Breaking News

ಯಲ್ಲಾಪುರ ಕಾಳಮ್ಮದೇವಿ ಸಾನಿದ್ಯದಲ್ಲಿ ಕಾರ್ತಿಕ ದೀಪೋತ್ಸವದ ಸಡಗರ

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ

ಪ್ರತಿಧ್ವನಿ ಯಲ್ಲಾಪುರ – ಪಟ್ಟಣದ ಶಕ್ತಿ ದೇವತೆ ಕಾಳಮ್ಮ ದೇವಿ ಸಾನಿದ್ಯದಲ್ಲಿ ಕಾರ್ತಿಕ ದೀಪೋತ್ಸವ ಅತ್ಯಂತ ಶ್ರದ್ದಾ ಭಕ್ತಿಯಿಂದ ಭಕ್ತಾದಿಗಳ ಪಾಲ್ಗೊಳ್ಳುವಿಕೆಯಿಂದ ಸಂಭ್ರಮ ಸಡಗರದಿಂದ ಜರುಗಿತು.

ದೇವಿಯ ಸಾನಿದ್ಯದಲ್ಲಿ ನೂರಾರು ಹಣತೆಗಳನ್ನು ಹಚ್ಚುವ ಮೂಲಕ ದೇವಾಲಯಕ್ಕೆ ಕಳೆ ಬಂದಂತಾಗಿತ್ತು. ಬಣ್ಣಬಣ್ಣದ ಚಿತ್ತಾರ ತುಂಬಿದ ಸುಂದರವಾದ ರಂಗೋಲಿಗಳು ದೇವಾಲಯದ ಆವರಣಕ್ಕೆ ಕಳೆ ತಂದಂತಾಗಿತ್ತು. ವಿಶೇಷವಾಗಿ ಕಾರ್ತಿಕೋತ್ಸವದ ಪ್ರಯುಕ್ತ ಮಹಿಳೆಯರಿಗೆ ರಂಗೋಲಿ ಸ್ಪರ್ಧೆ ಏರ್ಪಡಿಸಲಾಗಿತ್ತು. ಸ್ಪರ್ಧೆಗಾಗಿ ಬಿಡಿಸಿದ ರಂಗೋಲಿಗಳು ನೋಡುಗರ ಕಣ್ಮನ ಸೆಳೆಯುತ್ತಿತ್ತು.

ಕಾಳಮ್ಮದೇವಿ ಸಾನಿದ್ಯದ ರಂಗೋಲಿ ಚಿತ್ತಾರ

ಭಕ್ತಿ ಭಾವದಲ್ಲಿ ಜಗನ್ಮಾತೆ ಕಾಳಮ್ಮದೇವಿ ದರ್ಶನ ಪಡೆದ ಭಕ್ತರು ತಮ್ಮ ಇಷ್ಟಾರ್ಥ ನೆರವೇರಿಕೆಗೆ ಕೋರಿ ದೀಪ ಬೆಳಗಿದರು. ದೇವಾಲಯದ ಆವರಣ ದೀಪಗಳಿಂದ ಕಂಗೊಳಿಸುತ್ತಾ ಇನ್ನಷ್ಟು ಹೆಚ್ಚು ಆದ್ಯಾತ್ಮ ಸಂತೃಪ್ತಿಗೆ ಕಾರಣವಾಯಿತು‌ ನೂರಾರು ಸಾರ್ವಜನಿಕರು ಕಾರ್ತಿಕೋತ್ಸವದಲ್ಲಿ ಪಾಲ್ಗೊಂಡು ತಾಯಿ ಪ್ರಸಾದ ಸ್ವೀಕರಿಸಿ ಧನ್ಯರಾದರು.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ವೈ.ಟಿ.ಎಸ್‌.ಎಸ್ ನಿಂದ ರಾಧಾ ಕೃಷ್ಣ ವೇಷ ಸ್ಪರ್ಧೆ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ ವರದಿ, ಯಲ್ಲಾಪುರ : ಸ್ಥಳೀಯ ವೈ.ಟಿ.ಎಸ್.ಎಸ್ …

Leave a Reply

Your email address will not be published. Required fields are marked *