Breaking News

ಯಲ್ಲಾಪುರದಲ್ಲಿ ಅಂಗಡಿ ಹೊಟೆಲ್ ಮೇಲೆ ದಾಳಿ 13 kg ಪ್ಲಾಸ್ಟಿಕ್, 6,600 ದಂಡ ವಸೂಲಿ

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ


ಪ್ರತಿಧ್ವನಿ,ಯಲ್ಲಾಪುರ – ಪಟ್ಟಣದ ವಿವಿಧ ಅಂಗಡಿಗಳು ಹಾಗು ಹೊಟೆಲ್ ಗಳ ಮೇಲೆ ಪಟ್ಟಣ ಪಂಚಾಯತ ಸಿಬ್ಬಂದಿಗಳು ದಾಳಿ ಮಾಡಿ ಕಾನೂನಿನ ಅಡಿಯಲ್ಲಿ ಅವಕಾಶವಿಲ್ಲದೆ ನಿಷೇದಿಸಿರುವ ಅನಧಿಕೃತ ಪ್ಲಾಸ್ಟಿಕ್ ಬಳಕೆ ಮಾಡುತ್ತಿರುವ ಅಂಗಡಿಗಳಿಗೆ ದಂಡವಿಧಿಸಿ ಪ್ಲಾಸ್ಟಿಕ್ ವಶಕ್ಕೆ ಪಡೆಯಲಾಗಿದೆ.


ಪಟ್ಟಣದ ಒಟ್ಟು 12 ಅಂಗಡಿ ಹೊಟೆಲ್ ಮೇಲೆ ದಾಳಿ ಮಾಡಿ 6,600 ರುಪಾಯಿ ದಂಡ ವಸೂಲಿ ಮಾಡಿ ಸುಮಾರು 13 ಕೆ.ಜಿ 350 ಗ್ರಾಂ ಪರಿಸರಕ್ಕೆ ಮಾರಕವಾದ ಪ್ಲಾಸ್ಟಿಕ್ ವಶಕ್ಕೆ ಪಡೆದು ಮುಂದೆ ಬಳಸದಂತೆ ಎಚ್ಚರಿಸಿದ್ದಾರೆ.


ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತ ಆರೋಗ್ಯ ನಿರೀಕ್ಷಕ ಗುರು ಗಡಗಿ , ಸ್ವಚ್ಚತಾ ಮೇಲ್ವಿಚಾರಕ ವಿಜಯ್ ಶಿರಾಲಿ , ಪೌರಕಾರ್ಮಿಕರಾದ ವಿಜಯ ಕುಮಾರ್ ಮಾದರ್, ಸುರೇಶ್ ಮಾದರ್, ಮಹಮ್ಮದ್ ರಫಿಕ್ ದಾಳಿ ನಡೆಸಿದ ತಂಡದಲ್ಲಿದ್ದರು.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಪರಿಷತ್ ಕಲಾಪದಲ್ಲಿ ಪ್ರತಿಧ್ವನಿಸಿದ ಯಲ್ಲಾಪುರ ಕಾಳಮ್ಮ ನಗರ ಕೆಲವು  ನಿವಾಸಿಗಳಿಗೆ ವಿದ್ಯುತ್ ನೀಡದ ಸಮಸ್ಯೆ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಯಲ್ಲಾಪುರ : ಪಟ್ಟಣದ ಕಾಳಮ್ಮನಗರದ ಮುರಾರ್ಜಿ ವಸತಿ ಶಾಲೆ …

Leave a Reply

Your email address will not be published. Required fields are marked *