Breaking News

ಸಂಪನ್ನಗೊಂಡ ಯಲ್ಲಾಪುರ ಗ್ರಾಮದೇವಿ ವಾರ್ಷಿಕ ವರ್ಧಂತಿ ಉತ್ಸವ

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ

ಪ್ರತಿಧ್ವನಿ,ಯಲ್ಲಾಪುರ : ತಾಲೂಕಿನ ಶಕ್ತಿಪೀಠ ಯಲ್ಲಾಪುರ ಗ್ರಾಮದೇವಿ ಸಾನಿಧ್ಯದಲ್ಲಿ 28 ನೇ ವರ್ಷದ ವಾರ್ಷಿಕ ವರ್ಧಂತಿ ಉತ್ಸವ ಪೂಜಾ ವಿಧಿ ವಿಧಾನಗಳೊಂದಿಗೆ ಸಾಂಗವಾಗಿ ನೆರವೇರಿತು.


ಶಕ್ತಿ ಮಾತೆಯರಾದ ಕಾಳಮ್ಮ-ದುರ್ಗಮ್ಮ ಗ್ರಾಮದೇವಿ ದೇವಾಲಯದ ವಾರ್ಷಿಕ ವರ್ಧಂತಿ ಉತ್ಸವ ಆಡಳಿತ ಮಂಡಳಿಯ ಪ್ರಮುಖರಾದ ರಾಜೇಂದ್ರಪ್ರಸಾದ ಬಿ ಭಟ್ಟ, ಮನು ಹೆಗಡೆ, ನಾಗೇಶ್ ಭಾಗ್ವತ ನೇತೃತ್ವದಲ್ಲಿ ವಿಶೇಷ ಪೂಜೆ ನೆರವೇರಿಸಲಾಯಿತು.

ನಂತರ ದೇವಿಯ ಸಾನಿದ್ಯದಲ್ಲಿ ಅನ್ನ ಸಂತರ್ಪಣಾ ಕಾರ್ಯಕ್ರಮ ಜರುಗಿತು.

ನೂರಾರು ನಾಗರೀಕರು ದೇವಿಯ ದರ್ಶನ ಪಡೆದು ಪೂಜೆಯಲ್ಲಿ ಪಾಲ್ಗೊಂಡು ಅನ್ನ ಪ್ರಸಾದ ಸ್ವೀಕರಿಸಿ ಕೃತಾರ್ಥರಾದರು.

ಉತ್ತಮ ವಿದ್ಯಾಸಬ್ಯಾಸ ಉತ್ತಮ ಸಂಸ್ಕಾರಕ್ಕಾಗಿ ನಿಮ್ಮ ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ ತಾಲೂಕಿನ ಪ್ರತಿ ಮನೆಯ ವಿದ್ಯಾ ಸಂಸ್ಥೆಯಾಗಿರುವ ವೈಟಿಎಸ್ಎಸ್ ಗೆ ನಿಮ್ಮ ಮಕ್ಕಳನ್ನು ಸೇರಿಸಿ

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಹರಳಯ್ಯಸ್ತ್ರೀ ಶಕ್ತಿ ಸಂಘದಿಂದ ಅಂಬೇಡ್ಕರ್ ಜಯಂತಿ  ಆಚರಣೆ.

ಪ್ರತಿಧ್ವನಿ ಯಲ್ಲಾಪುರ :  14.4.2026 ರಂದು ಶಾರದಾಗಲ್ಲಿ ಅಂಬೇಡ್ಕರ್ ಭವನದಲ್ಲಿ ಹರಳಯ್ಯಸ್ತ್ರೀ ಶಕ್ತಿ ಸಂಘದಿಂದ ಅಂಬೇಡ್ಕರ್ ಜಯಂತಿ ಆಚರಿಸಲಾಯಿತು.    …

Leave a Reply

Your email address will not be published. Required fields are marked *