Breaking News

ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿ ಅಸ್ಲಾಂ ಜೈಲಿಗೆ.


ಯಲ್ಲಾಪುರ : ತಾಲ್ಲೂಕಿನ ಗ್ರಾಮ ಒಂದರಲ್ಲಿ ಮಂಗಳವಾರ ನಡೆದ ಅಪ್ರಾಪ್ತ ಬಾಲಕಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಆರೋಪಿ ಹಳಿಯಾಳ ತಾಲ್ಲೂಕಿನ ಭಾಗವತಿ ಗ್ರಾಮದ ನಿವಾಸಿ ಅಸ್ಲಾಂ ಅದಾಮ್ ಸಾಬ್ ಸುತಾರ (20) ಎಂಬಾತನನ್ನು ಯಲ್ಲಾಪುರ ಪೊಲೀಸರು ವಶಕ್ಕೆ ಪಡೆದಿದ್ದರು ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿದಿಸಿದೆ.

  ಘಟನೆ ವಿವರ : –ತಾಲೂಕಿನ ಗ್ರಾಮವೊಂದರಲ್ಲಿ ಒಂದನೇ ತರಗತಿ ಓದುತ್ತಿರುವ  ಪುಟ್ಟ ಬಾಲಕಿಗೆ ಚಾಕಲೇಟಿನ ಆಸೆ ತೋರಿಸಿದ ಆರೋಪಿ ಅಸ್ಲಾಂ ಆದಾಮ್ ಸಾಬ್ ಸುತಾರ್ ಎಂಬ ಯುವಕ ಲೈಂಗಿಕ ದೌರ್ಜನ್ಯ ಎಸಗಿ ಪೈಶಾಚಿಕ ಕೃತ್ಯವೆಸಗಿದ್ದಾನೆ.

ವಿಷಯ ತಿಳಿದ ಗ್ರಾಮಸ್ಥರು ಯುವಕನ್ನು ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಮಂಗಳವಾರ ನಡೆದಿತ್ತು.
ಭಾಗವತಿ ನಿವಾಸಿಯಾದ ಆರೋಪಿ ಅಸ್ಲಾಂ ತನ್ನ ನೆಂಟರ ಮನೆಗೆಂದು ತಾಲೂಕಿನ ಗ್ರಾಮವೊಂದಕ್ಕೆ ಬಂದವನು ಆಟವಾಡುತ್ತಿದ್ದ ಬಾಲಕಿಗೆ ಚಾಕ್ಲೆಟ್ ಆಸೆ ತೋರಿಸಿ ಕರೆದೊಯ್ದು ನೀಚಕೃತ್ಯ ವೆಸಗಿದ್ದು ನೋವಿನಿಂದ ನರಳುತ್ತಿದ್ದ ಬಾಲಕಿಯನ್ನು ಕಂಡ ಸ್ಥಳೀಯರಿಗೆ ನಿಜ ವಿಷಯ ತಿಳಿದಿದೆ.

ಇದರಿಂದ ರೊಚ್ಚಿಗೆದ್ದ ಸಾರ್ವಜನಿಕರು ಆರೋಪಿಗೆ ಥಳಿಸಿದ್ದು ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿಗೆ ಕರೆದೊಯ್ಯಲಾಗಿತ್ತು.

ಸದ್ಯ ಚೇತರಿಸಿಕೊಂಡಿರುವ ಆರೋಪಿ ಅಸ್ಲಾಂನನ್ನು ಪೊಲೀಸರು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿದಿಸಿದೆ. ಸಂತ್ರಸ್ಥ ಬಾಲಕಿಯನ್ನು ಹೆಚ್ಚಿನ ಚಿಕಿತ್ಸೆಗೆ ಕಾರವಾರ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ತೆರಳಿದ್ದು ಪರಿಶೀಲನೆ ನಡೆಸಿದ್ದು ಮುಂದಿನ ಕಾನೂನು ಪ್ರಕ್ರಿಯೆ ಕೈಗೊಂಡಿದ್ದಾರೆ.

ತಾಲ್ಲೂಕಿನ ವಿವಿಧ ಸಂಘ ಸಂಸ್ಥೆಗಳು ಆರೋಪಿ ಅಸ್ಲಾಂ ಪೈಶಾಚಿಕ ಕೃತ್ಯದ ವಿರುದ್ದ ಪ್ರತಿಭಟನೆಗೆ ಮುಂದಾಗಿದ್ದು ಆತನಿಗೆ ಅತ್ಯಂತ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಲಿದ್ದಾರೆ ಎಂದು ತಿಳಿದು ಬಂದಿದೆ.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ವೈ.ಟಿ.ಎಸ್‌.ಎಸ್ ನಿಂದ ರಾಧಾ ಕೃಷ್ಣ ವೇಷ ಸ್ಪರ್ಧೆ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ ವರದಿ, ಯಲ್ಲಾಪುರ : ಸ್ಥಳೀಯ ವೈ.ಟಿ.ಎಸ್.ಎಸ್ …

Leave a Reply

Your email address will not be published. Required fields are marked *