
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ
ಯಲ್ಲಾಪುರ : ತಾಲೂಕಿನ ಕಿರವತ್ತಿ ಸಮೀಪವಿರುವ ದೊಡ್ಲ ಹಾಲಿನ ಡೈರಿಯಲ್ಲಿ ಕಾರ್ಮಿಕ ದಿನಾಚರಣೆಯನ್ನು ತಾಲೂಕು ಕಾನೂನು ಸೇವಾ ಸಮಿತಿ , ವಕೀಲರ ಸಂಘ , ಕಾರ್ಮಿಕ ಇಲಾಖೆ, ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಮೇ.3ರಂದು ವಿಶ್ವ ಕಾರ್ಮಿಕರ ದಿನಾಚರಣೆಯನ್ನು ಆಚರಿಸಲಾಯಿತು.

ಸಿವಿಲ್ ನ್ಯಾಯಾಧೀಶರು ಮತ್ತು ಸದಸ್ಯ ಕಾರ್ಯದರ್ಶಿ ತಾಲೂಕು ಕಾನೂನು ಸೇವಾ ಸಮಿತಿಯ ಲಕ್ಷಿಬಾಯಿ ಬಸನಗೌಡ ಪಾಟೀಲ ಉದ್ಘಾಟಿಸಿ ಕಾರ್ಮಿಕ ದಿನಾಚರಣೆಯ ಮಹತ್ವ, ಕಾರ್ಮಿಕರಿಗಾಗಿಯೇ ಇರುವ ಕಾನೂನುಗಳ ನೆರವು ಮತ್ತು ಅರಿವಿನ ಬಗ್ಗೆ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ದೊಡ್ಲ ಡೈರಿ ಪ್ಲಾಂಟ್ ಮ್ಯಾನೇಜರ್ ಜಗದೀಶ್ವರ ವಹಿಸಿದ್ದರು.

ಈ ಸಂದರ್ಭದಲ್ಲಿ ಡೈರಿ ವತಿಯಿಂದ ನ್ಯಾಯಾಧೀಶರನ್ನು ಗೌರವಿಸಿ ಸನ್ಮಾನಿಸಲಾಯಿತು.

ಹಿರಿಯ ವಕೀಲ ಆರ್.ಕೆ ಭಟ್ಟ ಉಪನ್ಯಾಸ ನೀಡಿದರು.

ವಕೀಲರ ಸಂಘದ ಅಧ್ಯಕ್ಷೆ ಸರಸ್ವತಿ ಜಿ ಭಟ್ಟ, ಅಪರ ಸರ್ಕಾರಿ ವಕೀಲ ಎನ್.ಟಿ ಗಾಂವ್ಕರ್, ಸಹಾಯಕ ಸರ್ಕಾರಿ ಅಭಿಯೋಜಕಿ ಜೀನತ್‌ಬಾನು ಶೇಖ, ಶಿಕ್ಷಕ ಸುಧಾಕರ ನಾಯಕ, ಕಾರ್ಮಿಕ ಇಲಾಖೆ ಅಧಿಕಾರಿಗಳು, ಆರಕ್ಷಕ ಅಧಿಕಾರಿಗಳು, ಕಾನೂನು ಸೇವಾ ಸಮಿತಿ ಸದಸ್ಯರು, ಡೈರಿ ಸಿಬ್ಬಂದಿಗಳು, ಕಾರ್ಮಿಕರು ಉಪಸ್ಥಿತರಿದ್ದರು.

ಡೈರಿ ಅಸಿಸ್ಟೆಂಟ್ ಮ್ಯಾನೇಜರ್ ಪ್ರಕಾಶ ನಿರೂಪಿಸಿ ವಂದಿಸಿದರು.
Prathidvani Yellapura