಳ ಹೊರತಾಗಿ ಇನ್ನೂ ಎಷ್ಟು ಮತಪೆಟ್ಟಿಗೆಗಳ ಕೊರತೆ ಇದೆ ಎನ್ನುವುದನ್ನು ಗಮನಿಸುವುದು, ಹಾಳಾಗಿರುವ ಅಥವಾ ದುರಸ್ತಿಗೆ ಬಂದಿರುವಂತಹ ಮತಪೆಟ್ಟಿಗೆಗಳನ್ನು ಸರಿಪಡಿಸಲು ಕ್ರಮಗಳನ್ನು ಕೈಗೊಳ್ಳುವುದು ಸೇರಿದಂತೆ ಹಲವಾರು ಬಗೆಯ ತಯಾರಿಗಳನ್ನು ಚುನಾವಣಾ ಆಯೋಗವು ಕೈಗೊಂಡಿದೆ.
ಅಕ್ಟೋಬರ್ ತಿಂಗಳ ಕೊನೆಯ ವಾರದಲ್ಲಿ ಗ್ರಾಮ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಮತ್ತು ಜಿಲ್ಲಾ ಪಂಚಾಯಿತಿಗಳ ಚುನಾವಣಾ ದಿನಾಂಕವನ್ನು ಆಯೋಗವು ಅಧಿಕೃತವಾಗಿ ಘೋಷಣೆ ಮಾಡುವ ಸಾಧ್ಯತೆ ಇದೆ ಎನ್ನುವ ಅಭಿಪ್ರಾಯಗಳು ಕೇಳಿಬರುತ್ತಿದೆ.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಜನಸ್ನೇಹಿ,ಜನಾನುರಾಗಿ ಎಸಿಎಫ್ ಹಿಮವತಿ ಭಟ್ ಪದೋನ್ನತಿಯೊಂದಿಗೆ ಗೌರವದ ವರ್ಗಾವಣೆ ಬೆಂಗಳೂರಿಗೆ.

ವಿಧಾನಪರಿಷತ್ ಮಾಜಿ ಸದಸ್ಯ “ಶಾಂತಾರಾಮ್ ಸಿದ್ದಿ” ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ : ಅರಣ್ಯ ಇಲಾಖೆಯ ಕೆನರಾ ವೃತ್ತದಲ್ಲಿ ಉತ್ತಮ ಕರ್ತವ್ಯ …

Leave a Reply

Your email address will not be published. Required fields are marked *