Breaking News

ಯಲ್ಲಾಪುರದ ಜೋಡುಕೆರೆ ಸ್ವಚ್ಚತಾ ಕಾರ್ಯಕ್ಕೆ ಶಾಸಕ ಹೆಬ್ಬಾರ್ ಚಾಲನೆ.

ಪ್ರತಿಧ್ವನಿ ಯಲ್ಲಾಪುರ : ನಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಚವಾಗಿಟ್ಟುಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿ ಆಗಿದೆ. ಕೆರೆಗಳು ಅಂತರ್ಜಲ ಹೆಚ್ಚಿಸುವ ಜೀವ ನಾಡಿಗಳು ಅವುಗಳನ್ನು ಬದ್ದತೆಯಿಂದ ಕಾಪಾಡಿಕೊಳ್ಳಬೇಕಿದೆ ಈ ದಿಸೆಯಲ್ಲಿ ಸ್ವಚ್ಚತಾ ಕಾರ್ಯ ಹಮ್ಮಿಕೊಂಡ ಸಂಘಟನೆಗಳಿಗೆ ಅಭಿನಂದಿಸುತ್ತೇನೆ ಎಂದು ಶಾಸಕ ಶಿವರಾಮ ಹೆಬ್ಬಾರ್ ಹೇಳಿದರು.

ಅವರು ಪಟ್ಟಣದ ಜೋಡಕೆರೆ ಆವರಣದಲ್ಲಿ ಕ್ರಿಯೇಟಿವ್ ಕಂಪ್ಯೂಟರ್ ಇನ್‌ಸ್ಟಿಟ್ಯೂಟ್, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್‌ಎಸ್‌ಎಸ್ ಘಟಕ, ವಿಷನ್ ಜನಾಭಿವೃದ್ದಿ ಟ್ರಸ್ಟ್, ಪಟ್ಟಣ ಪಂಚಾಯಿತಿ ಯಲ್ಲಾಪುರ ಹಾಗೂ ಅರಣ್ಯ ಇಲಾಖೆಯ ಸಹಯೋಗದಲ್ಲಿ ಆಯೋಜಿಸಿದ್ದ ಸ್ವಚ್ಛತಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

ಕಾರ್ಯಕ್ರಮದಲ್ಲಿ ಜೋಡಕೆರೆ ಆವರಣವನ್ನು ಸ್ವಚ್ಛಗೊಳಿಸುವ ಮೂಲಕ ಸ್ವಚ್ಛತೆ ಹಾಗೂ ಪರಿಸರ ಸಂರಕ್ಷಣೆಯ ಮಹತ್ವದ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಯಿತು.

ಈ ಸಂದರ್ಭದಲ್ಲಿ ವಿಷನ್ ಸಂಸ್ಥೆಯ ಅಧ್ಯಕ್ಷ ವಿಜಯ ಮಿರಾಶಿ, ಕಾರ್ಯದರ್ಶಿ ಸತೀಶ ಶಿವಾನಂದ ನಾಯ್ಕ, ಕ್ರಿಯೇಟಿವ್ ಕಂಪ್ಯೂಟರ್ ಇನ್‌ಸ್ಟಿಟ್ಯೂಟ್‌ನ ಮುಖ್ಯಸ್ಥ ಶ್ರೀನಿವಾಸ ಮುರ್ಡೇಶ್ವರ, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಆರ್.ಡಿ. ಜನಾರ್ದನ್, ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಕೇಶವ ಚೌಗುಲೆ,  ಹಾಗೂ ಆರ್.ಎಫ್.ಒ. ಮಂಜುನಾಥ ಹೆಚ್ ನಾಯ್ಕ್, ಅರಣ್ಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು, ಪಟ್ಟಣ ಪಂಚಾಯತ್ ಅಧಿಕಾರಿಗಳು ಸಿಬ್ಬಂದಿಗಳು, ಪೌರಕಾರ್ಮಿಕರು,ಎನ್.ಎಸ್.ಎಸ್ ವಿದ್ಯಾರ್ಥಿಗಳು, ಉಪನ್ಯಾಸಕರು,ಸಾರ್ವಜನಿಕರು ಉಪಸ್ಥಿತರಿದ್ದರು.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಜನಸ್ನೇಹಿ,ಜನಾನುರಾಗಿ ಎಸಿಎಫ್ ಹಿಮವತಿ ಭಟ್ ಪದೋನ್ನತಿಯೊಂದಿಗೆ ಗೌರವದ ವರ್ಗಾವಣೆ ಬೆಂಗಳೂರಿಗೆ.

ವಿಧಾನಪರಿಷತ್ ಮಾಜಿ ಸದಸ್ಯ “ಶಾಂತಾರಾಮ್ ಸಿದ್ದಿ” ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ : ಅರಣ್ಯ ಇಲಾಖೆಯ ಕೆನರಾ ವೃತ್ತದಲ್ಲಿ ಉತ್ತಮ ಕರ್ತವ್ಯ …

Leave a Reply

Your email address will not be published. Required fields are marked *