


ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ
ಪ್ರತಿಧ್ವನಿ,ಯಲ್ಲಾಪುರ : ರಾಜ್ಯದ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು ಡಾ.ಕೆ.ಕಸ್ತೂರಿ ರಂಗನ್ ವರದಿ ಜಾರಿಗೆ ರಾಜ್ಯ ಸರಕಾರ ಬದ್ಧವಾಗಿದೆ ಎಂದು ಹೇಳಿಕೆ ನೀಡುವ ಮೂಲಕ ವರದಿಯನ್ನು ಅನುಷ್ಠಾನಗೊಳಿಸುವ ಬಗ್ಗೆ ಸುಳಿವು ನೀಡಿದ್ದರು.

ಇದಕ್ಕೆ ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಶಿವರಾಮ ಹೆಬ್ಬಾರ್ ಬಲವಾಗಿ ವಿರೋಧಿಸಿ ಹೋರಾಟದ ಎಚ್ಚರಿಕೆ ನೀಡಿ ಪತ್ರಿಕಾ ಹೇಳಿಕೆ ನೀಡಿದ್ದರು.

ಇದನ್ನು ಗಮನಿಸಿದ ಅರಣ್ಯ ಸಚಿವರು ಪರಿಶೀಲನೆ ನಡೆಸದೆ ತರಾತುರಿಯಲ್ಲಿ ಡಾ.ಕೆ.ಕಸ್ತೂರಿ ರಂಗನ್ ವರದಿಯನ್ನು ಜಾರಿಗೊಳಿಸುವುದಿಲ್ಲ ಎಂದು ನೀಡಿದ್ದು ಶಾಸಕ ಶಿವರಾಮ ಹೆಬ್ಬಾರ್ ಸಚಿವರ ಯೂಟನ್೯ ಹೇಳಿಕೆಯನ್ನು ಸ್ವಾಗತಿಸಿ ಅಭಿನಂದಿಸಿದ್ದಾರೆ.

ಪಶ್ಚಿಮ ಘಟ್ಟಗಳ ಪ್ರದೇಶಗಳನ್ನು ಒಳಪಡುವ ಶಾಸಕರು ಹಾಗೂ ಸಂಸದರನ್ನು ಒಳಗೊಂಡ ವಿಶೇಷ ಸಮಿತಿಯನ್ನು ರಚಿಸಿ ಪಶ್ಚಿಮ ಘಟ್ಟಗಳ ತಪ್ಪಲಿನಲ್ಲಿ ವಾಸಿಸುವ ಸಹಸ್ರಾರು ಬಡವರ ಜೀವನವನ್ನು ಅಸ್ತಿರಗೊಳಿಸುವ ಡಾ,ಕಸ್ತೂರಿ ರಂಗನ್ ವರದಿಯ ಸಾಧಕ – ಭಾದಕಗಳ ಕುರಿತು ಕೂಲಂಕುಷವಾಗಿ ಚರ್ಚಿಸಿ ಮುಂದಿನ ನಿರ್ಧಾರವನ್ನು ಕೈಗೊಳ್ಳುವಂತೆ ಸರಕಾರಕ್ಕೆ ಆಗ್ರಹಿಸುತ್ತೇನೆ.
ಅರಬೈಲ್ ಶಿವರಾಮ ಹೆಬ್ಬಾರ್
ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಶಾಸಕ






Prathidvani Yellapura