Breaking News

ಡೆಂಗ್ಯೂ ವಿರುದ್ದ ಆರೋಗ್ಯ ಇಲಾಖೆ ಸಮರ – ಪ್ರತಿ ಶುಕ್ರವಾರ ಡೆಂಗ್ಯೂ ಲಾರ್ವ ನಾಶ ಕಾರ್ಯ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ


ಪ್ರತಿಧ್ವನಿ ಯಲ್ಲಾಪುರ – ಮಳೆಗಾಲದ ಸಂದರ್ಭದಲ್ಲಿ ಎಲ್ಲೆಡೆ ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜನರಲ್ಲಿ ಸ್ವಚ್ಚತೆ ಜಾಗೃತಿ ಮೂಡಿಸುವ ಸಲುವಾಗಿ ಪ್ರತಿ ಶುಕ್ರವಾರ ಡೆಂಗ್ಯೂ ಲಾರ್ವ ನಾಶ ಪಡಿಸುವ ದಿನವಾಗಿ ಪರಿಗಣಿಸಿದ್ದು ಯಲ್ಲಾಪುರ ತಾಲೂಕು ದಂಡಾಧಿಕಾರಿ ಅಶೋಕ್ ಭಟ್ ಚಾಲನೆ ನೀಡಿದರು.


     ಮನೆಗಳ ಸುತ್ತಮುತ್ತಲಿನ ಪರಿಸರ ಸ್ವಚ್ಚತೆ ಕಾಪಾಡುವುದರ ಜೊತೆಯಲ್ಲಿ ಎಲ್ಲಿಯು ನೀರು ನಿಲ್ಲದಂತೆ ಸೊಳ್ಳೆಗಳ ವಾಸ ಸ್ಥಾನ ನಿರ್ಮಾಣವಾಗದಂತೆ ಕಟ್ಟೆಚ್ಚರಿಕೆ ವಹಿಸಲು ಮನೆಮನೆಗೆ ತೆರಳಿ ತಿಳಿಸಿಕೊಡಲಾಯಿತು.


ಡೆಂಗ್ಯೂ ಜ್ವರದಲ್ಲಿ ಬಳಲುತ್ತಿರುವ ರೋಗಿಗಳ ಮನೆಗೆ ತಾಲೂಕು ದಂಡಾಧಿಕಾರಿ ಅಶೋಕ್ ಭಟ್ ಭೇಟಿ ನೀಡಿ ಆರೋಗ್ಯ ವಿಚಾರಿಸಿ ದೈರ್ಯ ತುಂಬಿದರು.


ಪಟ್ಟಣದ ನೂತನ ನಗರದ ಮನೆಗಳಿಗೆ ತೆರಳಿ ಜನರಲ್ಲಿ ನೈರ್ಮಲ್ಯದ ಕುರಿತು ಜಾಗೃತಿ ಮೂಡಿಸಿ ಕೊಳಕು ನೀರು ಹೊರ ಚೆಲ್ಲಿ ತಿಳಿ ಹೇಳಲಾಯಿತು.


ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಸುನಿಲ್ ಸುಭಾಷ್ ಗಾವಡೆ, ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಟಿ.ಭಟ್, ಹಿರಿಯ ಆರೋಗ್ಯ ನಿರೀಕ್ಷಕ ಮಹೇಶ್ ತಾಳಿಕೋಟೆ, ಯು.ಜೋಸೆಫ್, ವಿರುಪಾಕ್ಷ ಶಿರೂರ, ನಾಗರಾಜ ಕಳಸದ, ಪ್ರವೀಣ್ ಇನಾಮದಾರ, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳು, ಆಶಾ ಕಾರ್ಯಕರ್ತೆಯರು, ಸಮುದಾಯ ಆರೋಗ್ಯಾಧಿಕಾರಿಗಳು ಉಪಸ್ಥಿತರಿದ್ದರು.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಯಲ್ಲಾಪುರದ ಪಂಚಾಯತ ರಾಜ್ ಇಂಜಿನೀಯರಿಂಗ್ ಕಛೇರಿಯಲ್ಲಿ ಗಣೇಶೋತ್ಸವ – ಶ್ರೀಧರ ಸಂಜೀವ ಕರಕೆರ ಕೈಯಲ್ಲಿ ಅರಳಿದ ಕೂರ್ಮಾರೂಡ ಗಣಪ.

ಪ್ರತಿಧ್ವನಿ ಯಲ್ಲಾಪುರ : ಪಟ್ಟಣದಲ್ಲಿನ ಸಹಾಯಕ ಕಾರ್ಯನಿರ್ವಾಹಕ ಇಂಜಿನೀಯರ, ಪಂಚಾಯತ ರಾಜ್ ಇಂಜಿನೀಯರಿಂಗ್, ಉಪ ವಿಭಾಗ, ಯಲ್ಲಾಪುರ ಕಾರ್ಯಾಲಯದಲ್ಲಿ ಅಧಿಕಾರಿ …

Leave a Reply

Your email address will not be published. Required fields are marked *