Breaking News

ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿಗೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ಯಲ್ಲಾಪುರದಲ್ಲಿ ಭವ್ಯ ಸ್ವಾಗತ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ


ಯಲ್ಲಾಪುರ : ಶಿರಸಿಯಲ್ಲಿ ನಡೆಯುವ ಸರ್ಕಾರಿ ಕಾರ್ಯಕ್ರಮವೊಂದಕ್ಕೆ ತೆರಳುವ ಮಾರ್ಗಮಧ್ಯೆ ರಾಜ್ಯ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿಯವರಿಗೆ ಯಲ್ಲಾಪುರದ ಅಂಬೇಡ್ಕರ್ ವೃತ್ತದಲ್ಲಿ ಬ್ಲಾಕ್ ಕಾಂಗ್ರೆಸ್‌ವತಿಯಿದ ಶಾಲು ಹೊದಿಸಿ ಸನ್ಮಾನಿಸಿ ಭವ್ಯ ಸ್ವಾಗತ ಕೋರಲಾಯಿತು.


ಕೆಪಿಸಿಸಿ ಸದಸ್ಯ ವಿವೇಕ ಹೆಬ್ಬಾರ್ ಸೇರಿದಂತೆ ಬ್ಲಾಕ್ ಕಮಿಟಿ ಅಧ್ಯಕ್ಷ ಎನ್.ಕೆ ಭಟ್ಟ , ಸದಸ್ಯರಾದ ದಿಲೀಪ ರೋಖಡೆ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿ.ಎಸ್ ಭಟ್ಟ, ತಾಲೂಕು ಕೃಷಿ ಸಮಾಜದ ಉಪಾಧ್ಯಕ್ಷ ಸುನಿಲ್ ಫಾಯ್ದೆ, ತಾ.ಪಂ ಮಾಜಿ ಉಪಾಧ್ಯಕ್ಷೆ ಸುಜಾತಾ ಸಿದ್ದಿ, ಸದಸ್ಯೆ ರಾಧಾ ಹೆಗಡೆ ಸೇರಿದಂತೆ ಪಕ್ಷದ ವಿವಿಧ ಸ್ತರದ ಪದಾಧಿಕಾರಿಗಳು, ಘಟಕಾಧ್ಯಕ್ಷರು, ಕಾರ್ಯಕರ್ತರು ಉಪಸ್ಥಿತರಿದ್ದರು.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಯಲ್ಲಾಪುರದ ಪಂಚಾಯತ ರಾಜ್ ಇಂಜಿನೀಯರಿಂಗ್ ಕಛೇರಿಯಲ್ಲಿ ಗಣೇಶೋತ್ಸವ – ಶ್ರೀಧರ ಸಂಜೀವ ಕರಕೆರ ಕೈಯಲ್ಲಿ ಅರಳಿದ ಕೂರ್ಮಾರೂಡ ಗಣಪ.

ಪ್ರತಿಧ್ವನಿ ಯಲ್ಲಾಪುರ : ಪಟ್ಟಣದಲ್ಲಿನ ಸಹಾಯಕ ಕಾರ್ಯನಿರ್ವಾಹಕ ಇಂಜಿನೀಯರ, ಪಂಚಾಯತ ರಾಜ್ ಇಂಜಿನೀಯರಿಂಗ್, ಉಪ ವಿಭಾಗ, ಯಲ್ಲಾಪುರ ಕಾರ್ಯಾಲಯದಲ್ಲಿ ಅಧಿಕಾರಿ …

Leave a Reply

Your email address will not be published. Required fields are marked *