Breaking News

ವೈಟಿಎಸ್ಎಸ್ ಅಧ್ಯಕ್ಷ ರವಿಕುಮಾರ್ ಶಾನಬಾಗ್ ಅವರಿಗೆ ಮಾತೃವಿಯೋಗ

ಪ್ರತಿಧ್ವನಿ ಯಲ್ಲಾಪುರ : ತಾಲೂಕಿನ ಪ್ರತಿಷ್ಠಿತ ವಿದ್ಯಾ ಸಂಸ್ಥೆ ವೈಟಿಎಸ್ಎಸ್ ಅಧ್ಯಕ್ಷ ರವಿಕುಮಾರ್ ಲಕ್ಷ್ಮಣ್ ಶಾನಬಾಗ್ ಅವರ ಮಾತೃಶ್ರೀ ಯವರಾದ ಸವಿತಾ ಲಕ್ಷ್ಮಣ ಶಾನಬಾಗ್ ಅವರು ರವಿವಾರ ತಮ್ಮ ಸ್ವಗೃಹದಲ್ಲಿ ನಿಧನರಾಗಿರುತ್ತಾರೆ.

ಮೃತರಿಗೆ 88 ವರ್ಷ ವಯಸ್ಸಾಗಿದ್ದು ವಯೋ ಸಹಜದಿಂದ ಇಹಲೋಕ ತ್ಯಜಿಸಿರುತ್ತಾರೆ. ಮೂವರು ಗಂಡು ಒಂದು ಹೆಣ್ಣು ಮಗಳು ಹಾಗು ಅಪಾರ ಬಂಧು ಬಳಗದವರನ್ನು ಅಗಲಿದ್ದು ಸಂಜೆ ವೇಳೆಗೆ ಹುಬ್ಬಳ್ಳಿ ರಸ್ತೆಯಲ್ಲಿರುವ ಹಿಂದುಗಳ ಚಿತಾಗಾರದಲ್ಲಿ ಸಕಲ ಕುಟುಂಬದ ವಿಧಿ ವಿಧಾನಗಳೊಂದಿಗೆ ಅಂತ್ಯಕ್ರಿಯೆ ನೆರವೇರಲಿದೆ.

ಸಮಾಜದ ಮುಖಂಡರು, ಜನಪ್ರತಿನಿಧಿಗಳು, ಸಂಘ ಸಂಸ್ಥೆಗಳ ಪ್ರಮುಖರು, ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ಪ್ರಮುಖರು ಪ್ರಾಂಶುಪಾಲರು ಹಾಗು ಶಿಕ್ಷಕ ಶಿಕ್ಷಕೇತರ ಸಿಬ್ಬಂದಿಗಳು ಸಂತಾಪ ಸೂಚಿಸಿದ್ದಾರೆ.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಪರಿಷತ್ ಕಲಾಪದಲ್ಲಿ ಪ್ರತಿಧ್ವನಿಸಿದ ಯಲ್ಲಾಪುರ ಕಾಳಮ್ಮ ನಗರ ಕೆಲವು  ನಿವಾಸಿಗಳಿಗೆ ವಿದ್ಯುತ್ ನೀಡದ ಸಮಸ್ಯೆ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಯಲ್ಲಾಪುರ : ಪಟ್ಟಣದ ಕಾಳಮ್ಮನಗರದ ಮುರಾರ್ಜಿ ವಸತಿ ಶಾಲೆ …

Leave a Reply

Your email address will not be published. Required fields are marked *