Breaking News

ಪಾಕಿಸ್ಥಾನ ಜಿಂದಾಬಾದ್ ಕೂಗಿದವನಿಗೆ ಕಠಿಣ ಶಿಕ್ಷೆಯಾಗಲಿ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ


ಪ್ರತಿಧ್ವನಿ ಯಲ್ಲಾಪುರ – ಕಾಂಗ್ರೆಸ್ ಪಕ್ಷದ ನೂತನ ರಾಜ್ಯ ಸಭಾ ಸದಸ್ಯ ನಾಸೀರ ಹುಸೇನ ಬೆಂಬಲಿಗರು ವಿಧಾನ ಸೌಧದ ಆವರಣದಲ್ಲಿ ಪಾಕಿಸ್ತಾನ ಜಿಂದಾಬಾದ ಎಂದು ದೇಶದ್ರೋಹಿ ಘೋಷಣೆ ಕೂಗಿದ ಹಿನ್ನಲೆ ಯಲ್ಲಿ ಯಲ್ಲಾಪುರ ಮಂಡಳ ವತಿಯಿಂದ ತಹಶೀಲ್ದಾರರ ಕಾರ್ಯಲಯದ ಬಳಿ ಪ್ರತಿಭಟಿಸಿ ದೇಶದ್ರೋಹಿಗಳಿಗೆ ಶಿಕ್ಷೆ ಆಗಬೇಕೆಂದು ಆಗ್ರಹಿಸಲಾಯಿತು.

ಈ ಸಂಧರ್ಭದಲ್ಲಿ ರಾಜ್ಯ ವಕ್ತಾರರಾದ ಹರಿಪ್ರಕಾಶ ಕೋಣೆಮನೆ, ಯಲ್ಲಾಪುರ ಮಂಡಲಾಧ್ಯಕ್ಷ ಪ್ರಸಾದ್ ಹೆಗಡೆ, ಪ್ರಧಾನಕಾರ್ಯದರ್ಶಿಗಳಾದ ರವಿ ಕೈಟ್ಕರ ಮತ್ತು ನಟರಾಜ ಗೌಡ,ಜಿಲ್ಲಾ ರೈತಮೋರ್ಚಾ ಪ್ರಧಾನಕಾರ್ಯದರ್ಶಿ ಶಿವಲಿಂಗಯ್ಯ ಹಿರೇಮಠ, ನಿಕಟ ಪೂರ್ವ ಅಧ್ಯಕ್ಷರಾದ G.N.ಗಾಂವ್ಕರ, ರಾಮು ನಾಯ್ಕ,ಪ್ರಮೋದ‌ ಹೆಗಡೆ, ರೇಖಾಹೆಗಡೆ,ಗಣಪತಿ ಮಾನಿಗದ್ದೆ,ಗಣಪತಿ ಮುದ್ದೇಪಾಲ ,ಸೋಮೇಶ್ವರ ನಾಯ್ಕ,ಕಾರ್ಯಕರ್ತರೂ ಉಪಸ್ಥಿತರಿದ್ದರು.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ವೈ.ಟಿ.ಎಸ್‌.ಎಸ್ ನಿಂದ ರಾಧಾ ಕೃಷ್ಣ ವೇಷ ಸ್ಪರ್ಧೆ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ ವರದಿ, ಯಲ್ಲಾಪುರ : ಸ್ಥಳೀಯ ವೈ.ಟಿ.ಎಸ್.ಎಸ್ …

Leave a Reply

Your email address will not be published. Required fields are marked *