Breaking News

ವೈ.ಟಿ.ಎಸ್.ಎಸ್ ಕನ್ನಡ ಮಾದ್ಯಮ ಎಸ್.ಎಸ್.ಎಸ್.ಎಲ್.ಸಿ ಫಲಿತಾಂಶ : 89.74%.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ


ಯಲ್ಲಾಪುರ : 2024-25ನೇ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಸ್ಥಳೀಯ ವೈ.ಟಿ.ಎಸ್.ಎಸ್ ಸಂಯುಕ್ತ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗ ಕನ್ನಡ ಮಾಧ್ಯಮ 89.74% ಫಲಿತಾಂಶ ದಾಖಲಿಸಿದೆ. ಕನ್ನಡ ಮಾಧ್ಯಮದಲ್ಲಿ ಪರೀಕ್ಷೆಗೆ ಕುಳಿತ 78 ವಿದ್ಯಾರ್ಥಿಗಳಲ್ಲಿ 70 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.


ಪೂರ್ವಿ ಕುಮಾರ ಹೆಗಡೆ 625ಕ್ಕೆ 611 (97.76%) ಅಂಕ ಗಳಿಸಿ ಶಾಲೆಗೆ ಪ್ರಥಮ, ಅಕ್ಷಯ ಪಿ ಭಟ್ಟ 625ಕ್ಕೆ 609(97.44) ಅಂಕಗಳಿಸಿ ದ್ವಿತೀಯ ಹಾಗೂ ನಂದನ್ ಕಲ್ಮನೆ 625ಕ್ಕೆ 592(95.52%) ಅಂಕ ಗಳಿಸಿ ತೃತೀಯ ಸ್ಥಾನ ಗಳಿಸಿದ್ದಾರೆ.


ಈ ಸಾಧನೆ ಮಾಡಿದ ಎಲ್ಲಾ ವಿದ್ಯಾರ್ಥಿಗಳನ್ನು ಸಂಸ್ಥೆಯ ಅಧ್ಯಕ್ಷ ರವಿಕುಮಾರ ಲಕ್ಷ್ಮಣ ಶಾನಭಾಗ , ಉಪಾಧ್ಯಕ್ಷ ಪ್ರಸನ್ನ ಗುಡಿಗಾರ, ಕಾರ್ಯದರ್ಶಿ ರಾಜೇಂದ್ರಪ್ರಸಾದ ಭಟ್ಟ ಹಾಗೂ ಸಂಸ್ಥೆಯ ಎಲ್ಲಾ ಸದಸ್ಯರೂ ಪ್ರಾಂಶುಪಾಲ ಆನಂದ ಹೆಗಡೆ , ಹಿರಿಯ ಶಿಕ್ಷಕ ಎನ್.ಎಸ್.ಭಟ್ಟ ಮತ್ತು ಎಲ್ಲಾ ಉಪನ್ಯಾಸಕ/ಶಿಕ್ಷಕ, ಹಾಗೂ ಸಿಬ್ಬಂದಿ ವರ್ಗದವರೂ ಅಭಿನಂದಿಸಿದ್ದಾರೆ.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ವೈ.ಟಿ.ಎಸ್‌.ಎಸ್ ನಿಂದ ರಾಧಾ ಕೃಷ್ಣ ವೇಷ ಸ್ಪರ್ಧೆ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ ವರದಿ, ಯಲ್ಲಾಪುರ : ಸ್ಥಳೀಯ ವೈ.ಟಿ.ಎಸ್.ಎಸ್ …

Leave a Reply

Your email address will not be published. Required fields are marked *