Breaking News

ಯಲ್ಲಾಪುರದ ಜನಸ್ನೇಹಿ ತಹಸೀಲ್ದಾರ್ ಶ್ರೀಕೃಷ್ಣ ಕಾಮ್ಕರ್ ಶಿರಸಿಗೆ ವರ್ಗಾವಣೆ

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ


ಪ್ರತಿಧ್ವನಿ, ಯಲ್ಲಾಪುರ : ತಾಲೂಕು ದಂಡಾಧಿಕಾರಿಯಾಗಿ ಉತ್ತಮ ಹೆಸರುಗಳಿಸಿ ಜನರಿಗೆ ಹತ್ತಿರವಾಗಿದ್ದ ಶ್ರೀಕೃಷ್ಣ ಕಾಮ್ಕರ್ ಅವರನ್ನು ಚುನಾವಣೆ ನಿಮಿತ್ತ ಸ್ಥಳ ಬದಲಿಸಲಾಗಿತ್ತು. ಚುನಾವಣೆ ಮುಗಿದ ನಂತರ ಇತ್ತೀಚಿಗೆ ಪುನಃ ಯಲ್ಲಾಪುರ ತಾಲೂಕಿನ ದಂಡಾಧಿಕಾರಿಯಾಗಿ ಮುಂದುವರೆದಿದ್ದರು. ಸರ್ಕಾರ ಜು.28 ರಂದು ವರ್ಗಾವಣೆ ಮಾಡಿದ್ದು ಶಿರಸಿಯ ಉಪವಿಭಾಗಾಧಿಕಾರಿಗಳ ಕಚೇರಿಗೆ ವರ್ಗಾವಣೆಗೊಂಡಿರುತ್ತಾರೆ.


ಯಲ್ಲಾಪುರದ ನೂತನ ದಂಡಾಧಿಕಾರಿಯಾಗಿ ಚುನಾವಣಾ ಸಂದರ್ಭದಲ್ಲಿ ಕರ್ತವ್ಯ ನಿರ್ವಹಿಸಿದ್ದ ಗುರುರಾಜ್ ಅವರನ್ನು ಪುನಃ ನೇಮಿಸಲಾಗಿದೆ.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ವೈ.ಟಿ.ಎಸ್‌.ಎಸ್ ನಿಂದ ರಾಧಾ ಕೃಷ್ಣ ವೇಷ ಸ್ಪರ್ಧೆ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ ವರದಿ, ಯಲ್ಲಾಪುರ : ಸ್ಥಳೀಯ ವೈ.ಟಿ.ಎಸ್.ಎಸ್ …

Leave a Reply

Your email address will not be published. Required fields are marked *