Breaking News

ಮಾಜಿ ಸೈನಿಕ ಯಲ್ಲಾಪುರದ ಫಕೀರ ತುಕರಾಮ ಗೊಂದಳಿ ನಿಧನ – ಗಣ್ಯರ ಸಂತಾಪ.


ಯಲ್ಲಾಪುರ : ತಾಲೂಕಿನ ಸವಣಗೆರಿ ನಿವಾಸಿ 78 ವರ್ಷ ವಯಸ್ಸಿನ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಫಕೀರ ತುಕರಾಮ ಗೊಂದಳಿ ಮಾ,27 ರಂದು ನಿಧನರಾಗಿದ್ದು ಶುಕ್ರವಾರ ಅಂತ್ಯಕ್ರಿಯೆ ನೆರವೇರಿಸಲಾಯಿತು.
1965 ರಲ್ಲಿ ಆರ್ಮಿಗೆ ಸೇರಿದ ಫಕೀರ ಅವರು 17 ವರ್ಷಗಳ ಕಾಲ ಸೇವೆ ಸಲ್ಲುಸಿ ನಿವೃತ್ತಿ ಹೊಂದಿದ್ದರು.ವಯೋ ಸಹಜ ಮರಣ ಹೊಂದಿದ್ದು ಪತ್ನಿ ಇಬ್ಬರು ಪುತ್ರರು ಮೂರು ಹೆಣ್ಣು ಮಕ್ಕಳನ್ನು ಹಾಗು ಅಪಾರ ಬಂಧುಬಳಗವನ್ನು ಅಗಲಿದ್ದಾರೆ.
ಫಕೀರ ಅವರ ನಿಧನಕ್ಕೆ ಶಾಸಕ ಶಿವರಾಮ ಹೆಬ್ಬಾರ್ ಪರಿಷತ್ ಸದಸ್ಯ ಶಾಂತಾರಾಮ್ ಸಿದ್ದಿ ಸೇರಿದಂತೆ ಅಖಿಲ ಕರ್ನಾಟಕ ಮಾಜೀ ಸೈನಿಕರ ಸಂಘ ಯಲ್ಲಾಪುರ ತಾಲೂಕು ಘಟಕದವರು ಸಂತಾಪ ಸೂಚಿಸಿದ್ದಾರೆ.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ವೈ.ಟಿ.ಎಸ್‌.ಎಸ್ ನಿಂದ ರಾಧಾ ಕೃಷ್ಣ ವೇಷ ಸ್ಪರ್ಧೆ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ ವರದಿ, ಯಲ್ಲಾಪುರ : ಸ್ಥಳೀಯ ವೈ.ಟಿ.ಎಸ್.ಎಸ್ …

Leave a Reply

Your email address will not be published. Required fields are marked *