Breaking News

ಯಲ್ಲಾಪುರ ಪಟ್ಟಣದ ರವೀಂದ್ರ ನಗರ ಕಾಂಗ್ರೆಸ್ ಮುಖಂಡರು ಬಿಜೆಪಿ ಸೇರ್ಪಡೆ

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ


ಪ್ರತಿಧ್ವನಿ,ಯಲ್ಲಾಪುರ : ಪಟ್ಟಣದ ರವೀಂದ್ರನಗರದ ಕಾಂಗ್ರೆಸ್ ಮುಖಂಡರಾದ ಶರತ್ ನಾಯ್ಕ, ಮಹೇಶ್ ನಾಯ್ಕ ಹಾಗೂ ಶಂಕರ್ ಅವರು ಸಚಿವರಾದ ಶಿವರಾಮ ಹೆಬ್ಬಾರ್ ಅವರ ಅಭಿವೃದ್ಧಿಪರವಾದ ಕಾರ್ಯಕ್ರಮಗಳನ್ನು ಮೆಚ್ಚಿ ಭಾರತೀಯ ಜನತಾ ಪಕ್ಷವನ್ನು ಸೇರ್ಪಡೆಗೊಂಡರು.
ಕಾAಗ್ರೆಸ್ ತೊರೆದು ಭಾರತೀಯ ಜನತಾ ಪಕ್ಷವನ್ನು ಸೇರ್ಪಡೆಗೊಂಡ ಕಾರ್ಯಕರ್ತರುಗಳಿಗೆ ಯುವ ನಾಯಕರಾದ ವಿವೇಕ್ ಹೆಬ್ಬಾರ್ ಅವರು ಪಕ್ಷದ ಶಾಲು ಹಾಕಿ ಅತ್ಯಂತ ಆತ್ಮೀಯತೆಯಿಂದ ಪಕ್ಷಕ್ಕೆ ಬರಮಾಡಿಕೊಂಡು ಪಕ್ಷದ ಗೆಲುವಿಗೆ ಶ್ರಮಿಸುವಂತೆ ಕರೆ ನೀಡಿದರು.
ಈ ಸಂದರ್ಭದಲ್ಲಿ ಮಂಡಲಾಧ್ಯಕ್ಷ ಗೋಪಾಲಕೃಷ್ಣ ಗಾಂವ್ಕರ್, ಮಹಾಶಕ್ತಿ ಕೇಂದ್ರದ ಅಧ್ಯಕ್ಷ ರಾಮು ನಾಯ್ಕ, ಪ.ಪಂ ಸದಸ್ಯ ಸೋಮೇಶ್ವರ ನಾಯ್ಕ, ಬೂತ್ ಅಧ್ಯಕ್ಷ ಬಾಬು ದೇಸಾಯಿ, ಪ್ರಮುಖರಾದ ಸುಜು ಮರಾಠಿ, ಪ.ಪಂ ಅಧ್ಯಕ್ಷೆ ಸುನಂದಾ ದಾಸ್, ಉಪಾಧ್ಯಕ್ಷೆ ಶ್ಯಾಮಲಿ ಪಾಟಣಕರ್ ಸೇರಿದಂತೆ ಪಕ್ಷದ ವಿವಿಧಸ್ಥರದ ಪದಾಧಿಕಾರಿಗಳು ಕಾರ್ಯಕರ್ತರು ಉಪಸ್ಥಿತರಿದ್ದರು.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ವೈ.ಟಿ.ಎಸ್‌.ಎಸ್ ನಿಂದ ರಾಧಾ ಕೃಷ್ಣ ವೇಷ ಸ್ಪರ್ಧೆ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ ವರದಿ, ಯಲ್ಲಾಪುರ : ಸ್ಥಳೀಯ ವೈ.ಟಿ.ಎಸ್.ಎಸ್ …

Leave a Reply

Your email address will not be published. Required fields are marked *