Breaking News

ಮುಖ್ಯ ಚುನಾವಣಾ ಆಯುಕ್ತ  ಜ್ಞಾನೇಶ್ ಕುಮಾರ್ ವಿರುದ್ಧ ಕಾಕ್ರೋಚ್ ಜನತಾ ಪಾರ್ಟಿ ನಡೆಸಲು ಉದ್ದೇಶಿಸಿರುವ ಪ್ರತಿಭಟನೆಗೆ ಮುಂಬೈ ಪೊಲೀಸರಿಂದ ಅನುಮತಿ ನಿರಾಕರಣೆ – ಪ್ರಜೆಗಳ ಹಕ್ಕು ಚ್ಯುತಿ ಅಭಿಜೀತ್ ದೀಪ್ಕೆ ಆರೋಪ


ಪ್ರತಿಧ್ವನಿ ಯಲ್ಲಾಪುರ : ಅಕ್ಟೋಬರ್ 2ರಂದು ಮುಂಬೈ ನಗರದಲ್ಲಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಕಾಕ್ರೋಚ್ ಜನತಾ ಪಾರ್ಟಿ ನಡೆಸಲು ಉದ್ದೇಶಿಸಿರುವ ಪ್ರತಿಭಟನೆಗೆ ಮುಂಬೈ ಪೊಲೀಸರು ಅನುಮತಿ ನಿರಾಕರಿಸಿದ್ದಾರೆ ಎಂದು ಕಾಕ್ರೋಚ್ ಜನತಾ ಪಾರ್ಟಿಯ ಸಹ ಸಂಸ್ಥಾಪಕ ಅಭಿಜೀತ್ ದೀಪ್ಕೆ ಆರೋಪಿಸಿದ್ದಾರೆ.

“ಅಕ್ಟೋಬರ್ 2ರ ನಮ್ಮ ಪ್ರತಿಭಟನೆಗೆ ಮುಂಬೈ ಪೊಲೀಸರು ಅನುಮತಿ ನಿರಾಕರಿಸಿದ್ದಾರೆ. ಪ್ರಜೆಗಳ ಧ್ವನಿಯನ್ನು ಹತ್ತಿಕ್ಕುವ ಇಂತಹ ತಂತ್ರಗಳನ್ನು ಸಹಿಸಲು ಸಾಧ್ಯವಿಲ್ಲ” ಎಂದು ಅವರು ಎಕ್ಸ್ ನಲ್ಲಿ ಬರೆದುಕೊಂಡಿದ್ದಾರೆ.

ಒಂದು ವೇಳೆ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರೇನಾದರೂ ಸೆಪ್ಟೆಂಬರ್ 26ರೊಳಗೆ ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸದಿದ್ದರೆ, ಅಕ್ಟೋಬರ್ 2ರಂದು ದೇಶವ್ಯಾಪಿ ಪ್ರತಿಭಟನೆಗೆ ಕಾಕ್ರೋಚ್ ಜನತಾ ಪಾರ್ಟಿ ಕರೆ ನೀಡಿತ್ತು. ಚುನಾವಣಾ ಆಯೋಗದ ಕಾರ್ಯವೈಖರಿ ಹಾಗೂ ನಿರ್ಧಾರಗಳಲ್ಲಿ ಭಿನ್ನಮತವಿದೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಈ ಕರೆಯನ್ನು ನೀಡಲಾಗಿತ್ತು. ಮುಂಬೈನಿಂದ ದೇಶವ್ಯಾಪಿ ಪ್ರತಿಭಟನೆಗೆ ಚಾಲನೆ ನೀಡಲಾಗುವುದು ಎಂದು ಕಾಕ್ರೋಚ್ ಜನತಾ ಪಾ‍ರ್ಟಿ ತಿಳಿಸಿತ್ತು.

ಆದರೆ, ತಮ್ಮ ನಿರ್ಧಾರವನ್ನು ಸಮರ್ಥಿಸಿಕೊಂಡಿರುವ ಮುಂಬೈ ಪೊಲೀಸರು, “ಶಿವಾಜಿ ಪಾರ್ಕ್ ಬಳಿ ಪ್ರತಿಭಟನೆಗೆ ಅನುಮತಿ ಮಂಜೂರು ಮಾಡುವ ಅಧಿಕಾರ ನಮಗಿಲ್ಲ. ಈ ವಿಷಯವನ್ನು ಅರ್ಜಿದಾರ ಅಜಿಂಕ್ಯಾ ಶಿಂದೆಗೆ ವಿವರಿಸಲಾಗಿದೆ. ಪ್ರತಿಭಟನೆಗೆ ಮುಂಬೈ ನಗರದಲ್ಲಿ ಪರ್ಯಾಯ ಸ್ಥಳವನ್ನು ಆಯ್ದುಕೊಳ್ಳುವಂತೆ ಹಾಗೂ ಅನುಮತಿಗೆ ಅರ್ಜಿ ಸಲ್ಲಿಸುವಂತೆ ಅವರಿಗೆ ಸಲಹೆ ನೀಡಲಾಗಿದೆ. ಆ ಅರ್ಜಿಯನ್ನು ಸೂಕ್ತ ರೀತಿಯಲ್ಲಿ ಪರಿಗಣಿಸಲಾಗುವುದು” ಎಂದು ಅಧಿಸೂಚನೆಯಲ್ಲಿ ಸ್ಪಷ್ಟನೆ ನೀಡಿದ್ದಾರೆ.

ಆದರೆ, ಈ ಸ್ಪಷ್ಟೀಕರಣಕ್ಕೆ ತಿರುಗೇಟು ನೀಡಿರುವ ಅಭಿಜೀತ್ ದೀಪ್ಕೆ, “ಹಾಗಾದರೆ, ಏಕನಾಥ್ ಶಿಂದೆಗೆ ಹೇಗೆ ಅನುಮತಿ ನೀಡಲಾಯಿತು” ಎಂದು ಪ್ರಶ್ನಿ ಸಿದ್ದಾರೆ.

  

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಜನಸ್ನೇಹಿ,ಜನಾನುರಾಗಿ ಎಸಿಎಫ್ ಹಿಮವತಿ ಭಟ್ ಪದೋನ್ನತಿಯೊಂದಿಗೆ ಗೌರವದ ವರ್ಗಾವಣೆ ಬೆಂಗಳೂರಿಗೆ.

ವಿಧಾನಪರಿಷತ್ ಮಾಜಿ ಸದಸ್ಯ “ಶಾಂತಾರಾಮ್ ಸಿದ್ದಿ” ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ : ಅರಣ್ಯ ಇಲಾಖೆಯ ಕೆನರಾ ವೃತ್ತದಲ್ಲಿ ಉತ್ತಮ ಕರ್ತವ್ಯ …

Leave a Reply

Your email address will not be published. Required fields are marked *