Breaking News

ಯಲ್ಲಾಪುರ ಪಟ್ಟಣ ಪಂಚಾಯತದಲ್ಲಿ ಸಿಬ್ಬಂದಿಗಳ ಕೊರತೆ – ಪೌರ ಕಾರ್ಮಿಕರ ಮಕ್ಕಳಿಗೆ ಉದ್ಯೋಗಾವಕಾಶ ಕಲ್ಪಿಸಲು  ಅಹಿಂದ ವೇದಿಕೆ ಆಗ್ರಹ.

ಪ್ರತಿಧ್ವನಿ ಯಲ್ಲಾಪುರ : ಪಟ್ಟಣ ಪಂಚಾಯತದಲ್ಲಿ ಸಿಬ್ಬಂದಿಗಳ ಕೊರತೆಯಿಂದ ಸಾರ್ವಜನಿಕ ಸೇವೆಗಳ ನಿರ್ವಹಣೆಗೆ ತೊಂದರೆಯಾಗುತ್ತಿರುವುದು ಈಗಾಗಲೆ ತಿಳಿದ ಸತ್ಯವಾಗಿದೆ. ಈ ಹಿನ್ನೆಲೆಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಅಗತ್ಯ ಸಿಬ್ಬಂದಿಯನ್ನು ನೇಮಕ ಮಾಡಿಕೊಳ್ಳುವ ಅವಕಾಶ ಪಟ್ಟಣ ಪಂಚಾಯತ್ ಗೆ ಸಿಕ್ಕರೆ ಈ ವೇಳೆ ಹಲವು ವರ್ಷಗಳಿಂದ ತಮ್ಮ ಇಲಾಖೆ ಅಡಿಯಲ್ಲೆ ಸೇವೆ ಸಲ್ಲಿಸುತ್ತಿರುವ ಪೌರ ಕಾರ್ಮಿಕರ ಮಕ್ಕಳಿಗೆ ಉದ್ಯೋಗದಲ್ಲಿ ಮೊದಲ ಆದ್ಯತೆ ನೀಡಬೇಕು ಎಂಬುದು ಸಾರ್ವಜನಿಕರ ಮತ್ತು ಅಖಿಲ ಕರ್ನಾಟಕ ಅಹಿಂದ ವೇದಿಕೆ ಆಗ್ರಹವಾಗಿದೆ ಎಂದು ವೇದಿಕೆ ಸ್ಥಾಪಕ ಅಧ್ಯಕ್ಷ ದ್ಯಾಮಣ್ಣ ಬೋವಿ ವಡ್ಡರ್ ಪ್ರತಿಧ್ವನಿಗೆ ಪ್ರತಿಕ್ರಿಯಿಸಿದ್ದಾರೆ.

ಇದರಿಂದ ಸಿಬ್ಬಂದಿಗಳ ಕೊರತೆಯನ್ನು ನಿವಾರಿಸುವುದರ ಜೊತೆಗೆ ತಮ್ಮಲ್ಲೆ ಹಲವು ವರ್ಷಗಳ ಕಾಲ ಪೌರಕಾರ್ಮಿಕರಾಗಿ ಕೆಲಸ ಮಾಡುತ್ತಿರುವ ಪೌರ ಕಾರ್ಮಿಕರ ಕುಟುಂಬಗಳಿಗೂ ಆರ್ಥಿಕವಾಗಿ ನೆರವಾಗಲಿದೆ. ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಸೂಕ್ತ ಕ್ರಮ ಕೈಗೊಳ್ಳಬೇಕಿದೆ.
ಪಟ್ಟಣದ ವ್ಯಾಪ್ತಿ ದೊಡ್ಡದಾಗಿದ್ದು ತ್ಯಾಜ್ಯ ನಿರ್ವಹಣೆ, ವಾಹನಗಳ ಚಾಲನೆ,ಕಸ ನಿರ್ವಹಣಾ ಘಟಕದ ವ್ಯವಸ್ಥೆ, ಹಾಗು ಕಚೇರಿಯ ಕೆಲಸಗಳಿಗೆ ಹೆಚ್ಚಿನ ಸಿಬ್ಬಂದಿ ಅವಶ್ಯಕತೆ ಇದ್ದು ಈ ಎಲ್ಲಾ ಕೆಲಸಗಳಿಗೆ ಬಹಳಷ್ಟು ವರ್ಷಗಳಿಂದ ಊರಿನ ಸ್ಚಚ್ಚತೆಗಾಗಿ ತಮ್ಮ ಪ್ರಾಣವನ್ನೇ ಪಣವಾಗಿಟ್ಟು ಕೆಲಸ ನಿರ್ವಹಿಸುತ್ತಾ ಬಂದಿರುವ ಹಾಲಿ ಕರ್ತವ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕ ಕುಟುಂಬದ ಮಕ್ಕಳಿಗೆ ಅರ್ಹತೆ ಇದ್ದಲ್ಲಿ ಮೊದಲ ಆದ್ಯತೆ ಆದಾರದಲ್ಲಿ ಕೆಲಸ ನೀಡುವುದು ಪ್ರತಿಯೊಬ್ಬ ಸಾರ್ವಜನಿಕರ ಕರ್ತವ್ಯ ಆಗಿದೆ.

ಯಲ್ಲಾಪುರ ಪಟ್ಟಣ ಪಂಚಾಯತದಲ್ಲಿ ಸಿಬ್ಬಂದಿ ಕೊರತೆ ನೀಗಿಸಲು ಸ್ಥಳೀಯ ಆಡಳಿತ ನಿರ್ಧಾರ ಕೈಗೊಂಡು ಹೊರಗುತ್ತಿಗೆ ಆದಾರದಲ್ಲಿ ಕೆಲಸಕ್ಕೆ ಜನರನ್ನು ನೇಮಿಸಿಕೊಳ್ಳಲು ಮುಂದಾದರೆ ಹಾಲಿ ಕರ್ತವ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕ ಮಕ್ಕಳಿಗೆ ಅರ್ಹತೆ ಆದಾರದಲ್ಲಿ ಉದ್ಯೋಗ ನೀಡಬೇಕಿದೆ, ಈ ಸಂಬಂದ ಸ್ಥಳೀಯ ಶಾಸಕರಿಗೆ ಮತ್ತು ಹಿರಿಯ ಅಧಿಕಾರಿಗಳಿಗೆ ಸಂಘಟನೆ ಅಡಿಯಲ್ಲಿ ಮನವಿ ಮಾಡಲಾಗುವುದು.  ದ್ಯಾಮಣ್ಣ ಬೋವಿ ವಡ್ಡರ್, ಅಖಿಲ ಕರ್ನಾಟಕ ಅಹಿಂದ ಸಂಘಟನೆ ಸ್ಥಾಪಕಾಧ್ಯಕ್ಷ,ಯಲ್ಲಾಪುರ

ಉತ್ತಮ ಆರೋಗ್ಯ ಮಾಹಿತಿಯ ವಿಡಿಯೋ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಯಲ್ಲಾಪುರ ಪಟ್ಟಣ ಸಮೀಪದ ಅರಣ್ಯದಲ್ಲಿ ಶ್ರೀಗಂಧ ಚೋರರ ಕರಾಮತ್ತು ಗಂಧದ ಮರ ಕಡಿದ ಕಳ್ಳರು.

ಪ್ರತಿಧ್ವನಿ ಯಲ್ಲಾಪುರ : ಪಟ್ಟಣದ ಸಮೀಪದಲ್ಲಿರುವ ನಾರಾಯಣಪುರ ಅರಣ್ಯ ಪ್ರದೇಶದಲ್ಲಿ ಶ್ರೀಗಂಧದ ಕಳ್ಳರು ತಮ್ಮ ಕೈಚಳಕ ತೋರಿದ್ದು ಗುಣಮಟ್ಟದ ಮತ್ತು …

Leave a Reply

Your email address will not be published. Required fields are marked *