Breaking News

ಯಲ್ಲಾಪುರ ಹೋಲಿ ರೋಜರಿ ಪ್ರೌಢಶಾಲಾ ಎಸ್.ಎಸ್.ಎಲ್.ಸಿ ಫಲಿತಾಂಶ 95%

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ


ಯಲ್ಲಾಪುರ : 2024-25 ನೆ ಸಾಲಿನ ಎಸ್‌.ಎಸ್‌‌.ಎಲ್.ಸಿ ಫಲಿತಾಂಶ ಪ್ರಕಟವಾಗಿದ್ದು ಪಟ್ಟಣದ ಹೋಲಿ ರೋಜರಿ ಪ್ರೌಢಶಾಲೆ 95% ಫಲಿತಾಂಶ ಪಡೆದಿದೆ.
ಕುಮಾರಿ ಸಿಂಚನ ವಿಷ್ಣು ದೇಸಾಯಿ 609/625 ಅಂಕವನ್ನು ಪಡೆದು ಶಾಲೆಗೆ ಪ್ರಥಮ ಸ್ಥಾನವನ್ನು ಪಡೆದಿದ್ದಾಳೆ. ಹಾಗೂ ತಾಲೂಕಿಗೆ ಉತ್ತಮವಾದ ಸ್ಥಾನವನ್ನು ಪಡೆದಿದ್ದಾಳೆ. ದ್ವಿತೀಯ ಸ್ಥಾನವನ್ನು ದರ್ಶನ್ ಸಾಗ್ರೇಕರ್ ಹಾಗೂ ತೃತೀಯ ಸ್ಥಾನವನ್ನು ಮನೀಶ್ ಕ್ವಾಡಗಿ ಈ ಗರಿಷ್ಠ ಫಲಿತಾಂಶವನ್ನು ಪಡೆದ ವಿದ್ಯಾರ್ಥಿನಿಯನ್ನು ಮುಖ್ಯ ಅಧ್ಯಾಪಕರು ಆಡಳಿತ ಮಂಡಳಿ ಹಾಗೂ ಶಿಕ್ಷಕರನ್ನು ಅವರು ಅಭಿನಂದಿಸಿದ್ದಾರೆ ಕನ್ನಡ ಇಂಗ್ಲಿಷ್ ಹಿಂದಿ ವಿಷಯದಲ್ಲಿ ನೂರಕ್ಕೆ ನೂರು ಅಂಕವನ್ನು ಪಡೆದು ಸಾಧನೆಗೈದಿದ್ದಾಳೆ ಭಾಷಣ ವಿಜ್ಞಾನ ಸಂಬಂಧಿ ಚಟುವಟಿಕೆಗಳಲ್ಲಿ ಜಿಲ್ಲಾಮಟ್ಟದಲ್ಲಿ ಭಾಗವಹಿಸಿದ ಕೀರ್ತಿಯನ್ನು ಹೊಂದಿದ್ದಾಳೆ. ಇವಳ ಮುಂದಿನ ವಿದ್ಯಾಭ್ಯಾಸಕ್ಕೆ ಶುಭವನ್ನು ಕೋರಿದ್ದಾರೆ.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಯಲ್ಲಾಪುರದ ಪಂಚಾಯತ ರಾಜ್ ಇಂಜಿನೀಯರಿಂಗ್ ಕಛೇರಿಯಲ್ಲಿ ಗಣೇಶೋತ್ಸವ – ಶ್ರೀಧರ ಸಂಜೀವ ಕರಕೆರ ಕೈಯಲ್ಲಿ ಅರಳಿದ ಕೂರ್ಮಾರೂಡ ಗಣಪ.

ಪ್ರತಿಧ್ವನಿ ಯಲ್ಲಾಪುರ : ಪಟ್ಟಣದಲ್ಲಿನ ಸಹಾಯಕ ಕಾರ್ಯನಿರ್ವಾಹಕ ಇಂಜಿನೀಯರ, ಪಂಚಾಯತ ರಾಜ್ ಇಂಜಿನೀಯರಿಂಗ್, ಉಪ ವಿಭಾಗ, ಯಲ್ಲಾಪುರ ಕಾರ್ಯಾಲಯದಲ್ಲಿ ಅಧಿಕಾರಿ …

Leave a Reply

Your email address will not be published. Required fields are marked *