Breaking News

ಯಲ್ಲಾಪುರದ ಪ್ರಮುಖ ಸರ್ಕಲ್ ಗಳಲ್ಲಿ ಶಿವಾಜಿ,ಅಂಬೇಡ್ಕರ್, ಬಸವೇಶ್ವರ ಪುತ್ಥಳಿ ಸ್ಥಾಪಿಸಲಿ – ರಜತ್ ಬದ್ದಿ ಆಗ್ರಹ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ


ಯಲ್ಲಾಪುರ : ಪಟ್ಟಣದ ಪ್ರಮುಖ ವೃತ್ತಗಳಲ್ಲಿ ದೇಶ ಕಂಡ ಮಹನೀಯರ ಮೂರ್ತಿಗಳನ್ನು ಸ್ಥಾಪಿಸುವಂತೆ ಭಾರತೀಯ ಜನತಾ ಪಕ್ಷದ ತಾಲೂಕು ಯುವಮೋರ್ಚ ಅಧ್ಯಕ್ಷ ರಜತ್ ರಾಜೇಂದ್ರ ಬದ್ದಿ ಪತ್ರಿಕಾ ಪ್ರಕಟಣೆ ಹೊರಡಿಸಿ ಸ್ಥಳೀಯ ಆಡಳಿತಕ್ಕೆ ಆಗ್ರಹಿಸಿದ್ದಾರೆ.


ಪ್ರತಿಷ್ಠಿತ ಬಸ್ ನಿಲ್ದಾಣದ ಸರ್ಕಲ್ ನಲ್ಲಿ ಸಂವಿಧಾನ ಶಿಲ್ಪಿ ಡಾ,ಬಾಬಾ ಸಾಹೇಬ್ ಅಂಬೇಡ್ಕರ್ ಪುತ್ಥಳಿ ಯನ್ನು ಸಂಕಲ್ಪ ಸಮೀಪದ ಶಿವಾಜಿ ವೃತ್ತದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಪುತ್ಥಳಿ ಯನ್ನು ಹಾಗು ಬಸವೇಶ್ವರ ವೃತ್ತದಲ್ಲಿ ಕಾಯಕವೇ ಕೈಲಾಸವೆಂದ ಜಗಜ್ಯೋತಿ ಬಸವೇಶ್ವರರ ಮೂರ್ತಿಯನ್ನು ಅನಾವರಣ ಮಾಡಬೇಕೆಂದು ಆಗ್ರಹಿಸಿದ್ದಾರೆ.

ಇತ್ತೀಚೆಗೆ ನಿಧನರಾದ ಜನಾನುರಾಗಿ ವ್ಯಕ್ತಿ ದಯಾಕಾರಂತ್ ಅವರ ನೆನಪಿಗಾಗಿ ಪೊಲೀಸ್ ವೃತ್ತಕ್ಕೆ ದಯಾಕಾರಂತ ವೃತ್ತ ಎಂದು ನಾಮಕರಣ ಮಾಡಬೇಕೆಂದು ಸಂಬಂದಿಸಿದ ಇಲಾಖೆಗಳಿಗೆ ಪತ್ರಿಕಾ ಪ್ರಕಟಣೆಯೊಂದಿಗೆ ಮನವಿ ಮಾಡಿದ್ದಾರೆ.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಯಲ್ಲಾಪುರದ ಪಂಚಾಯತ ರಾಜ್ ಇಂಜಿನೀಯರಿಂಗ್ ಕಛೇರಿಯಲ್ಲಿ ಗಣೇಶೋತ್ಸವ – ಶ್ರೀಧರ ಸಂಜೀವ ಕರಕೆರ ಕೈಯಲ್ಲಿ ಅರಳಿದ ಕೂರ್ಮಾರೂಡ ಗಣಪ.

ಪ್ರತಿಧ್ವನಿ ಯಲ್ಲಾಪುರ : ಪಟ್ಟಣದಲ್ಲಿನ ಸಹಾಯಕ ಕಾರ್ಯನಿರ್ವಾಹಕ ಇಂಜಿನೀಯರ, ಪಂಚಾಯತ ರಾಜ್ ಇಂಜಿನೀಯರಿಂಗ್, ಉಪ ವಿಭಾಗ, ಯಲ್ಲಾಪುರ ಕಾರ್ಯಾಲಯದಲ್ಲಿ ಅಧಿಕಾರಿ …

Leave a Reply

Your email address will not be published. Required fields are marked *